Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 17:9 - ಕನ್ನಡ ಸತ್ಯವೇದವು C.L. Bible (BSI)

9 ‘ನೀನು ಎಲ್ಲಿಂದ ಬಂದೆ?’ ಎಂದು ಮೀಕನು ಅವನನ್ನು ಕೇಳಿದನು. ಅವನು, “ನಾನು ಯೆಹೂದದ ಬೆತ್ಲೆಹೇಮಿನವನಾದ ಲೇವಿಯನು; ಜೀವನಕ್ಕೆ ಅನುಕೂಲವಾದ ಬೇರೆಲ್ಲಾದರು ವಾಸಿಸಬೇಕೆಂದು ಹೊರಟಿದ್ದೇನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ನೀನು ಎಲ್ಲಿಂದ ಬಂದಿ” ಎಂದು ಮೀಕನು ಅವನನ್ನು ಕೇಳಲು ಅವನು, “ನಾನು ಯೆಹೂದದ ಬೇತ್ಲೆಹೇಮಿನವನಾದ ಲೇವಿಯನು; ಉಪಜೀವನಕ್ಕೆ ಅನುಕೂಲವಾದ ವಾಸಸ್ಥಳವನ್ನು ಹುಡುಕಿಕೊಂಡು ಹೊರಟಿದ್ದೇನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ಎಲ್ಲಿಂದ ಬಂದಿ ಎಂದು ಮೀಕನು ಅವನನ್ನು ಕೇಳಲು ಅವನು - ನಾನು ಯೆಹೂದದ ಬೇತ್ಲೆಹೇವಿುನವನಾದ ಲೇವಿಯನು; ಉಪಜೀವನಕ್ಕೆ ಅನುಕೂಲವಾಗುವಲ್ಲಿ ವಾಸಿಸಬೇಕೆಂದು ಹೊರಟಿದ್ದೇನೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮೀಕನು ಅವನನ್ನು, “ನೀನು ಎಲ್ಲಿಂದ ಬಂದಿರುವೆ?” ಎಂದು ಕೇಳಿದನು. ಆ ತರುಣನು, “ನಾನು ಯೆಹೂದ ಪ್ರದೇಶದ ಬೆತ್ಲೆಹೇಮಿನವನಾದ ಲೇವಿಯನು. ನಾನು ವಾಸಮಾಡುವುದಕ್ಕೆ ಒಂದು ಸ್ಥಳವನ್ನು ಹುಡುಕುತ್ತಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಮೀಕನು ಅವನಿಗೆ, “ನೀನು ಎಲ್ಲಿಂದ ಬಂದೆ?” ಎಂದನು. ಅವನು ಮೀಕನಿಗೆ, “ನಾನು ಯೆಹೂದದ ಬೇತ್ಲೆಹೇಮಿನವನಾದ ಲೇವಿಯನು. ನನಗೆ ಸ್ಥಳ ಸಿಕ್ಕಲ್ಲಿ ಪ್ರವಾಸಿಯಾಗಬೇಕೆಂದು ಹೊರಟಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 17:9
3 ತಿಳಿವುಗಳ ಹೋಲಿಕೆ  

ಯೆಹೂದದ ಬೆತ್ಲೆಹೇಮಿನವನೂ ಯೆಹೂದ ಕುಲದವನೂ ಆಗಿದ್ದ ಒಬ್ಬ ಯೌವನಸ್ಥನಾದ ಲೇವಿ,


ಜೀವನಕ್ಕೆ ಅನುಕೂಲವಾದ ಬೇರೆಲ್ಲಾದರು ವಾಸಿಸಬೇಕೆಂದು ಸ್ವಂತ ಊರನ್ನು ಬಿಟ್ಟು ಪ್ರಯಾಣಮಾಡುತ್ತಾ ಎಫ್ರಯಿಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದನು.


ಮೀಕನು ಅವನಿಗೆ, “ನೀನು ನಮ್ಮಲ್ಲಿರು; ನಮಗೆ ತಂದೆಯೂ ಯಾಜಕನೂ ಆಗಿರು. ನಿನಗೆ ವರ್ಷಕ್ಕೆ ಹತ್ತು ಬೆಳ್ಳಿ ನಾಣ್ಯಗಳನ್ನು, ಉಡಿಗೆತೊಡಿಗೆಯನ್ನು ಹಾಗು ಆಹಾರವನ್ನು ಕೊಡುತ್ತೇನೆ,” ಎನ್ನಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು