Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:28 - ಕನ್ನಡ ಸತ್ಯವೇದವು C.L. Bible (BSI)

28 ಆ ಪಟ್ಟಣ ಚೀದೋನಿಗೆ ದೂರವಾಗಿದ್ದರಿಂದಲೂ ಸಮೀಪದಲ್ಲಿ ಪರಿಚಯಸ್ಥರಾರೂ ಇಲ್ಲದ್ದರಿಂದಲೂ ಅವರಿಗೆ ಸಹಾಯ ದೊರಕಲಿಲ್ಲ. ಬೇತ್ ರೆಹೋಬಿನ ತಗ್ಗಿನಲ್ಲಿದ್ದ ಈ ಪಟ್ಟಣವನ್ನು ದಾನ್ಯರು ತಿರುಗಿ ಕಟ್ಟಿಸಿ ಅದರಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆ ಪಟ್ಟಣವು ಚೀದೋನಿಗೆ ದೂರವಾಗಿದ್ದುದರಿಂದಲೂ, ಸಮೀಪದಲ್ಲಿ ಪರಿಚಯಸ್ಥರು ಯಾರು ಇಲ್ಲದೆ ಇದ್ದುದರಿಂದಲೂ, ಅವರಿಗೆ ಸಹಾಯದೊರಕಲಿಲ್ಲ. ಬೇತ್‌ರೆಹೋಬಿನ ತಗ್ಗಿನಲ್ಲಿದ್ದ ಈ ಪಟ್ಟಣವನ್ನು ದಾನ್ಯರು ಪುನಃ ಕಟ್ಟಿಸಿ ಅದರಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆ ಪಟ್ಟಣವು ಚೀದೋನಿಗೆ ದೂರವಾಗಿದ್ದದ್ದರಿಂದಲೂ ಸಮೀಪದಲ್ಲಿ ಪರಿಚಯಸ್ಥರಾರೂ ಇಲ್ಲದ್ದರಿಂದಲೂ ಅವರಿಗೆ ಸಹಾಯದೊರಕಲಿಲ್ಲ. ಬೇತ್‍ರೆಹೋಬಿನ ತಗ್ಗಿನಲ್ಲಿದ್ದ ಈ ಪಟ್ಟಣವನ್ನು ದಾನ್ಯರು ತಿರಿಗಿ ಕಟ್ಟಿಸಿ ಅದರಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಲಯಿಷಿನಲ್ಲಿ ವಾಸಮಾಡುತ್ತಿದ್ದ ಜನರನ್ನು ರಕ್ಷಿಸುವವರು ಯಾರೂ ಇರಲಿಲ್ಲ. ಅವರು ಚೀದೋನ್ ನಗರದಿಂದ ಬಹುದೂರದಲ್ಲಿದ್ದ ಕಾರಣ ಅವರೂ ಬರುವಂತಿರಲಿಲ್ಲ. ಲಯಿಷಿನವರು ಆರಾಮಿನ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಂಡಿರಲಿಲ್ಲ. ಹೀಗಾಗಿ ಅವರೂ ಸಹಾಯಕ್ಕೆ ಬರಲಿಲ್ಲ. ಬೇತ್‌ರೆಹೋಬಿನ ಕಣಿವೆಯಲ್ಲಿದ್ದ ಈ ನಗರವನ್ನು ದಾನ್ಯರು ಹೊಸದಾಗಿ ಕಟ್ಟಿದರು. ಆ ನಗರವು ಅವರ ವಾಸಸ್ಥಾನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅದು ಸೀದೋನಿಗೆ ದೂರವಾಗಿದ್ದುದರಿಂದಲೂ, ಯಾವ ಮನುಷ್ಯನ ಸಂಗಡಲಾದರೂ ಅವರಿಗೆ ಕೆಲಸವಿಲ್ಲದ್ದರಿಂದಲೂ ಅವರನ್ನು ಕಾಪಾಡಲು ಯಾರೂ ಇರಲಿಲ್ಲ. ಆ ಪಟ್ಟಣವು ಬೇತ್‌ರೆಹೋಬಿಗೆ ಸಮೀಪವಾದ ತಗ್ಗಿನಲ್ಲಿ ಇತ್ತು. ಈ ಪಟ್ಟಣವನ್ನು ದಾನ್ಯರು ಪುನಃ ಕಟ್ಟಿಸಿ ಅದರಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:28
14 ತಿಳಿವುಗಳ ಹೋಲಿಕೆ  

ತಾವು ದಾವೀದನಿಗೆ ವೈರಿಗಳಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಹಣಕೊಟ್ಟು ಬೇತ್ ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಸಿರಿಯಾದವರ ಇಪ್ಪತ್ತು ಸಾವಿರಮಂದಿ ಕಾಲಾಳುಗಳನ್ನು, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನು ಹಾಗು ಟೋಬ್ ದೇಶದಿಂದ ಹನ್ನೆರಡು ಸಾವಿರ ಮಂದಿ ದಂಡಾಳುಗಳನ್ನೂ ಬರಮಾಡಿದರು.


ಆ ಐದು ಮಂದಿ ಹೊರಟು ಲಯಿಷಿಗೆ ಬಂದರು. ಇಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖಸಮಾಧಾನಗಳಿಂದ ಜೀವಿಸುತ್ತಾರೆ; ಇವರನ್ನು ಅಡಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ. ಇವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಬಳಕೆಯಿಲ್ಲದವರು ಎಂಬುದನ್ನು ತಿಳಿದುಕೊಂಡು ಹಿಂದಿರುಗಿ,


ಅವರು ಬೆಟ್ಟವನ್ನು ಹತ್ತಿ ಚಿನ್ ಮರುಭೂಮಿಯಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನವರೆಗೆ ಆ ನಾಡನ್ನು ಸಂಚರಿಸಿ ನೋಡಿದರು.


“ಹಿಂಸೆಗೆ ಈಡಾದ ಕನ್ಯೆಯಂತೆ ಇರುವ ಸಿದೋನ್ ನಗರವೇ, ಇನ್ನು ಮೇಲೆ ನಿನಗಿರದು ಸಂತೃಪ್ತಿ: ಸಮುದ್ರ ದಾಟಿ ಸೈಪ್ರಸ್ಸಿಗೆ ಹಾದುಹೋಗು, ಅಲ್ಲಿಯೂ ನಿನಗೆ ದೊರಕದು ವಿಶ್ರಾಂತಿ,” ಎಂದು ಹೇಳಿದ್ದಾರೆ.


ಸಿದೋನ್ ನಗರವೇ, ನಿನಗೆ ನಾಚಿಕೆಗೇಡು ! ಸಮುದ್ರವೂ ಸಮುದ್ರ ತಳವೂ ನಿನ್ನನ್ನು ನಿರಾಕರಿಸುತ್ತಾ; “ನಾನು ಗರ್ಭಧರಿಸಲಿಲ್ಲ, ಪ್ರಸವಿಸಲಿಲ್ಲ, ಪುತ್ರಪುತ್ರಿಯರನ್ನು ಸಾಕಿ ಸಲಹಲಿಲ್ಲ,” ಎಂದು ನುಡಿದಿದೆ.


ದೇವನ ನೆನೆಯದವರೇ, ನೀಡಿರಿ ಗಮನವನು I ಇಲ್ಲವಾದರೆ ಛಿನ್ನಛಿನ್ನವಾಗಿಸಿಬಿಟ್ಟೇನು I ನನ್ನ ಕೈಯಿಂದ ತಪ್ಪಿಸುವವರಾರು ನಿಮ್ಮನು? II


ಇಲ್ಲದಿರೆ ಶತ್ರು ತಿಳಿದಾನು ನನಗೆ ರಕ್ಷಕನಿಲ್ಲವೆಂದು I ಝಲ್ಲನೆ ಸೀಳಿಬಿಟ್ಟಾನು ಸಿಂಹದಂತೆ ಮೇಲೆಬಿದ್ದು II


ನಿನ್ನ ದಾಸಿಯಾದ ನನಗೆ ಇಬ್ಬರು ಮಕ್ಕಳಿದ್ದರು. ಒಂದು ದಿವಸ ಇವರು ಇಬ್ಬರೂ ಹೊಲದಲ್ಲಿ ಜಗಳವಾಡಿದರು. ಅಲ್ಲಿ ಬಿಡಿಸುವವರಾರೂ ಇರಲಿಲ್ಲ. ಆದುದರಿಂದ ಒಬ್ಬನು ಇನ್ನೊಬ್ಬನನ್ನು ಹೊಡೆದು ಕೊಂದನು.


ಆ ಕಾಲದಲ್ಲಿ ಇಸ್ರಯೇಲರಿಗೆ ಅರಸನಿರಲಿಲ್ಲ. ದಾನ್ ಕುಲದವರಿಗೆ ಆವರೆಗೂ ಇಸ್ರಯೇಲರಲ್ಲಿ ಆಸ್ತಿಪಾಸ್ತಿ ಸಿಕ್ಕದೆ ಇದ್ದುದರಿಂದ ಅವರು ತಮಗಾಗಿ ವಾಸಸ್ಥಳವನ್ನು ಹುಡುಕುತ್ತಿದ್ದರು.


ಸರ್ವೇಶ್ವರ ಅವರನ್ನು ಇಸ್ರಯೇಲರ ಕೈವಶ ಮಾಡಿದರು. ಇವರು ಅವರನ್ನು ದೊಡ್ಡ ಚೀದೋನ್ ಹಾಗು ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಮತ್ತು ಪೂರ್ವ ದಿಕ್ಕಿನಲ್ಲಿರುವ ಮಿಚ್ಫೆಯ ಬಯಲಿನವರೆಗೂ ಹಿಂದಟ್ಟಿ, ಒಬ್ಬನೂ ಉಳಿಯದಂತೆ ಸದೆಬಡಿದರು.


ಮುಂಚೆ ಲಯಿಷ್ ಎಂಬ ಹೆಸರಿದ್ದ ಆ ಪಟ್ಟಣಕ್ಕೆ ಈಗ ‘ದಾನ್’ ಎಂದು ಹೆಸರಿಟ್ಟರು. ದಾನ್ ಎಂಬುದು ಇವರ ಮೂಲ ಪುರುಷನೂ ಇಸ್ರಯೇಲನ ಮಗನೂ ಆದವನ ಹೆಸರು.


ಕಾಬೂಲ್, ಎಬ್ರೋನ್, ರೆಹೋಬ್, ಹಮ್ಮೋನ್, ಕಾನಾ ಇವುಗಳ ಮೇಲೆ ಸಿದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.


ಯಗ್ಜೇರಿಗೂ ಅಲ್ಲಿಂದ ಗಿಲ್ಯಾದ್ ಪ್ರಾಂತ್ಯ, ತಖ್ತೀಮ್ ಹೊಜೀಪ್ರದೇಶ ಇವುಗಳ ಮೇಲೆ ಯಾನಿನ ದಾನ್ ಎಂಬಲ್ಲಿಗೂ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು