Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:3 - ಕನ್ನಡ ಸತ್ಯವೇದವು C.L. Bible (BSI)

3 ಸಂಸೋನನು ಮಲಗಿ ಮಧ್ಯರಾತ್ರಿಯಲ್ಲೆದ್ದು ಊರಬಾಗಿಲುಗಳನ್ನೂ ಕದಗಳನ್ನೂ ಅದರ ಎರಡು ನಿಲುವು ಪಟ್ಟಿಗಳನ್ನೂ ಅಗುಳಿಗಳನ್ನೂ ಕಿತ್ತು ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿನ ಎದುರಿಗಿರುವ ಬೆಟ್ಟದ ತುದಿಯ ಮೇಲೆ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸಂಸೋನನು ಮಲಗಿ ಮಧ್ಯರಾತ್ರಿಯಲ್ಲೆದ್ದು ಊರು ಬಾಗಿಲಿನ ಕದಗಳನ್ನೂ, ಅದರ ಎರಡು ನಿಲುವುಪಟ್ಟಿಗಳನ್ನೂ, ಅಗುಳಿಗಳನ್ನೂ ಕಿತ್ತು, ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿನ ಎದುರಿಗಿರುವ ಪರ್ವತ ಶಿಖರದ ಮೇಲೆ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸಂಸೋನನು ಮಲಗಿ ಮಧ್ಯರಾತ್ರಿಯಲ್ಲೆದ್ದು ಊರುಬಾಗಲಿನ ಕದಗಳನ್ನೂ ಅದರ ಎರಡು ನಿಲುವು ಪಟ್ಟಿಗಳನ್ನೂ ಅಗುಳಿಗಳನ್ನೂ ಕಿತ್ತು ಹೆಗಲಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿನ ಎದುರಿಗಿರುವ ಪರ್ವತದ ಶಿಖರದ ಮೇಲೆ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಸಂಸೋನನು ಆ ವೇಶ್ಯೆಯ ಜೊತೆಯಲ್ಲಿ ಮಧ್ಯರಾತ್ರಿಯವರೆಗೆ ಮಾತ್ರ ಇದ್ದನು. ಸಂಸೋನನು ಮಧ್ಯರಾತ್ರಿಯಲ್ಲಿ ಎದ್ದುಬಿಟ್ಟನು. ಸಂಸೋನನು ನಗರ ದ್ವಾರದ ಬಾಗಿಲನ್ನು ಗಟ್ಟಿಯಾಗಿ ಹಿಡಿದು ಎಳೆದನು. ಕದಗಳು ಗೋಡೆಗಳಿಂದ ಕಿತ್ತುಬಂದವು. ಸಂಸೋನನು ಬಾಗಿಲಕದಗಳನ್ನೂ ಅದರ ನಿಲುವುಪಟ್ಟಿಗಳನ್ನೂ ಅಗುಳಿಗಳನ್ನೂ ಕಿತ್ತು ತನ್ನ ಹೆಗಲ ಮೇಲೆ ಹೊತ್ತು ಹೆಬ್ರೋನ್ ನಗರದ ಹತ್ತಿರವಿರುವ ಪರ್ವತ ಶಿಖರಕ್ಕೆ ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸಂಸೋನನು ಅರ್ಧ ರಾತ್ರಿಯವರೆಗೆ ಮಲಗಿದ್ದು, ಮಧ್ಯರಾತ್ರಿಯಲ್ಲಿ ಎದ್ದು, ಪಟ್ಟಣದ ಬಾಗಿಲ ಕದಗಳನ್ನೂ, ಅದರ ಎರಡು ತೋಳುಗಳನ್ನೂ ಹಿಡಿದು, ಅಗುಳಿ ಸಹ ಕಿತ್ತು, ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೋಗಿ, ಹೆಬ್ರೋನಿಗೆ ಎದುರಾಗಿರುವ ಪರ್ವತದ ಶಿಖರದ ಮೇಲಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:3
6 ತಿಳಿವುಗಳ ಹೋಲಿಕೆ  

ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು.


ಬಾಗಿಲನ್ನು ಒಡೆದು ತೆರೆಯುವಂಥವನು ಜನರ ಮುಂದಾಳಾಗಿ ಹೊರಡುವನು; ಅವರೂ ಬಾಗಿಲನ್ನು ಒಡೆದು ನುಗ್ಗುವರು; ಅವರ ಅರಸನು ಮುಂದಾಳಾಗಿ ಹೋಗುವನು. ಸರ್ವೇಶ್ವರಸ್ವಾಮಿಯೇ ಅವರ ಮುಂದಾಳತ್ವವನ್ನು ವಹಿಸುವರು.


ಚೂರುಚೂರುಗೈದನು ಕಂಚಿನ ಕದಗಳನು I ಮುರಿದುಹಾಕಿದನು ಕಬ್ಬಿಣದ ಅಗುಳಿಗಳನು II


ಸಂಸೋನನು ಬಂದಿರುವುದು ಗಾಜಾದವರಿಗೆ ಗೊತ್ತಾಯಿತು? ಅವರು ಬಂದು ಅವನನ್ನು ಸುತ್ತಿಕೊಂಡರು. ಸೂರ್ಯೋದಯವಾಗುತ್ತಲೇ ಅವನನ್ನು ಕೊಂದು ಹಾಕಬೇಕೆಂದುಕೊಂಡು ರಾತ್ರಿಯೆಲ್ಲಾ ಊರಬಾಗಿಲಲ್ಲೇ ಹೊಂಚುಹಾಕುತ್ತಾ ಸುಮ್ಮನಿದ್ದರು.


ಅನಂತರ ಸಂಸೋನನು ಸೋರೇಕ್ ತಗ್ಗಿನಲ್ಲಿ ವಾಸವಾಗಿದ್ದ ದೆಲೀಲಾ ಎಂಬ ಮಹಿಳೆಯಿಂದ ಮೋಹಿತನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು