Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:19 - ಕನ್ನಡ ಸತ್ಯವೇದವು C.L. Bible (BSI)

19 ಅವರು ಅವನಿಗೆ, “ಬಾಯಿಮುಚ್ಚಿ ಸುಮ್ಮನಿರಿ, ನಮ್ಮ ಜೊತೆಯಲ್ಲಿ ಬಂದು ನಮಗೆ ತಂದೆಯೂ ಯಾಜಕನೂ ಆಗಿರು. ಒಂದೇ ಒಂದು ಮನೆಗೆ ಯಾಜಕನಾಗಿರುವುದು ಉತ್ತಮವೋ ಅಥವಾ ಇಸ್ರಯೇಲರ ಒಂದು ಕುಲಕ್ಕೂ ಗೋತ್ರಕ್ಕೂ ಯಾಜಕನಾಗಿರುವುದು ಉತ್ತಮವೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು ಅವನಿಗೆ, “ಸುಮ್ಮನಿರು; ಬಾಯಿ ಮುಚ್ಚಿಕೊಂಡು; ನಮ್ಮ ಜೊತೆಯಲ್ಲಿ ಬಂದು ನಮಗೆ ತಂದೆಯೂ, ಯಾಜಕನೂ ಆಗಿರು. ಒಂದು ಮನೆಗೆ ಯಾಜಕನಾಗಿರುವುದು ಉತ್ತಮವೋ ಅಥವಾ ಇಸ್ರಾಯೇಲ್ಯರ ಒಂದು ಕುಲಕ್ಕೂ, ಗೋತ್ರಕ್ಕೂ ಯಾಜಕನಾಗಿರುವುದು ಉತ್ತಮವೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರು ಅವನಿಗೆ - ಸುಮ್ಮನಿರು; ಬಾಯಿ ಮುಚ್ಚು; ನಮ್ಮ ಜೊತೆಯಲ್ಲಿ ಬಂದು ನಮಗೆ ತಂದೆಯೂ ಯಾಜಕನೂ ಆಗಿರು. ಒಂದು ಮನೆಗೆ ಯಾಜಕನಾಗಿರುವದು ಉತ್ತಮವೋ ಅಥವಾ ಇಸ್ರಾಯೇಲ್ಯರ ಒಂದು ಕುಲಕ್ಕೂ ಗೋತ್ರಕ್ಕೂ ಯಾಜಕನಾಗಿರುವದು ಉತ್ತಮವೋ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆ ಐದು ಜನರು, “ಸುಮ್ಮನಿರು, ಶಬ್ದ ಮಾಡಬೇಡ. ನಮ್ಮ ಸಂಗಡ ಬಾ. ನಮಗೆ ತಂದೆಯೂ ಯಾಜಕನೂ ಆಗಿರು. ನೀನು ಕೇವಲ ಒಬ್ಬ ಮನುಷ್ಯನ ಯಾಜಕನಾಗಿರುವುದು ಒಳ್ಳೆಯದೋ ಅಥವಾ ಇಸ್ರೇಲರ ಒಂದು ಕುಲದ ಯಾಜಕನಾಗಿರುವುದು ಒಳ್ಳೆಯದೋ ಎಂಬುದನ್ನು ನೀನೇ ವಿಚಾರಮಾಡು” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವರು ಅವನಿಗೆ, “ನೀನು ಸುಮ್ಮನೆ ಇರು; ನಿನ್ನ ಬಾಯಿ ಮುಚ್ಚಿಕೊಂಡು ನಮ್ಮ ಸಂಗಡ ಬಂದು, ನಮಗೆ ತಂದೆಯಾಗಿಯೂ, ಯಾಜಕನಾಗಿಯೂ ಇರು. ನೀನು ಒಬ್ಬನ ಮನೆಗೆ ಯಾಜಕನಾಗಿರುವುದು ಒಳ್ಳೆಯದೋ ಅಥವಾ ಇಸ್ರಾಯೇಲಿನಲ್ಲಿ ಒಂದು ಗೋತ್ರಕ್ಕೂ, ಒಂದು ಕುಟುಂಬಕ್ಕೂ ಯಾಜಕನಾಗಿರುವುದು ಒಳ್ಳೆಯದೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:19
12 ತಿಳಿವುಗಳ ಹೋಲಿಕೆ  

ಮಂತ್ರಿಗಳೂ ಕೈಯಿಟ್ಟು ಬಾಯ ಮೇಲೆ ಮೌನತಾಳುತ್ತಿದ್ದರು ಮಾತೆತ್ತದೆ;


ನನ್ನ ಕಡೆಗೆ ಗಮನ ಕೊಡಿ ಬಾಯಿಯ ಮೇಲೆ ಕೈಯಿಟ್ಟು ನಿಬ್ಬೆರಗಾಗಿರಿ.


ಮೀಕನು ಅವನಿಗೆ, “ನೀನು ನಮ್ಮಲ್ಲಿರು; ನಮಗೆ ತಂದೆಯೂ ಯಾಜಕನೂ ಆಗಿರು. ನಿನಗೆ ವರ್ಷಕ್ಕೆ ಹತ್ತು ಬೆಳ್ಳಿ ನಾಣ್ಯಗಳನ್ನು, ಉಡಿಗೆತೊಡಿಗೆಯನ್ನು ಹಾಗು ಆಹಾರವನ್ನು ಕೊಡುತ್ತೇನೆ,” ಎನ್ನಲು


ಅನ್ಯರಾಷ್ಟ್ರಗಳು ಇವನ್ನು ನೋಡಿ ಅವುಗಳ ಮುಂದೆ ತಮ್ಮ ಶಕ್ತಿಸಾಮರ್ಥ್ಯ ಏನೂ ಇಲ್ಲವೆಂದು ನಾಚಿಕೆಪಟ್ಟು ಬಾಯಮೇಲೆ ಕೈಯಿಟ್ಟುಕೊಳ್ಳುವರು; ಅವರ ಕಿವಿ ಕಿವುಡಾಗುವುದು.


ನೀನು ಗರ್ವದಿಂದ ಮೂರ್ಖನಾಗಿ ನಡೆದಿದ್ದರೆ, ದುರಾಲೋಚನೆಯನ್ನು ಮಾಡಿದ್ದರೆ ಬಾಯಿಯ ಮೇಲೆ ಕೈಯಿಟ್ಟುಕೊ.


ಇಹದಲ್ಲಿ ನೀವು ಯಾರನ್ನೂ ‘ಪಿತನೇ’ ಎಂದು ಸಂಬೋಧಿಸಬೇಡಿ. ಏಕೆಂದರೆ ನಿಮ್ಮ ಪಿತ ಒಬ್ಬರೇ. ಅವರು ಸ್ವರ್ಗದಲ್ಲಿದ್ದಾರೆ.


ಎಲೀಷನು ಮಾರಕರೋಗದಿಂದ ನರಳುತ್ತಿದ್ದನು. ಇಸ್ರಯೇಲರ ಅರಸ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ, “ತಂದೆಯೇ, ನನ್ನ ತಂದೆಯೇ, ಇಸ್ರಯೇಲರಿಗೆ ರಥಾರಥಾಶ್ವಬಲಗಳಾಗಿ ಇದ್ದವರೇ,” ಎಂದು ಗೋಳಿಡುತ್ತಾ ಅಧೋಮುಖನಾಗಿ ಬಿದ್ದು ಅತ್ತು ಪ್ರಲಾಪಿಸಿದನು.


ಇಸ್ರಯೇಲರ ಅರಸನು ಅವರನ್ನು ಕಂಡು ಎಲೀಷನಿಗೆ, ‘ಅಪ್ಪಾ ಗುರುವೇ, ಇವರನ್ನು ಸಂಹರಿಸಲೇ?, ಸಂಹರಿಸಲೇ?’ ಎಂದು ಕೇಳಿದನು.


ಅವುಗಳನ್ನು ಅವರು ಮೀಕನ ಮನೆಯನ್ನು ಹೊಕ್ಕು ತೆಗೆದುಕೊಂಡು ಬರುವಾಗ ಯಾಜಕನು ಕಂಡು ಅವರಿಗೆ, “ನೀವು ಮಾಡಿದ್ದೇನು?” ಎಂದನು.


ಯಾಜಕನು ಈ ಮಾತನ್ನು ಕೇಳಿ ಸಂತೋಷಪಟ್ಟು ಏಫೋದನ್ನೂ ದೇವತಾಪ್ರತಿಮೆಗಳನ್ನೂ ಕೆತ್ತನೆಯ ವಿಗ್ರಹವನ್ನೂ ತೆಗೆದುಕೊಂಡು ಅವರೊಡನೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು