Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 14:11 - ಕನ್ನಡ ಸತ್ಯವೇದವು C.L. Bible (BSI)

11 ಫಿಲಿಷ್ಟಿಯನು ಅವನನ್ನು ನೋಡಿದಾಗ ತಮ್ಮ ಮಧ್ಯದಿಂದ ಮೂವತ್ತು ಮಂದಿ ‘ಆಪ್ತರನ್ನು’ ಆರಿಸಿ ಅವನ ಜೊತೆಯಲ್ಲಿ ಇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಅವನನ್ನು ನೋಡಿದಾಗ ತಮ್ಮಲ್ಲಿಂದ ಮೂವತ್ತು ಮಂದಿಯನ್ನು ಆರಿಸಿ ಅವನ ಜೊತೆಯಲ್ಲಿರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ಅವನನ್ನು ನೋಡಿದಾಗ ತಮ್ಮಲ್ಲಿಂದ ಮೂವತ್ತು ಮಂದಿಯನ್ನು ಆರಿಸಿ ಅವನ ಜೊತೆಯಲ್ಲಿರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವನು ಔತಣದ ಏರ್ಪಾಟು ಮಾಡಿದ್ದನ್ನು ಕಂಡು ಫಿಲಿಷ್ಟಿಯರು ಅವನ ಸಂಗಡ ಇರುವುದಕ್ಕೆ ಮೂವತ್ತು ಜನರನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ಅವನನ್ನು ಕಂಡಾಗ, ಅವನ ಸಂಗಡ ಇರುವುದಕ್ಕೆ ಮೂವತ್ತು ಮಂದಿ ಸಂಗಡಿಗರನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 14:11
8 ತಿಳಿವುಗಳ ಹೋಲಿಕೆ  

ಮದುಮಗಳು ಮದುಮಗನಿಗೆ ಸೇರಿದವಳು. ಮದುಮಗನ ಗೆಳೆಯನಾದರೋ ಪಕ್ಕದಲ್ಲಿದ್ದು ಮದುಮಗನ ಕರೆಗೆ ಕಿವಿಗೊಡುತ್ತಾನೆ; ಆತನ ಸ್ವರ ಕೇಳಿ ಹರ್ಷಿಸುತ್ತಾನೆ. ಇಂಥ ಆನಂದದಿಂದ ನಾನೀಗ ಭರಿತನಾಗಿದ್ದೇನೆ.


ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದುಃಖಪಡುವುದುಂಟೇ? ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು; ಆಗ ಅವರು ಉಪವಾಸ ಮಾಡುವರು.


ಸಮುವೇಲನು ಎಲೀಯಾಬನನ್ನು ನೋಡಿ ತನ್ನಷ್ಟಕ್ಕೆ, “ನಿಶ್ಚಯವಾಗಿ ಸರ್ವೇಶ್ವರ ಅಭಿಷೇಕಕ್ಕೆ ಆರಿಸಿಕೊಂಡವನು ನನ್ನ ಮುಂದೆಯೇ ಇದ್ದಾನೆ,” ಎಂದುಕೊಂಡನು.


ಅವರು ತಟ್ಟನೆ ಹೋಗಿ ಅವನನ್ನು ಹಿಡಿದುಕೊಂಡು ಬಂದು ಜನರ ಮಧ್ಯೆ ನಿಲ್ಲಿಸಿದರು. ಎಲ್ಲ ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಬಹು ಎತ್ತರದ ವ್ಯಕ್ತಿ ಅವನಾಗಿದ್ದನು.


ಸಂಸೋನನ ತಂದೆ ಹೆಣ್ಣಿನ ಮನೆಗೆ ಬಂದ ಮೇಲೆ ಸಂಸೋನನು ಯೌವನಸ್ಥರ ಪದ್ಧತಿಯ ಪ್ರಕಾರ ಅಲ್ಲಿ ಔತಣವನ್ನು ಸಿದ್ಧಮಾಡಿಸಿದನು.


ಸಂಸೋನನು ಇವರಿಗೆ, “ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಡಿಸಿ ಅದರ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷ ವಸ್ತ್ರಗಳನ್ನೂ ಕೊಡುತ್ತೇನೆ.


ನನ್ನ ಪ್ರಿಯಳೇ, ನನ್ನ ವಧುವೇ, ಇದೋ ನಾ ಬಂದಿರುವೆ ನನ್ನ ತೋಟದೊಳಗೆ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ. ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ; ಪ್ರಿಯರೇ, ಕುಡಿಯಿರಿ ತೃಪ್ತಿಯಾಗುವಷ್ಟು ಪಾನಮಾಡಿರಿ. ನಲ್ಲೆ :


ಬೆಸ್ತರು ಅದನು ವ್ಯಾಪಾರಕ್ಕೆ ಇಡುವರೇ? ಪಾಲುಮಾಡಿಕೊಂಡು ಅದನು ವರ್ತಕರಿಗೆ ಮಾರುವರೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು