ನ್ಯಾಯಸ್ಥಾಪಕರು 16:2 - ಕನ್ನಡ ಸತ್ಯವೇದವು C.L. Bible (BSI)2 ಸಂಸೋನನು ಬಂದಿರುವುದು ಗಾಜಾದವರಿಗೆ ಗೊತ್ತಾಯಿತು? ಅವರು ಬಂದು ಅವನನ್ನು ಸುತ್ತಿಕೊಂಡರು. ಸೂರ್ಯೋದಯವಾಗುತ್ತಲೇ ಅವನನ್ನು ಕೊಂದು ಹಾಕಬೇಕೆಂದುಕೊಂಡು ರಾತ್ರಿಯೆಲ್ಲಾ ಊರಬಾಗಿಲಲ್ಲೇ ಹೊಂಚುಹಾಕುತ್ತಾ ಸುಮ್ಮನಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಸಂಸೋನನು ಬಂದಿರುವುದು ಗಾಜದವರಿಗೆ ಗೊತ್ತಾಗಲು ಅವರು ಬಂದು ಅವನನ್ನು ಸುತ್ತಿಕೊಂಡರು. ಸೂರ್ಯೋದಯವಾಗುತ್ತಲೆ ಅವನನ್ನು ಕೊಂದುಹಾಕೋಣ ಎಂದುಕೊಂಡು ರಾತ್ರಿಯೆಲ್ಲಾ ಊರುಬಾಗಲಲ್ಲಿ ಹೊಂಚಿನೋಡುತ್ತಾ ಸುಮ್ಮನಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಸಂಸೋನನು ಬಂದಿರುವದು ಗಾಜದವರಿಗೆ ಗೊತ್ತಾಗಲು ಅವರು ಬಂದು ಅವನನ್ನು ಸುತ್ತಿಕೊಂಡರು; ಸೂರ್ಯೋದಯವಾಗುತ್ತಲೆ ಅವನನ್ನು ಕೊಂದುಹಾಕೋಣ ಎಂದುಕೊಂಡು ರಾತ್ರಿಯೆಲ್ಲಾ ಊರುಬಾಗಲಲ್ಲಿ ಹೊಂಚಿನೋಡುತ್ತಾ ಸುಮ್ಮನಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯಾರೋ ಒಬ್ಬರು, “ಸಂಸೋನನು ಇಲ್ಲಿಗೆ ಬಂದಿದ್ದಾನೆ” ಎಂದು ಗಾಜಾದ ಜನರಿಗೆ ಹೇಳಿದರು. ಅವರು ಅವನನ್ನು ಕೊಲ್ಲಬೇಕೆಂದಿದ್ದರು. ಅದಕ್ಕಾಗಿ ಅವರು ಆ ಸ್ಥಳವನ್ನು ಸುತ್ತುಗಟ್ಟಿದರು. ನಗರದ ಬಾಗಿಲುಗಳನ್ನು ಭದ್ರಪಡಿಸಿ ಅಡಗಿಕೊಂಡು ಸಂಸೋನನ ದಾರಿಕಾಯ್ದರು. ಇಡೀರಾತ್ರಿ ಅವರು ನಗರದ ಬಾಗಿಲಲ್ಲಿ ಸುಮ್ಮನಿದ್ದರು. “ಬೆಳಗಾದ ಮೇಲೆ ನಾವು ಸಂಸೋನನನ್ನು ಕೊಲ್ಲೋಣ” ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಸಂಸೋನನು ಅಲ್ಲಿಗೆ ಬಂದಿದ್ದಾನೆಂದು ಗಾಜದವರಿಗೆ ತಿಳಿದಿದ್ದರಿಂದ, ಅವರು ಅವನನ್ನು ಸುತ್ತಿಕೊಂಡು, ಪಟ್ಟಣದ ಬಾಗಿಲಲ್ಲಿ ಅವನಿಗಾಗಿ ಹೊಂಚಿಕೊಂಡಿದ್ದು, ರಾತ್ರಿಯೆಲ್ಲಾ ಕಾದುಕೊಂಡಿದ್ದರು. ಅವರು, “ಹೊತ್ತಾರೆ ಬೆಳಕಾದಾಗ ಅವನನ್ನು ಕೊಂದು ಹಾಕುವೆವು,” ಎಂದರು. ಅಧ್ಯಾಯವನ್ನು ನೋಡಿ |