ನ್ಯಾಯಸ್ಥಾಪಕರು 16:5 - ಕನ್ನಡ ಸತ್ಯವೇದವು C.L. Bible (BSI)5 ಫಿಲಿಷ್ಟಿಯರ ಮುಖಂಡರು ಅವಳ ಬಳಿಗೆ ಹೋಗಿ ಅವಳಿಗೆ, “ನೀನು ಅವನನ್ನು ಮರುಳುಗೊಳಿಸಿ ಅವನ ಮಹಾಶಕ್ತಿಯ ಮೂಲ ಯಾವುದೆಂಬುದನ್ನು ತಿಳಿದುಕೋ: ನಾವು ಅವನನ್ನು ಗೆದ್ದು, ಕಟ್ಟಿ, ಅಡಗಿಸುವ ವಿಧಾನವನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು, ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಸಾವಿರದ ನೂರು ಬೆಳ್ಳಿ ನಾಣ್ಯಗಳನ್ನು ಕೊಡುವೆವು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಫಿಲಿಷ್ಟಿಯ ಪ್ರಭುಗಳು ಅವಳ ಬಳಿಗೆ ಹೋಗಿ ಅವಳಿಗೆ, “ನೀನು ಅವನನ್ನು ಮರುಳುಗೊಳಿಸಿ, ಅವನ ಮಹಾಶಕ್ತಿಯ ಮೂಲ ಯಾವುದೆಂಬುದನ್ನೂ, ನಾವು ಅವನನ್ನೂ ಗೆದ್ದು, ಬಲವನ್ನು ಕುಂದಿಸುವುದು ಹೇಗೆಂಬುದನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು; ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಸಾವಿರದ ನೂರು ರೂಪಾಯಿ ಕೊಡುವೆವು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಫಿಲಿಷ್ಟಿಯ ಪ್ರಭುಗಳು ಅವಳ ಬಳಿಗೆ ಹೋಗಿ ಅವಳಿಗೆ - ನೀನು ಅವನನ್ನು ಮರುಳುಗೊಳಿಸಿ ಅವನ ಮಹಾಶಕ್ತಿಯ ಮೂಲ ಯಾವದೆಂಬದನ್ನೂ ನಾವು ಅವನನ್ನು ಗೆದ್ದು ಕಟ್ಟಿ ಕುಂದಿಸುವದು ಹೇಗೆಂಬದನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು; ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಸಾವಿರದ ನೂರು ರೂಪಾಯಿ ಕೊಡುವೆವು ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಫಿಲಿಷ್ಟಿಯ ಪ್ರಭುಗಳು ದೆಲೀಲಳ ಬಳಿಗೆ ಹೋಗಿ, “ಸಂಸೋನನು ಅಷ್ಟೊಂದು ಶಕ್ತಿಶಾಲಿಯಾಗಿರುವುದಕ್ಕೆ ಕಾರಣಗಳನ್ನು ನಾವು ತಿಳಿದುಕೊಳ್ಳಬೇಕಾಗಿದೆ. ಅವನನ್ನು ಮರುಳುಗೊಳಿಸಿ ಅವನ ರಹಸ್ಯವನ್ನು ತಿಳಿದುಕೊಳ್ಳಲು ಪ್ರಯತ್ನ ಮಾಡು. ಆಗ ನಾವು ಅವನನ್ನು ಸೋಲಿಸಿ, ಬಂಧಿಸಿ ನಮ್ಮ ಅಧೀನದಲ್ಲಿಟ್ಟುಕೊಳ್ಳಲು ಸಾಧ್ಯವಾಗುತ್ತದೆ. ನೀನು ಇದನ್ನು ಮಾಡಿದರೆ ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಇಪ್ಪತ್ತೆಂಟು ಬೆಳ್ಳಿನಾಣ್ಯಗಳನ್ನು ಕೊಡುತ್ತೇವೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವಳ ಬಳಿಗೆ ಫಿಲಿಷ್ಟಿಯರ ಅಧಿಪತಿಗಳು ಬಂದು ಅವಳಿಗೆ, “ನೀನು ಅವನನ್ನು ಮರಳುಗೊಳಿಸಿ, ನಾವು ಅವನನ್ನು ಯಾವ ಪ್ರಕಾರ ಗೆದ್ದು, ಕಟ್ಟಿ, ಬಾಧಿಸಬಹುದೆಂದೂ ಅವನ ದೊಡ್ಡ ಶಕ್ತಿ ಯಾವುದರಲ್ಲಿ ಇದೆ ಎಂದೂ ನೋಡು. ನಾವು ಒಬ್ಬೊಬ್ಬರು ನಿನಗೆ ಸಾವಿರದ ನೂರು ಬೆಳ್ಳಿಯ ನಾಣ್ಯಗಳನ್ನು ಕೊಡುವೆವು,” ಎಂದರು. ಅಧ್ಯಾಯವನ್ನು ನೋಡಿ |