ನ್ಯಾಯಸ್ಥಾಪಕರು 16:24 - ಕನ್ನಡ ಸತ್ಯವೇದವು C.L. Bible (BSI)24 ಜನರು ಸಂಸೋನನನ್ನು ನೋಡಿ : ‘ನಮ್ಮ ದೇಶವನ್ನು ಹಾಳುಮಾಡಿದ, ನಮ್ಮಲ್ಲಿ ಅನೇಕರನ್ನು ಕೊಂದುಹಾಕಿದ, ಈ ಶತ್ರುವನ್ನು ನಮ್ಮ ದೇವರೇ ನಮ್ಮ ಕೈಗೊಪ್ಪಿಸಿದ,’ ಎಂದು ಗಾನಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಜನರು ಸಂಸೋನನನ್ನು ನೋಡಿದಾಗ, “ನಮ್ಮ ದೇಶವನ್ನು ಹಾಳುಮಾಡಿ ನಮ್ಮಲ್ಲಿ ಅನೇಕರನ್ನು ಕೊಂದುಹಾಕಿದ ಈ ಶತ್ರುವನ್ನು ನಮ್ಮ ದೇವರು ನಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾನೆ” ಎಂದು ಹಾಡು ಹಾಡಿ ಸಂತೋಷಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಜನರು ಸಂಸೋನನನ್ನು ನೋಡಿ - ನಮ್ಮ ದೇಶವನ್ನು ಹಾಳುಮಾಡಿ ನಮ್ಮಲ್ಲಿ ಅನೇಕರನ್ನು ಕೊಂದು ಹಾಕಿದ ಈ ಶತ್ರುವನ್ನು ನಮ್ಮ ದೇವರು ನಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ ಎಂದು ಗಾನಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಫಿಲಿಷ್ಟಿಯರು ಸಂಸೋನನನ್ನು ನೋಡಿದ ಕೂಡಲೇ ತಮ್ಮ ದೇವರನ್ನು ಸ್ತುತಿಸಿದರು. ಅವರು, “ಇವನು ನಮ್ಮ ಜನರನ್ನು ಹಾಳುಮಾಡಿದನು. ಇವನು ನಮ್ಮ ಅನೇಕ ಜನರನ್ನು ಕೊಂದನು. ಆದರೆ ನಮ್ಮ ದೇವರು ನಮ್ಮ ಶತ್ರುವನ್ನು ಸೆರೆಹಿಡಿಯಲು ಸಹಾಯ ಮಾಡಿದನು” ಎಂದು ಹಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಜನರು ಸಂಸೋನನನ್ನು ನೋಡಿದಾಗ ತಮ್ಮ ದೇವರನ್ನು ಹೊಗಳಿದರು. ಏಕೆಂದರೆ, “ನಮ್ಮ ದೇಶವನ್ನು ಹಾಳು ಮಾಡಿ, ನಮ್ಮಲ್ಲಿ ಅನೇಕರನ್ನು ಕೊಂದ ನಮ್ಮ ವೈರಿಯನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು,” ಎಂದು ಅವರು ಹೇಳಿಕೊಂಡರು. ಅಧ್ಯಾಯವನ್ನು ನೋಡಿ |
ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ.