Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:16 - ಕನ್ನಡ ಸತ್ಯವೇದವು C.L. Bible (BSI)

16 ಇದಲ್ಲದೆ, ಅವಳು ಅವನನ್ನು ದಿನದಿನವೂ ಮಾತಿನಿಂದ ಪೀಡಿಸುತ್ತಿದ್ದುದರಿಂದ ಅವನಿಗೆ ಸಾಯುವುದೇ ಒಳ್ಳೆಯದೆನ್ನುವಷ್ಟು ಬೇಸರ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದಲ್ಲದೆ ಅವಳು ಅವನನ್ನು ದಿನದಿನವೂ ಮಾತಿನಿಂದ ಪೀಡಿಸಿದ್ದರಿಂದ ಅವನಿಗೆ ಸಾಯುವುದು ಒಳ್ಳೆಯದು ಎನ್ನುವಷ್ಟು ಬೇಸರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದಲ್ಲದೆ ಅವಳು ಅವನನ್ನು ದಿನ ದಿನವೂ ಮಾತಿನಿಂದ ಪೀಡಿಸಿದ್ದರಿಂದ ಅವನಿಗೆ ಸಾಯುವದು ಒಳ್ಳೇದನ್ನುವಷ್ಟು ಬೇಸರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವಳು ಸಂಸೋನನನ್ನು ಪ್ರತಿದಿನ ಪೀಡಿಸತೊಡಗಿದಳು. ಅವನ ಶಕ್ತಿಯ ರಹಸ್ಯದ ಬಗ್ಗೆ ಅವಳು ಪದೇಪದೇ ಕೇಳುತ್ತಿದ್ದದರಿಂದ ಅವನಿಗೆ ಸಾಯುವಷ್ಟು ಬೇಸರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವಳು ಅವನನ್ನು ದಿನದಿನವೂ ತನ್ನ ಮಾತುಗಳಿಂದ ಪೀಡಿಸಿ, ತೊಂದರೆ ಪಡಿಸಿದ್ದರಿಂದ, ಅವನ ಪ್ರಾಣವು ಸಾಯುವಷ್ಟು ವ್ಯಸನಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:16
11 ತಿಳಿವುಗಳ ಹೋಲಿಕೆ  

ಇಷ್ಟಾದರೂ ಈ ವಿಧವೆಯ ಕಾಟವನ್ನು ತಪ್ಪಿಸಿಕೊಳ್ಳಲು, ಈಕೆಯ ನ್ಯಾಯ ತೀರಿಸಿಬಿಡುತ್ತೇನೆ. ಇಲ್ಲವಾದರೆ, ಈಕೆ ಪದೇಪದೇ ಬಂದು ನನ್ನ ತಲೆಕೆಡಿಸಿಬಿಟ್ಟಾಳು,’ ಎಂದುಕೊಂಡ.”


ಆದರೂ, ತನ್ನ ಗೆಳೆಯ ಇವನು ಎಂದು ಎದ್ದುಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದುಬಂದು ಕೇಳಿದಷ್ಟನ್ನು ಕೊಡುತ್ತಾನೆಂಬುದು ನಿಜ.


ಯೇಸು ಅವರಿಗೆ, “ಇದು ನನ್ನ ರಕ್ತ, ಸಮಸ್ತ ಜನರಿಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ


ಅದಕ್ಕೆ ದೇವರು: “ನೀನು ಸೋರೆಗಿಡದ ವಿಷಯದಲ್ಲಿ ಸಿಟ್ಟುಗೊಳ್ಳುವುದು ಸರಿಯೇ?” ಎಂದು ಕೇಳಲು, ಯೋನನು, “ಹೌದು, ಸಾವನ್ನು ಬಯಸುವಷ್ಟು ಸಿಟ್ಟುಗೊಳ್ಳುವುದು ಸರಿಯಲ್ಲವೇ?’ ಎಂದು ಉತ್ತರವಿತ್ತನು.


ನನ್ನ ದೂರು ಮನುಷ್ಯನ ವಿರುದ್ಧವೆ? ಸಾಕಷ್ಟು ಕಾರಣವಿರಲು, ನಾನು ಬೇಸರಗೊಳ್ಳಬಾರದೆ?


ಆಕೆ ಇನ್ನೊಮ್ಮೆ ಅವನಿಗೆ, “ನಿನ್ನನ್ನು ಪ್ರೀತಿಸುತ್ತೇನೆ” ಎಂದು ನೀವು ನನಗೆ ಹೇಗೆ ಹೇಳಬಹುದು? ನಿಮ್ಮ ಮನಸ್ಸು ನನ್ನ ಮೇಲೆ ಇಲ್ಲವೇ ಇಲ್ಲ; ಮೂರು ಸಾರಿ ವಂಚಿಸಿದಿರಿ. ನಿಮಗೆ ಇಂಥ ಮಹಾಶಕ್ತಿ ಯಾವುದರಿಂದ ಬಂದಿತೆಂಬುದನ್ನು ನನಗೆ ತಿಳಿಸಲಿಲ್ಲ,” ಎಂದಳು.


ಕೊನೆಗೆ ಅವನು, “ಕ್ಷೌರಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ನಾನು ಮಾತೃಗರ್ಭ ಬಿಟ್ಟಂದಿನಿಂದಲೇ ದೇವರಿಗೆ ಪ್ರತಿಷ್ಠಿತನಾದವನು. ನನ್ನ ತಲೆಯನ್ನು ಕ್ಷೌರಮಾಡಿದರೆ ನನ್ನ ಶಕ್ತಿ ಹೋಗುವುದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು,” ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿ ಹೇಳಿದನು.


ಆಕೆ ಸಂಸೋನನ ಮುಂದೆ ಅಳುತ್ತಾ, “ನೀವು ನನ್ನನ್ನು ಪ್ರೀತಿಸುವುದಿಲ್ಲ, ದ್ವೇಷಿಸುತ್ತೀರಷ್ಟೇ; ನನ್ನ ಜನರಿಗೆ ಒಗಟನ್ನು ಹೇಳಿದ್ದೀರಿ, ಅದರ ಅರ್ಥವನ್ನು ನನಗೆ ತಿಳಿಸಲಿಲ್ಲವಲ್ಲಾ” ಎಂದು ಪೀಡಿಸಿದಳು. ಅವನು ಆಕೆಗೆ, “ಇದನ್ನು ನನ್ನ ತಂದೆತಾಯಿಗಳಿಗೂ ಹೇಳಲಿಲ್ಲ; ನಿನಗೆ ಹೇಳುವೆನೋ?” ಎಂದು ಉತ್ತರಕೊಟ್ಟನು.


ಆಕೆ ಔತಣದ ಏಳು ದಿನಗಳಲ್ಲೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನ ಆಕೆ ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳೇಬಿಟ್ಟನು. ಆಕೆ ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು