Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 14:14 - ಕನ್ನಡ ಸತ್ಯವೇದವು C.L. Bible (BSI)

14 ಆಗ ಅವನು, “ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು ಕ್ರೂರವಾದದ್ದರಿಂದ ಮಧುರವಾದದ್ದು ಸಿಕ್ಕಿತು” ಎಂದು ಹೇಳಿದನು. ಮೂರು ದಿನಗಳಾದರೂ ಅವರು ಅದನ್ನು ಬಿಡಿಸಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಅವನು, “ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು; ಕ್ರೂರವಾದದ್ದರಿಂದ ಮಧುರವಾದದ್ದು ಹುಟ್ಟಿತು” ಎಂದು ಹೇಳಿದನು. ಮೂರು ದಿನಗಳಾದರೂ ಅವರು ಅದನ್ನು ಬಿಡಿಸಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಅವನು - ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು; ಕ್ರೂರವಾದದ್ದರಿಂದ ಮಧುರವಾದದ್ದು ಸಿಕ್ಕಿತು ಎಂದು ಹೇಳಿದನು. ಮೂರು ದಿನಗಳಾದರೂ ಅವರು ಅದನ್ನು ಬಿಚ್ಚಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸಂಸೋನನು ಅವರಿಗೆ ಈ ಒಗಟನ್ನು ಹೇಳಿದನು: “ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು. ಕ್ರೂರವಾದದ್ದರಿಂದ ಮಧುರವಾದದ್ದು ಸಿಕ್ಕಿತು.” ಆ ಮೂವತ್ತು ಜನರು ಮೂರು ದಿನಗಳವರೆಗೆ ಒಗಟಿನ ಅರ್ಥವನ್ನು ಕಂಡುಹಿಡಿಯಲು ಪ್ರಯತ್ನ ಮಾಡಿದರು. ಆದರೆ ಅವರಿಂದ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಅವನು ಅವರಿಗೆ ಹೇಳಿದ್ದೇನೆಂದರೆ, “ತಿಂದು ಬಿಡುವಂಥದ್ದರಿಂದ ತಿನ್ನತಕ್ಕದ್ದು ಹೊರಟಿತು. ಬಲಿಷ್ಠವಾದದ್ದರಿಂದ ಸಿಹಿಯು ಹೊರಟಿತು.” ಒಗಟನ್ನು ಅವರು ಮೂರು ದಿವಸ ಬಿಡಿಸಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 14:14
20 ತಿಳಿವುಗಳ ಹೋಲಿಕೆ  

ಕಾಗೆಗಳು ಅವನಿಗೆ ಬೆಳಿಗ್ಗೆ ಹಾಗು ಸಂಜೆ ರೊಟ್ಟಿ, ಮಾಂಸ, ಇವುಗಳನ್ನು ತಿನ್ನಲು ತಂದುಕೊಡುತ್ತಿದ್ದವು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.


ನಮ್ಮನ್ನು ಪ್ರೀತಿಸಿದ ಯೇಸುಕ್ರಿಸ್ತರ ಮುಖಾಂತರ ಇವೆಲ್ಲವುಗಳಲ್ಲಿಯೂ ನಾವು ಪೂರ್ಣ ಜಯಶಾಲಿಗಳಾಗುತ್ತೇವೆ.


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಅಲ್ಪವಾದುವು, ಕ್ಷಣಿಕವಾದುವು. ಅವುಗಳಿಂದ ಲಭಿಸುವ ಮಹಿಮೆಯಾದರೋ ಅಪಾರವಾದುದು, ಅನಂತವಾದುದು.


ಆ ಅಧಿಕಾರಿ ಪ್ರತ್ಯುತ್ತರವಾಗಿ, “ಯಾರಾದರೂ ವಿವರಿಸಿದ ಹೊರತು ಇದು ನನಗೆ ಅರ್ಥವಾಗುವುದಾದರೂ ಹೇಗೆ?” ಎಂದನು. ರಥವನ್ನು ಹತ್ತಿ ಕುಳಿತುಕೊಳ್ಳುವಂತೆ ಫಿಲಿಪ್ಪನನ್ನು ಆಹ್ವಾನಿಸಿದನು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ.


ಜ್ಞಾನವು ಮೂರ್ಖನಿಗೆ ಎಟುಕದಷ್ಟು ಎತ್ತರ; ನ್ಯಾಯಸ್ಥಾನದಲ್ಲಿ ಅವನು ಬಾಯಿಬಿಡಲಾರ.


ಯೆಹೋಷಾಫಾಟನೂ ಅವನ ಜನರೂ ಸುಲಿಗೆಮಾಡುವುದಕ್ಕಾಗಿ ಅಲ್ಲಿಗೆ ಹೋದರು. ಅವರಿಗೆ ದ್ರವ್ಯ, ವಸ್ತ್ರ, ಶ್ರೇಷ್ಠಾಯುಧ, ಇವುಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟನ್ನೂ ಸುಲಿದುಕೊಂಡರು. ಕೊಳ್ಳೆಯ ಮೊತ್ತ ಹೆಚ್ಚಾಗಿದ್ದುದರಿಂದ ಅವರು ಮೂರು ದಿನಗಳವರೆಗೂ ಕೂಡಿಸುತ್ತಿದ್ದರು.


ದೂತರು ಬಂದು ಯೆಹೋಷಾಫಾಟನಿಗೆ, “ಮಹಾಸೈನ್ಯ ಸಮೂಹವೊಂದು ನಿನಗೆ ವಿರೋಧವಾಗಿ ಲವಣಸಮುದ್ರದ ಆಚೆಯಲ್ಲಿರುವ ಆರಾಮ್ ಪ್ರಾಂತ್ಯದ ಕಡೆಯಿಂದ ಬಂದು ಈಗ ಏಂಗೆದಿಯೆನಿಸಿಕೊಳ್ಳುವ ಹಚೆಚೋನ್‍ತಾಮಾರಿನಲ್ಲಿ ಇರುತ್ತಾರೆ,” ಎಂದು ತಿಳಿಸಿದರು.


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ನಿಮ್ಮಿಂದ ಆಗದೆಹೋದರೆ ನೀವು ನನಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡಬೇಕು” ಎನ್ನಲು ಅವರು ಅವನಿಗೆ, “ನಿನ್ನ ಒಗಟನ್ನು ಹೇಳು, ಕೇಳೋಣ,” ಎಂದು ಹೇಳಿದರು.


ಅವರು ಏಳನೆಯ ದಿನದಲ್ಲಿ ಸಂಸೋನನ ಹೆಂಡತಿಗೆ, “ನಿನ್ನ ಗಂಡನನ್ನು ಮರುಳುಗೊಳಿಸಿ ಅವನಿಂದ ಒಗಟಿನ ಅರ್ಥವನ್ನು ತಿಳಿದುಕೋ; ಇಲ್ಲವಾದರೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯವರನ್ನೂ ಬೆಂಕಿಯಿಂದ ಸುಟ್ಟುಬಿಡುತ್ತೇವೆ; ನಮಗಿರುವುದೆಲ್ಲವನ್ನೂ ಕಸಿದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ಕರಿಸಿದಿರೋ?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು