Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 14:20 - ಕನ್ನಡ ಸತ್ಯವೇದವು C.L. Bible (BSI)

20 ಇತ್ತ ಸಂಸೋನನ ಹೆಂಡತಿಯನ್ನು ಅವನ ಆಪ್ತರೊಬ್ಬನಿಗೆ ಮದುವೆ ಮಾಡಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇತ್ತ ಸಂಸೋನನ ಹೆಂಡತಿಯನ್ನು ಆ ಮೂವತ್ತು ಮಂದಿಯಲ್ಲಿ ಅವನಿಗೆ ಸ್ನೇಹಿತನಾಗಿದ್ದವನಿಗೆ ಮದುವೆಮಾಡಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇತ್ತ ಸಂಸೋನನ ಹೆಂಡತಿಯನ್ನು ಆ [ಮೂವತ್ತು] ಮಂದಿಯಲ್ಲಿ ಅವನಿಗೆ ಸ್ನೇಹಿತನಾಗಿದ್ದವನಿಗೆ ಮದುವೆಮಾಡಿ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಸಂಸೋನನು ತನ್ನ ಹೆಂಡತಿಯನ್ನು ಕರೆದುಕೊಂಡು ಹೋಗಲಿಲ್ಲ. ಆಕೆಯ ತಂದೆ ಮೂವತ್ತು ಜನರಲ್ಲಿದ್ದ ಉತ್ತಮ ಪುರುಷನೊಬ್ಬನಿಗೆ ಅವಳನ್ನು ಕೊಟ್ಟು ಮದುವೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವನು ಕೋಪಗೊಂಡು ತನ್ನ ತಂದೆಯ ಮನೆಗೆ ಹೊರಟುಹೋದನು. ಆದರೆ ಸಂಸೋನನ ಹೆಂಡತಿಯನ್ನು ಅವನ ಸಂಗಡ ಸ್ನೇಹಿತನಾಗಿದ್ದವನಿಗೆ ಮದುವೆ ಮಾಡಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 14:20
10 ತಿಳಿವುಗಳ ಹೋಲಿಕೆ  

ನೀನು ನಿಜವಾಗಿ ಆಕೆಯನ್ನು ದ್ವೇಷಮಾಡುತ್ತೀಯೆಂದು ನಿನ್ನ ಆಪ್ತರೊಬ್ಬನಿಗೆ ಮದುವೆಮಾಡಿಕೊಟ್ಟೆ. ಆಕೆಯ ತಂಗಿ ಆಕೆಗಿಂತ ಸುಂದರಿಯಾಗಿದ್ದಾಳೆ; ಈಕೆ ನಿನಗೆ ಇರಲಿ,” ಎಂದನು.


ಮದುಮಗಳು ಮದುಮಗನಿಗೆ ಸೇರಿದವಳು. ಮದುಮಗನ ಗೆಳೆಯನಾದರೋ ಪಕ್ಕದಲ್ಲಿದ್ದು ಮದುಮಗನ ಕರೆಗೆ ಕಿವಿಗೊಡುತ್ತಾನೆ; ಆತನ ಸ್ವರ ಕೇಳಿ ಹರ್ಷಿಸುತ್ತಾನೆ. ಇಂಥ ಆನಂದದಿಂದ ನಾನೀಗ ಭರಿತನಾಗಿದ್ದೇನೆ.


“ನಾನು ನಿಮ್ಮೆಲ್ಲರನ್ನೂ ಕುರಿತು ಹೀಗೆ ಹೇಳುತ್ತಾ ಇಲ್ಲ. ಯಾರನ್ನು ನಾನು ಆರಿಸಿಕೊಂಡಿದ್ದೇನೆಂಬುದು ನನಗೆ ಗೊತ್ತು. ಆದರೆ ‘ನನ್ನೊಡನೆ ಉಂಡವನೇ ನನಗೆ ದ್ರೋಹ ಬಗೆದನು’ ಎಂಬುದಾಗಿ ಪವಿತ್ರಗ್ರಂಥದಲ್ಲಿ ಬರೆದಿದೆ. ಆ ಮಾತು ಈಡೇರಬೇಕಾಗಿದೆ.


ನೆರೆಯವನನ್ನು ನಂಬಬೇಡ, ಆಪ್ತನಲ್ಲಿ ಭರವಸೆ ಇಡಬೇಡ. ನಿನ್ನೊಡನೆ ಮಲಗುವ ಮಡದಿಯೊಂದಿಗೂ ಬಾಯಿಬಿಡಬೇಡ.


ಎಲ್ಲರು ತಂತಮ್ಮ ಗೆಳೆಯರಿಗೆ ಮೋಸಮಾಡುತ್ತಾರೆ ಸತ್ಯವನ್ನು ನುಡಿವುದೇ ಇಲ್ಲ; ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ ಆಯಾಸವಾಗುವ ಮಟ್ಟಿಗೂ ಕೆಡಕನ್ನು ಮಾಡುತ್ತಿದ್ದಾರೆ.


ಫಿಲಿಷ್ಟಿಯರು ಇದನ್ನು ಮಾಡಿದವರಾರೆಂದು ವಿಚಾರಿಸುವಲ್ಲಿ ತಿಮ್ನಾ ಊರಿನವನ ಅಳಿಯನಾದ ಸಂಸೋನನೆಂದು ಗೊತ್ತಾಯಿತು. ಅವನ ಮಾವ ಅವನ ಹೆಂಡತಿಯನ್ನು ಬೇರೊಬ್ಬನಿಗೆ ಕೊಟ್ಟುಬಿಟ್ಟದ್ದೇ ಇದಕ್ಕೆ ಕಾರಣವೆಂದು ಅವರು ತಿಳಿದು, ಅಲ್ಲಿಗೆ ಬಂದು ಆಕೆಯನ್ನೂ ಆಕೆಯ ತಂದೆಯನ್ನೂ ಸುಟ್ಟುಬಿಟ್ಟರು.


ನನ್ನ ಪ್ರಿಯಳೇ, ನನ್ನ ವಧುವೇ, ಇದೋ ನಾ ಬಂದಿರುವೆ ನನ್ನ ತೋಟದೊಳಗೆ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ. ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ; ಪ್ರಿಯರೇ, ಕುಡಿಯಿರಿ ತೃಪ್ತಿಯಾಗುವಷ್ಟು ಪಾನಮಾಡಿರಿ. ನಲ್ಲೆ :


ಮದುವೆಮಾಡಿಕೊಡುವ ಸಮಯ ಬಂದಾಗ ಸೌಲನು ತನ್ನ ಮಗಳು ಮೇರಬಳನ್ನು ದಾವೀದನಿಗೆ ಬದಲಾಗಿ, ಮೆಹೋಲದ ಅದ್ರಿಯೇಲ್ ಎಂಬವನಿಗೆ ಕೊಟ್ಟು ಮದುವೆಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು