Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:2 - ಕನ್ನಡ ಸತ್ಯವೇದವು C.L. Bible (BSI)

2 ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದುಮಂದಿ ಪರಾಕ್ರಮಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ, “ನೀವು ಹೋಗಿ (ಲಯಿಷ್) ದೇಶವನ್ನು ಸಂಚರಿಸಿ ನೋಡಿ ಬನ್ನಿ,” ಎಂದು ಆಜ್ಞಾಪಿಸಿ ಕಳುಹಿಸಿದನರು . ಇವರು ಪ್ರಯಾಣ ಮಾಡುತ್ತಾ ಎಫ್ರಯಿಮ್ ಬೆಟ್ಟದ ಸೀಮೆಯಲ್ಲಿ ಇದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರು ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದು ಮಂದಿ ಪರಾಕ್ರಮಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ, “ನೀವು ಹೋಗಿ ಲಯಿಷ್ ದೇಶವನ್ನು ಸಂಚರಿಸಿ ನೋಡಿರಿ” ಎಂದು ಆಜ್ಞಾಪಿಸಿ ಕಳುಹಿಸಿದರು. ಇವರು ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮತ್ತು ಅವರು ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದು ಮಂದಿ ಪರಾಕ್ರಮ ಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ - ನೀವು ಹೋಗಿ [ಲಯಿಷ್] ದೇಶವನ್ನು ಸಂಚರಿಸಿ ನೋಡಿರಿ ಎಂದು ಆಜ್ಞಾಪಿಸಿ ಕಳುಹಿಸಿದರು. ಇವರು ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದು ಇಳುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದಾನ್ ಕುಲದವರು ತಮಗೆ ಭೂಮಿಯನ್ನು ಹುಡುಕುವುದಕ್ಕಾಗಿ ಐದು ಮಂದಿ ಸೈನಿಕರನ್ನು ಕಳುಹಿಸಿದರು. ಅವರು ತಮ್ಮ ವಾಸಕ್ಕಾಗಿ ಒಳ್ಳೆಯ ಸ್ಥಳವನ್ನು ಹುಡುಕಲು ಹೋದರು. ಆ ಐದು ಮಂದಿ ಚೊರ್ಗಾ ಮತ್ತು ಎಷ್ಟಾವೋಲ್ ನಗರದವರಾಗಿದ್ದರು. ಅವರು ದಾನ್ ಕುಲದವರ ಮನೆತನಕ್ಕೆ ಸೇರಿದವರಾದ ಕಾರಣ “ಭೂಮಿಯನ್ನು ಹುಡುಕಲು” ಅವರನ್ನು ಕಳುಹಿಸಲಾಗಿತ್ತು. ಆ ಐದು ಜನರು ಎಫ್ರಾಯೀಮ್ ಬೆಟ್ಟದ ಸೀಮೆಗೆ ಬಂದು ಮೀಕನ ಮನೆಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದಾನರು ದೇಶವನ್ನು ಸಂಚರಿಸಿ ನೋಡಿ, ಪರಿಶೋಧಿಸುವುದಕ್ಕಾಗಿ ತಮ್ಮ ಮೇರೆಗಳಲ್ಲಿರುವ ಚೊರ್ಗದಿಂದಲೂ, ಎಷ್ಟಾವೋಲಿನಿಂದಲೂ ತಮ್ಮ ಕುಟುಂಬದಲ್ಲಿ ಪರಾಕ್ರಮಶಾಲಿಗಳಾದ ಐದು ಮಂದಿಯನ್ನು ಕರೆದು, ಅವರ ಸಂಗಡ, “ನೀವು ಹೋಗಿ ದೇಶವನ್ನು ಸಂಚರಿಸಿ ನೋಡಿರಿ,” ಎಂದು ಹೇಳಿ ಕಳುಹಿಸಿದರು. ಹಾಗೆಯೇ ಇವರು ಎಫ್ರಾಯೀಮ್ ಬೆಟ್ಟದಲ್ಲಿರುವ ಮೀಕನ ಮನೆಯ ಬಳಿಗೆ ಬಂದು ಅಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:2
20 ತಿಳಿವುಗಳ ಹೋಲಿಕೆ  

ಇದಲ್ಲದೆ, ಅವನು ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್ ಕುಲದ ಪಾಳೆಯದಲ್ಲಿದ್ದಾಗ ಸರ್ವೇಶ್ವರನ ಆತ್ಮ ಅವನನ್ನು ಚೇತನಗೊಳಿಸತೊಡಗಿತು.


ನೂನನ ಮಗನಾದ ಯೆಹೋಶುವನು ಕಾನಾನ್ ನಾಡನ್ನೂ ಜೆರಿಕೋ ನಗರವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಇಬ್ಬರು ಗೂಢಚಾರರನ್ನು ಕಳುಹಿಸಿದನು. ಅವರು ಹೊರಟುಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು.


ಆಗ ಚೊರ್ಗಾ, ಎಷ್ಟಾವೋಲ್ ಊರುಗಳಿಂದ ಆರುನೂರು ಮಂದಿ ದಾನ್ ಕುಲದವರು ಯುದ್ಧಸನ್ನದ್ಧರಾಗಿ ಹೊರಟರು.


ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಲ್ಲಿ ಇರುವ ತಮ್ಮ ಬಂಧುಗಳ ಬಳಿಗೆ ಬಂದರು. ಆ ಬಂಧುಗಳು, “ನೀವು ಯಾವ ವರ್ತಮಾನ ತಂದಿದ್ದೀರಿ?” ಎಂದು ಅವರನ್ನು ಕೇಳಲು


ಕಾನಾನ್ ನಾಡನ್ನು ಸಂಚರಿಸಿ ನೋಡಿ ಬರುವುದಕ್ಕೆ ಅವರನ್ನು ಕಳಿಸುವಾಗ ಮೋಶೆ ಹೀಗೆಂದು ಸಂಬೋಧಿಸಿದನು: “ನೀವು ನೆಗೆಬಾ ಮಾರ್ಗವಾಗಿ ಮಲೆನಾಡಿಗೆ ಹತ್ತಿಹೋಗಿರಿ.


ಹಾಗೆಯೇ, ಅರಸನೊಬ್ಬನು ಇನ್ನೊಬ್ಬ ಅರಸನ ವಿರುದ್ಧ ಯುದ್ಧಕ್ಕೆ ಹೋಗುವುದಕ್ಕೆ ಮುಂಚೆ ಇಪ್ಪತ್ತು ಸಾವಿರ ಸೈನ್ಯದೊಡನೆ ಬರುವ ಶತ್ರುವನ್ನು ತನ್ನ ಹತ್ತು ಸಾವಿರ ಸೈನ್ಯದಿಂದ ಎದುರಿಸಲು ಸಾಧ್ಯವೇ ಎಂದು ಮೊದಲು ಕುಳಿತು ಆಲೋಚನೆ ಮಾಡುವುದಿಲ್ಲವೇ?


ಉದ್ದೇಶಗಳು ಕೈಗೂಡುವುವು ಹಿತಾಲೋಚನೆಯಿಂದ; ಬುದ್ಧಿವಂತರ ಆಲೋಚನೆ ಕೇಳದೆ ಹೂಡಬೇಡ ಯುದ್ಧ.


ಅವನು ಆ ಮುದುಕನಿಗೆ, “ನಾವು ಯೆಹೂದದ ಬೆತ್ಲೆಹೇಮಿನಿಂದ ಎಫ್ರಯಿಮ್ ಪರ್ವತಪ್ರದೇಶದ ಒಂದು ಮೂಲೆಯಲ್ಲಿರುವ ನಮ್ಮ ವಾಸಸ್ಥಳಕ್ಕೆ ಹೋಗುತ್ತಿದ್ದೇವೆ. ನಾನು ಅಲ್ಲಿಂದ ಯೆಹೂದದ ಬೆತ್ಲೆಹೇಮಿಗೆ ಹೋಗಿದ್ದೆ; ಈಗ ಮರಳಿ ಸರ್ವೇಶ್ವರನ ಮಂದಿರಕ್ಕೆ ಹೋಗುತ್ತಿದ್ದೇನೆ. ಇಲ್ಲಿ ಯಾರೂ ನಮ್ಮನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಲಿಲ್ಲ.


ಆ ಕಾಲದಲ್ಲಿ ಇಸ್ರಯೇಲರಿಗೆ ಅರಸನಿರಲಿಲ್ಲ. ಎಫ್ರಯಿಮ್ ಪರ್ವತ ಪ್ರದೇಶದ ಒಂದು ಮೂಲೆಯಲ್ಲಿ ಯಾರೋ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೆತ್ಲೆಹೇಮಿನವಳಾದ ಒಬ್ಬ ಸ್ತ್ರೀ ಅವನಿಗೆ ಉಪಪತ್ನಿಯಾಗಿದ್ದಳು.


ಅವನ ಬಂಧುಗಳೂ ತಂದೆಯ ಮನೆಯವರೆಲ್ಲರೂ ಬಂದು ಅವನ ಶವವನ್ನು ಎತ್ತಿಕೊಂಡು ಹೋಗಿ ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿದ್ದ ಅವನ ತಂದೆ ಮಾನೋಹನ ಸಮಾಧಿಯಲ್ಲಿ ಸ್ಥಾಪನೆಮಾಡಿದರು. ಅವನು ಇಸ್ರಯೇಲರನ್ನು ಇಪ್ಪತ್ತು ವರ್ಷ ಪಾಲಿಸಿದನು


ಚೊರ್ಗಾ ಎಂಬ ಊರಲ್ಲಿ ದಾನ್ ಕುಲದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿ ಬಂಜೆಯಾಗಿದ್ದುದರಿಂದ ಅವನಿಗೆ ಮಕ್ಕಳಿರಲಿಲ್ಲ.


ಅವರ ವಿಷಯವಾಗಿ ತಾನು ಕಂಡಿದ್ದ ಕನಸುಗಳನ್ನು ಜೋಸೆಫನು ನೆನಪಿಗೆ ತಂದುಕೊಂಡನು. ಅವರನ್ನು ನೋಡಿ, “ನೀವು ಗೂಢಚಾರರು; ನಮ್ಮ ದೇಶದ ದುರ್ಬಲ ಸ್ಥಳಗಳನ್ನು ಪತ್ತೆಹಚ್ಚುವುದಕ್ಕಾಗಿ ಬಂದವರು,” ಎಂದನು.


ಇಳಿಜಾರು ಪ್ರದೇಶದಲ್ಲಿ


ಎಫ್ರಯಿಮ್ ಬೆಟ್ಟದ ಪ್ರಾಂತ್ಯದಲ್ಲಿ ಮೀಕ ಎಂಬ ಒಬ್ಬ ಮನುಷ್ಯನು ಇದ್ದನು.


ಇವರು ಮೀಕನ ಮನೆಯ ಹತ್ತಿರದಲ್ಲಿ ಆ ಯೌವನಸ್ಥನಾದ ಲೇವಿಯನು ಮಾತಾಡುವುದನ್ನು ಕೇಳಿ ಗುರುತು ಹಿಡಿದು ಅವನ ಬಳಿಗೆ ಹೋಗಿ, “ನಿನ್ನನ್ನು ಇಲ್ಲಿಗೆ ಕರೆತಂದವರಾರು? ಇಲ್ಲಿ ಏನು ಕೆಲಸ ಮಾಡುತ್ತಿರುವೆ? ಏನು ಸಂಬಳ ಸಿಕ್ಕುತ್ತಿದೆ?” ಎಂದು ಅವನನ್ನು ವಿಚಾರಿಸಿದರು. ಅವನು,


ಇಸ್ರಯೇಲಿನ ಕೆಲವು ಜನರು ನಮ್ಮ ನಾಡಿನಲ್ಲಿ ಸಂಚರಿಸಿ ನೋಡಲು ಈ ರಾತ್ರಿ ನಗರಕ್ಕೆ ಬಂದಿದ್ದಾರೆಂದು ಜೆರಿಕೋವಿನ ಅರಸನಿಗೆ ತಿಳಿಸಲಾಯಿತು.


ಅವರು ಅಲ್ಲಿಂದ ಮುಂದಕ್ಕೆ ಪ್ರಯಾಣ ಮಾಡಿ ಎಫ್ರಯಿಮ್ ಪರ್ವತಪ್ರದೇಶದಲ್ಲಿದ್ದ ಮೀಕನ ಮನೆಯ ಹತ್ತಿರಕ್ಕೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು