ನ್ಯಾಯಸ್ಥಾಪಕರು 16:27 - ಕನ್ನಡ ಸತ್ಯವೇದವು C.L. Bible (BSI)27 ಆ ಮನೆ ಸ್ತ್ರೀಪುರುಷರಿಂದ ಕಿಕ್ಕಿರಿದಿತ್ತು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು. ಸಂಸೋನನು ತೋರಿಸುತ್ತಿದ್ದ ಮನೋರಂಜನಾ ಕಾರ್ಯಗಳನ್ನು ನೋಡುವುದಕ್ಕಾಗಿ ಬಂದವರಲ್ಲಿ ಸುಮಾರು ಮೂರು ಸಾವಿರ ಮಂದಿ ಸ್ತ್ರೀಪುರುಷರು ಮಾಳಿಗೆಯ ಮೇಲಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆ ಮನೆಯು ಸ್ತ್ರೀಪುರುಷರಿಂದ ಕಿಕ್ಕಿರಿದು ಹೋಗಿತ್ತು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು; ಸಂಸೋನನ ವಿನೋದವನ್ನು ನೋಡುವುದಕ್ಕಾಗಿ ಬಂದವರಲ್ಲಿ ಸುಮಾರು ಮೂರು ಸಾವಿರ ಮಂದಿ ಸ್ತ್ರೀಪುರುಷರು ಮಾಳಿಗೆಯ ಮೇಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆ ಮನೆಯು ಸ್ತ್ರೀಪುರುಷರಿಂದ ಕಿಕ್ಕಿರಿಯುತ್ತಿತ್ತು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು; ಸಂಸೋನನ ವಿನೋದವನ್ನು ನೋಡುವದಕ್ಕಾಗಿ ಬಂದವರಲ್ಲಿ ಸುಮಾರು ಮೂರು ಸಾವಿರ ಮಂದಿ ಸ್ತ್ರೀಪುರುಷರು ಮಾಳಿಗೆಯ ಮೇಲಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆ ಮಂದಿರದಲ್ಲಿ ಗಂಡಸರು ಹೆಂಗಸರು ಕಿಕ್ಕಿರಿದು ನೆರೆದಿದ್ದರು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು. ಮಾಳಿಗೆಯ ಮೇಲೆ ಸುಮಾರು ಮೂರು ಸಾವಿರ ಹೆಂಗಸರು ಮತ್ತು ಗಂಡಸರು ಇದ್ದರು. ಅವರು ನಕ್ಕು ಸಂಸೋನನನ್ನು ಅಪಹಾಸ್ಯ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆ ಮನೆಯು ಸ್ತ್ರೀಪುರುಷರಿಂದ ತುಂಬಿತ್ತು. ಅಲ್ಲಿ ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಇದ್ದರು. ಇದಲ್ಲದೆ ಸಂಸೋನನು ವಿನೋದ ಮಾಡುವುದನ್ನು ಕಾಣುವುದಕ್ಕೆ ಮಾಳಿಗೆಯ ಮೇಲೆ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಸ್ತ್ರೀ ಪುರುಷರಿದ್ದರು. ಅಧ್ಯಾಯವನ್ನು ನೋಡಿ |