Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 14:3 - ಕನ್ನಡ ಸತ್ಯವೇದವು C.L. Bible (BSI)

3 ಆಗ ಅವರು ಅವನಿಗೆ, “ಸುನ್ನತಿಯಿಲ್ಲದ ಫಿಲಿಷ್ಟಿಯರ ಹೆಣ್ಣನ್ನು ವರಿಸಬೇಕೆಂದಿರುವೆಯಾ? ನಿನ್ನ ಬಂಧುಗಳಲ್ಲಿ ಅದೂ ನಮ್ಮ ಎಲ್ಲಾ ಜನರಲ್ಲಿ ನಿನಗೆ ಹೆಣ್ಣು ಸಿಕ್ಕುವುದಿಲ್ಲವೇ?” ಎಂದು ಪ್ರತಿಭಟಿಸಿದರು. ಅವನು, “ನನಗಾಗಿ ಆಕೆಯನ್ನೇ ತನ್ನಿ. ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಅವರು ಅವನಿಗೆ, “ಸುನ್ನತಿಯಿಲ್ಲದ ಫಿಲಿಷ್ಟಿಯರ ಹೆಣ್ಣನ್ನು ಮದುವೆ ಮಾಡಿಕೊಳ್ಳಬೇಕೆಂದಿರುತ್ತೀಯಲ್ಲಾ; ನಿನ್ನ ಬಂಧುಗಳಲ್ಲಿಯೂ, ನಮ್ಮ ಎಲ್ಲಾ ಜನರಲ್ಲಿಯೂ ನಿನಗೆ ಹೆಣ್ಣು ಸಿಕ್ಕುವುದಿಲ್ಲವೋ?” ಎಂದು ಕೇಳಲು ಅವನು, “ನನಗೋಸ್ಕರ ಆಕೆಯನ್ನೇ ತೆಗೆದುಕೊಳ್ಳಬೇಕು; ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಅವರು ಅವನಿಗೆ - ಸುನ್ನತಿಯಿಲ್ಲದ ಫಿಲಿಷ್ಟಿಯರ ಹೆಣ್ಣನ್ನು ವರಿಸಬೇಕೆಂದಿರುತ್ತೀ; ನಿನ್ನ ಬಂಧುಗಳಲ್ಲಿಯೂ ನಮ್ಮ ಎಲ್ಲಾ ಜನರಲ್ಲಿಯೂ ನಿನಗೆ ಹೆಣ್ಣು ಸಿಕ್ಕುವದಿಲ್ಲವೋ ಎಂದು ಕೇಳಲು ಅವನು - ನನಗೋಸ್ಕರ ಆಕೆಯನ್ನೇ ತೆಗೆದುಕೊಳ್ಳಬೇಕು; ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವನ ತಂದೆತಾಯಿಗಳು, “ಇಸ್ರೇಲರಲ್ಲಿಯೇ ಒಬ್ಬ ಸ್ತ್ರೀ ಇದ್ದಾಳೆ. ನೀನು ಅವಳನ್ನು ಮದುವೆಯಾಗು. ನೀನು ಫಿಲಿಷ್ಟಯರ ಹೆಣ್ಣನ್ನು ಮದುವೆಯಾಗುವುದೇಕೆ? ಅವರು ಸುನ್ನತಿಯನ್ನು ಮಾಡಿಸಿಕೊಂಡವರಲ್ಲ” ಎಂದರು. ಆದರೆ ಸಂಸೋನನು, “ನನಗೆ ಆಕೆಯೊಡನೇ ಮದುವೆಮಾಡಿಸಿ. ನಾನು ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಅವನ ತಂದೆಯೂ, ತಾಯಿಯೂ ಅವನಿಗೆ, “ನಿನಗೆ ಸುನ್ನತಿಯಾಗದ ಫಿಲಿಷ್ಟಿಯರಲ್ಲಿ ಹೆಂಡತಿಯನ್ನು ತೆಗೆದುಕೊಳ್ಳುವುದಕ್ಕೆ ನಿನ್ನ ಸಹೋದರರ ಪುತ್ರಿಯರಲ್ಲಿಯೂ, ನಮ್ಮ ಎಲ್ಲಾ ಜನರಲ್ಲಿಯೂ ಸ್ತ್ರೀ ಇಲ್ಲವೋ?” ಎಂದರು. ಆದರೆ ಸಂಸೋನನು ತನ್ನ ತಂದೆಗೆ, “ಅವಳನ್ನು ನನಗೆ ತೆಗೆದುಕೋ. ಏಕೆಂದರೆ ಅವಳು ನನ್ನ ಮನಸ್ಸಿಗೆ ಒಪ್ಪಿದ್ದಾಳೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 14:3
15 ತಿಳಿವುಗಳ ಹೋಲಿಕೆ  

ನಿಮ್ಮ ಸೇವಕನಾದ ನನ್ನಿಂದ ಆ ಸಿಂಹಕ್ಕೂ ಕರಡಿಗೂ ಆದ ಗತಿಯೇ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು; ಏಕೆಂದರೆ ಜೀವಸ್ವರೂಪರಾದ ದೇವರ ಸೈನ್ಯವನ್ನು ನಿಂದಿಸುತ್ತಿದ್ದಾನೆ.


ಇದರಿಂದಾಗಿ ಸಂಸೋನನಿಗೆ ಬಹಳ ದಾಹವಾಯಿತು. ಅವನು ಸರ್ವೇಶ್ವರನಿಗೆ, “ನೀವು ನಿಮ್ಮ ದಾಸನ ಮುಖಾಂತರ ಇಂಥ ಮಹಾ ಜಯವನ್ನು ದಯಪಾಲಿಸಿದಿರಿ. ಆದರೆ ಈಗ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೇ?’ ಎಂದು ಮೊರೆಯಿಟ್ಟನು.


ಸಾರಬೇಡಿ ಈ ಸುದ್ದಿಯನು ‘ಗತ್’ ಊರಿನಲಿ ಘೋಷಿಸಬೇಡಿ ಅಷ್ಕೆಲೋನಿನ ಬೀದಿಗಳಲಿ. ಏಕೆನೆ, ಉಲ್ಲಾಸಿಸಿಯಾರು ಆ ಫಿಲಿಷ್ಟಿಯ ಮಹಿಳೆಯರು; ಜಯಘೋಷ ಮಾಡಿಯಾರು ಸುನ್ನತಿಯಿಲ್ಲದವರಾ ಸ್ತ್ರೀಯರು!


ಆದುದರಿಂದ ಸೌಲನು ಭಯಭೀತನಾಗಿ ತನ್ನ ಆಯುಧವಾಹಕನಿಗೆ, “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು; ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನ್ನನ್ನು ತಿವಿದು ಅಪಕೀರ್ತಿಯನ್ನುಂಟುಮಾಡಬಹುದು,” ಎಂದು ಹೇಳಿದನು. ವಾಹಕನು ಹೆದರಿ, “ಒಲ್ಲೆ” ಎಂದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.


ಆಗ ದಾವೀದನು ತನ್ನ ಬಳಿಯಲ್ಲೆ ನಿಂತಿದ್ದವರನ್ನು ನೋಡಿ, “ಜೀವಸ್ವರೂಪರಾದ ದೇವರ ಸೈನ್ಯವನ್ನು ಹೀಗೆ ಹಿಯ್ಯಾಳಿಸುವ, ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಯೇಲರಿಗೆ ಬಂದಿರುವ ನಿಂದೆ ಅವಮಾನವನ್ನು ನೀಗಿಸುವವನಿಗೆ ಏನು ಸಿಕ್ಕುವುದೆಂದು ಹೇಳಿದಿರಿ?” ಎಂದು ಕೇಳಿದನು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರೆಗೆ ನೇರವಾಗಿ ಹೋಗೋಣ ಬಾ; ಬಹುಶಃ ಸರ್ವೇಶ್ವರ ತಾವೇ ನಮ್ಮ ಪರವಾಗಿ ಕಾರ್ಯಸಾಧಿಸುವರು. ಬಹುಜನರಿಂದಾಗಲಿ, ಸ್ವಲ್ಪಜನರಿಂದಾಗಲಿ, ರಕ್ಷಿಸುವುದು ಸರ್ವೇಶ್ವರಸ್ವಾಮಿಗೆ ಅಸಾಧ್ಯವಲ್ಲ,” ಎಂದು ಹೇಳಿದನು.


“ಸುನ್ನತಿ ಇಲ್ಲದವರಿಗೆ ನಮ್ಮ ತಂಗಿಯನ್ನು ಕೊಡುವುದಕ್ಕೆ ಆಗುವುದಿಲ್ಲ. ಹಾಗೆ ಕೊಡುವುದು ನಮಗೆ ಅವಮಾನಕರ.


ಆದುದರಿಂದ ಅಬ್ರಾಮನು ಲೋಟನಿಗೆ ಹೀಗೆಂದನು: “ನನಗೂ ನಿನಗೂ, ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು. ನಾವು ಬಳಗದವರು.


ಆಗ ಅಬ್ರಹಾಮನು ಅಬೀಮೆಲೆಕನಿಗೆ ದನಕುರಿಗಳನ್ನು ದಾನಮಾಡಿದನು. ಹೀಗೆ ಅವರಿಬ್ಬರು ಒಂದು ಒಪ್ಪಂದ ಮಾಡಿಕೊಂಡರು.


ತಂದೆ ತಾಯಿಗಳ ಬಳಿಗೆ ಬಂದು ಅವರಿಗೆ, “ನಾನು ತಿಮ್ನಾ ಊರಲ್ಲಿ ಒಬ್ಬ ಫಿಲಿಷ್ಟಿಯ ಹೆಣ್ಣನ್ನು ನೋಡಿ ಇದ್ದೇನೆ; ಆಕೆಯನ್ನು ನನಗೆ ಮದುವೆ ಮಾಡಿಕೊಡಿ,” ಎಂದು ಹೇಳಿದನು.


ದೇವರಿಗೆ ವಿಮುಖರಾಗಿ, ನಿಮ್ಮ ಮಧ್ಯೆ ಉಳಿದಿರುವ ಈ ಜನಾಂಗಗಳೊಡನೆ ಕೊಟ್ಟು ತಂದು ಮಿಶ್ರವಾಗಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು