ನ್ಯಾಯಸ್ಥಾಪಕರು 18:5 - ಕನ್ನಡ ಸತ್ಯವೇದವು C.L. Bible (BSI)5 ಆಗ ಅವರು, “ದಯವಿಟ್ಟು ನಮ್ಮ ಪ್ರಯಾಣ ಸಫಲ ಆಗುವುದೋ ಇಲ್ಲವೋ ಎಂಬುದನ್ನು ದೇವರ ಸನ್ನಿಧಿಯಲ್ಲಿ ವಿಚಾರಿಸು,” ಎಂದು ಬೇಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಅವರು ಅವನಿಗೆ, “ದಯವಿಟ್ಟು ನಮ್ಮ ಪ್ರಯಾಣವು ಸಫಲವಾಗುವುದೋ ಇಲ್ಲವೋ ಎಂಬುದನ್ನು ದೇವರ ಸನ್ನಿಧಿಯಲ್ಲಿ ವಿಚಾರಿಸು” ಎಂದು ಬೇಡಿಕೊಳ್ಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಅವರು ಅವನಿಗೆ - ದಯವಿಟ್ಟು ನಮ್ಮ ಪ್ರಯಾಣವು ಸಫಲವಾಗುವದೋ ಇಲ್ಲವೋ ಎಂಬದನ್ನು ದೇವರ ಸನ್ನಿಧಿಯಲ್ಲಿ ವಿಚಾರಿಸು ಎಂದು ಬೇಡಿಕೊಳ್ಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅವರು ಅವನಿಗೆ, “ವಾಸಕ್ಕಾಗಿ ಭೂಮಿಯನ್ನು ಹುಡುಕಲು ಕೈಕೊಂಡ ನಮ್ಮ ಪ್ರಯಾಣ ಸಫಲವಾಗುವುದೋ ಇಲ್ಲವೋ ಎಂಬುದನ್ನು ನಾವು ತಿಳಿದುಕೊಳ್ಳಬೇಕಾಗಿದೆ. ದಯವಿಟ್ಟು ದೇವರಲ್ಲಿ ಈ ವಿಷಯ ಕೇಳು” ಎಂದು ಕೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಅವರು ಅವನಿಗೆ, “ನಾವು ಹೋಗುವ ನಮ್ಮ ಮಾರ್ಗವು ಸಫಲವಾಗುವುದೋ? ಎಂದು ತಿಳಿಯುವ ಹಾಗೆ ದಯಮಾಡಿ ದೇವರನ್ನು ಕೇಳು,” ಎಂದರು. ಅಧ್ಯಾಯವನ್ನು ನೋಡಿ |
ಯಾಜಕ ಊರೀಯನಿಗೆ, “ಪ್ರಾತಃಕಾಲದ ದಹನಬಲಿಯನ್ನು, ಸಾಯಂಕಾಲದ ನೈವೇದ್ಯವನ್ನು ಅರಸನು ತರುವ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಇವುಗಳನ್ನು ಮತ್ತು ಜನರು ತರುವ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನು ಈ ಮಹಾ ಪೂಜಾಪೀಠದ ಮೇಲೆ ಸಮರ್ಪಿಸಬೇಕು; ಮತ್ತು ದಹನಬಲಿ ಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ದೈವೋತ್ತರಗಳನ್ನು ತಿಳಿದುಕೊಳ್ಳುವುದಕ್ಕಾಗಿ ತಾಮ್ರಪೀಠವನ್ನು ಉಪಯೋಗಿಸುವೆನು,” ಎಂದು ಹೇಳಿದನು.