Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 17:12 - ಕನ್ನಡ ಸತ್ಯವೇದವು C.L. Bible (BSI)

12 ಮೀಕನು ಯೌವನಸ್ಥನಾದ ಆ ಲೇವಿಯನನ್ನು ಯಾಜಕ ಸೇವೆಗಾಗಿ ಪ್ರತಿಷ್ಠಿಸಿ ತನ್ನ ಮನೆಯಲ್ಲೇ ಇಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮೀಕನು ಯೌವನಸ್ಥನಾದ ಆ ಲೇವಿಯನನ್ನು ಯಾಜಕಸೇವೆಗೋಸ್ಕರ ಪ್ರತಿಷ್ಠಿಸಿ ತನ್ನ ಮನೆಯಲ್ಲಿಟ್ಟುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮೀಕನು ಯೌವನಸ್ಥನಾದ ಆ ಲೇವಿಯನನ್ನು ಯಾಜಕಸೇವೆಗೋಸ್ಕರ ಪ್ರತಿಷ್ಠಿಸಿ ತನ್ನ ಮನೆಯಲ್ಲಿಟ್ಟುಕೊಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮೀಕನು ಅವನನ್ನು ತಮಗೆ ಯಾಜಕನಾಗಬೇಕೆಂದು ಕೇಳಿಕೊಂಡನು. ಆದ್ದರಿಂದ ಆ ತರುಣನು ಯಾಜಕನಾಗಿ ಮೀಕನ ಮನೆಯಲ್ಲಿಯೇ ವಾಸಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮೀಕನು ಲೇವಿಯನನ್ನು ಪ್ರತಿಷ್ಠೆ ಮಾಡಿದನು. ಆ ಯೌವನಸ್ಥನು ಅವನಿಗೆ ಯಾಜಕನಾದನು. ಅವನು ಮೀಕನ ಮನೆಯಲ್ಲಿ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 17:12
9 ತಿಳಿವುಗಳ ಹೋಲಿಕೆ  

ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಯೇಲರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ ಗೇರ್ಷೋಮನ ಮಗನೂ ಆದ ಯೆಹೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು.


ಇದಲ್ಲದೆ, ಅವನು ಪೂಜಾಗಿರಿಗಳ ಮೇಲೆ ಗುಡಿಗಳನ್ನು ಕಟ್ಟಿಸಿ, ಲೇವಿಯರಲ್ಲದ ಜನಸಾಮಾನ್ಯರನ್ನು ಯಾಜಕರನ್ನಾಗಿ ನೇಮಿಸಿದನು.


ಕೋರಹನಿಗೂ ಅವನ ಪಂಗಡದವರೆಲ್ಲರಿಗೂ ಹೀಗೆಂದನು: “ಸರ್ವೇಶ್ವರ ತನ್ನವರು ಯಾರೆಂದು ನಾಳೆ ತಿಳಿಸುವರು. ಯಾರನ್ನು ಪ್ರತಿಷ್ಠಿಸಿದ್ದಾರೋ ಹಾಗೂ ತಾವೇ ಆರಿಸಿಕೊಂಡಿದ್ದಾರೋ ಅವರನ್ನು ಮಾತ್ರ ತಮ್ಮ ಹತ್ತಿರಕ್ಕೆ ಬರಗೊಳಿಸುವರು.


ಸರ್ವೇಶ್ವರ ಸ್ವಾಮಿ ಆರೋನನಿಗೆ ಹೀಗೆಂದರು: “ದೇವದರ್ಶನದ ಗುಡಾರದ ವಿಷಯದಲ್ಲಿ ಏನಾದರು ಅಕ್ರಮ ನಡೆದರೆ ನೀನು, ನಿನ್ನ ಸಂತತಿಯವರು ಮತ್ತು ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕ ಸೇವೆಯ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನು ಮತ್ತು ನಿನ್ನ ಸಂತತಿಯವರು ಮಾತ್ರ ಆ ದೋಷದ ಫಲವನ್ನು ಅನುಭವಿಸಬೇಕು.


ಆ ಲೇವಿ ಒಪ್ಪಿಕೊಂಡು ಅಲ್ಲೇ ವಾಸಮಾಡಿದನು. ಹೀಗೆ ಆ ಯೌವನಸ್ಥನು ಅವರ ಮಕ್ಕಳಲ್ಲಿ ಒಬ್ಬನಂತಾದನು.


“ಒಬ್ಬ ಲೇವಿ ನನ್ನ ಮನೆಯಲ್ಲಿ ಯಾಜಕನಾಗಿರುವುದರಿಂದ ಸರ್ವೇಶ್ವರ ನನ್ನನ್ನು ಆಶೀರ್ವದಿಸುವರೆಂದು ಬಲ್ಲೆ,” ಎಂದುಕೊಂಡನು.


‘ಮೀಕನು ತನಗೆ ಇಂಥಿಂಥವುಗಳನ್ನು ಸಂಬಳವಾಗಿ ಕೊಡುತ್ತಾನೆಂದೂ ತಾನು ಅವನ ಯಾಜಕನಾಗಿದ್ದೇನೆಂದೂ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು