Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:20 - ಕನ್ನಡ ಸತ್ಯವೇದವು C.L. Bible (BSI)

20 ಯಾಜಕನು ಈ ಮಾತನ್ನು ಕೇಳಿ ಸಂತೋಷಪಟ್ಟು ಏಫೋದನ್ನೂ ದೇವತಾಪ್ರತಿಮೆಗಳನ್ನೂ ಕೆತ್ತನೆಯ ವಿಗ್ರಹವನ್ನೂ ತೆಗೆದುಕೊಂಡು ಅವರೊಡನೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾಜಕನು ಈ ಮಾತನ್ನು ಕೇಳಿ ಸಂತೋಷಪಟ್ಟು ಏಫೋದನ್ನೂ ದೇವತಾಪ್ರತಿಮೆಗಳನ್ನೂ, ಕೆತ್ತನೆಯ ವಿಗ್ರಹವನ್ನೂ, ತೆಗೆದುಕೊಂಡು ಅವರ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯಾಜಕನು ಈ ಮಾತನ್ನು ಕೇಳಿ ಸಂತೋಷಪಟ್ಟು ಏಫೋದನ್ನೂ ದೇವತಾಪ್ರತಿಮೆಗಳನ್ನೂ ಕೆತ್ತನೆಯ ವಿಗ್ರಹವನ್ನೂ ತೆಗೆದುಕೊಂಡು ಅವರ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಇದರಿಂದ ಲೇವಿಯನಿಗೆ ಸಂತೋಷವಾಯಿತು. ಅವನು ಏಫೋದನ್ನೂ ಗೃಹದೇವತೆಗಳನ್ನೂ ಕೆತ್ತನೆಯ ಕೆಲಸದ ವಿಗ್ರಹವನ್ನೂ ತೆಗೆದುಕೊಂಡು ದಾನ್ಯರ ಜೊತೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಯಾಜಕನು ಸಂತೋಷಪಟ್ಟು ಏಫೋದನ್ನೂ, ಪ್ರತಿಮೆಗಳನ್ನೂ, ಕೆತ್ತಿದ ವಿಗ್ರಹವನ್ನೂ ತೆಗೆದುಕೊಂಡು ಜನರ ಮಧ್ಯದಲ್ಲಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:20
13 ತಿಳಿವುಗಳ ಹೋಲಿಕೆ  

ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.


ನಾನು ಯಾರ ಬೆಳ್ಳಿಬಂಗಾರಕ್ಕೂ ಬಟ್ಟೆಬರೆಗೂ ಆಶೆಪಟ್ಟವನಲ್ಲ.


ಇದರಿಂದ ನಾಡು ಶೋಕಸಾಗರದಲ್ಲಿ ಮುಳುಗಿದೆ. ಅದರ ನಿವಾಸಿಗಳೆಲ್ಲ ನರಳುತ್ತಿದ್ದಾರೆ. ನೆಲದ ಮೇಲಿನ ಜಂತುಗಳು, ಆಕಾಶದ ಪಕ್ಷಿಗಳು ಬಳಲುತ್ತಿವೆ. ಜಲಜಂತುಗಳು ಸಹ ನಶಿಸಿಹೋಗುತ್ತಿವೆ.


ನೀವು ಹಿಡಿಯುವಷ್ಟೆ ಜವೆಗೋಧಿಗೆ, ಚೂರುಪಾರು ರೊಟ್ಟಿಗೆ ಆಸೆಪಟ್ಟು, ಸುಳ್ಳುಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.”


ಹೊಟ್ಟೆಬಾಕ ಕುನ್ನಿಗಳು; ಎಂದಿಗೂ ತೃಪ್ತಿ ಪಡೆಯದ ಶುನಕಗಳು. ಇಂಥವರು ಕುರಿಗಳನ್ನು ಕಾಯಲು ಯೋಗ್ಯರೋ? ಇವರು ಬುದ್ಧಿಹೀನರು. ಇವರಲ್ಲಿ ಪ್ರತಿಯೊಬ್ಬನು ಕೊಳ್ಳೆಹೊಡೆಯಬೇಕೆಂದು ತನ್ನದೇ ಆದ ಮಾರ್ಗವನ್ನು ಹಿಡಿದಿದ್ದಾನೆ.


ಜಿಗಣೆಗೆ “ಕೊಡು, ಕೊಡು” ಎಂಬ ಇಬ್ಬರು ಹೆಣ್ಣು ಮಕ್ಕಳುಂಟು; ಎಂದೂ ತೃಪ್ತಿಪಡೆಯದವು ಮೂರುಂಟು; ಹೌದು, ‘ಸಾಕು’ ಎನ್ನದವುಗಳು ನಾಲ್ಕುಂಟು:


ಮೀಕನು ಅವನಿಗೆ, “ನೀನು ನಮ್ಮಲ್ಲಿರು; ನಮಗೆ ತಂದೆಯೂ ಯಾಜಕನೂ ಆಗಿರು. ನಿನಗೆ ವರ್ಷಕ್ಕೆ ಹತ್ತು ಬೆಳ್ಳಿ ನಾಣ್ಯಗಳನ್ನು, ಉಡಿಗೆತೊಡಿಗೆಯನ್ನು ಹಾಗು ಆಹಾರವನ್ನು ಕೊಡುತ್ತೇನೆ,” ಎನ್ನಲು


“ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬೇಡಿ; ಕೆತ್ತಿದ ಪ್ರತಿಮೆಯನ್ನಾಗಲಿ, ಕಲ್ಲಿನ ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬೇಡಿ; ಆರಾಧನೆಗಾಗಿ ವಿಚಿತ್ರವಾಗಿ ಕೆತ್ತಿದ ಸ್ತಂಭಗಳನ್ನು ನಿಮ್ಮ ನಾಡಿನಲ್ಲಿ ಇಡಬೇಡಿ. ನಾನೇ ನಿಮ್ಮ ಸರ್ವೇಶ್ವರನಾದ ದೇವರು.


ಅವರು ಅವನಿಗೆ, “ಬಾಯಿಮುಚ್ಚಿ ಸುಮ್ಮನಿರಿ, ನಮ್ಮ ಜೊತೆಯಲ್ಲಿ ಬಂದು ನಮಗೆ ತಂದೆಯೂ ಯಾಜಕನೂ ಆಗಿರು. ಒಂದೇ ಒಂದು ಮನೆಗೆ ಯಾಜಕನಾಗಿರುವುದು ಉತ್ತಮವೋ ಅಥವಾ ಇಸ್ರಯೇಲರ ಒಂದು ಕುಲಕ್ಕೂ ಗೋತ್ರಕ್ಕೂ ಯಾಜಕನಾಗಿರುವುದು ಉತ್ತಮವೋ?” ಎಂದರು.


ತರುವಾಯ ಅವರು ತಮ್ಮ ಮಡದಿ ಮಕ್ಕಳನ್ನೂ ಕುರಿದನ ಮೊದಲಾದ ಸೊತ್ತನ್ನೂ ಮುಂದಾಗಿ ಕಳುಹಿಸಿ ತಾವೂ ಹಿಂದಿನಿಂದ ಹೊರಟರು.


ಮಾರ್ಗ ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಪ್ರಾರಂಭದಲ್ಲಿ ಬಾಬಿಲೋನಿನ ಅರಸ ಶಕುನ ನೋಡಲು ನಿಂತಿರುವನು. ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆ ಕೇಳಿ, ಹಸ್ತರೇಖೆಯನ್ನು ಪರೀಕ್ಷಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು