ನ್ಯಾಯಸ್ಥಾಪಕರು 18:7 - ಕನ್ನಡ ಸತ್ಯವೇದವು C.L. Bible (BSI)7 ಆ ಐದು ಮಂದಿ ಹೊರಟು ಲಯಿಷಿಗೆ ಬಂದರು. ಇಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖಸಮಾಧಾನಗಳಿಂದ ಜೀವಿಸುತ್ತಾರೆ; ಇವರನ್ನು ಅಡಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ. ಇವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಬಳಕೆಯಿಲ್ಲದವರು ಎಂಬುದನ್ನು ತಿಳಿದುಕೊಂಡು ಹಿಂದಿರುಗಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ಐದು ಮಂದಿ ಹೊರಟು ಲಯಿಷಿಗೆ ಬಂದು, ಅಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖ ಸಮಾಧಾನಗಳಿಂದ ಜೀವಿಸುತ್ತಾರೆ; ಅವರನ್ನು ಅಡಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಒಡನಾಟವಿಲ್ಲದವರು ಎಂಬುದನ್ನು ತಿಳಿದುಕೊಂಡು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆ ಐದು ಮಂದಿ ಹೊರಟು ಲಯಿಷಿಗೆ ಬಂದು - ಅಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖ ಸಮಾಧಾನಗಳಿಂದ ಜೀವಿಸುತ್ತಾರೆ; ಅವರನ್ನು ತಗ್ಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಬಳಕೆಯಿಲ್ಲದವರು ಎಂಬದನ್ನು ತಿಳಿದುಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆ ಐದು ಜನರು ಹೊರಟರು. ಅವರು ಲಯಿಷ್ ನಗರಕ್ಕೆ ಬಂದರು. ಅಲ್ಲಿಯ ಜನರು ಸುರಕ್ಷಿತವಾಗಿರುವುದನ್ನು ಅವರು ನೋಡಿದರು. ಚೀದೋನ್ಯರು ಅವರನ್ನು ಆಳುತ್ತಿದ್ದರು. ಎಲ್ಲವೂ ಶಾಂತವಾಗಿತ್ತು; ಸಮಾಧಾನಕರವಾಗಿತ್ತು; ಸುಖಕರವಾಗಿತ್ತು. ಸಮೀಪದಲ್ಲಿ ಅವರನ್ನು ಪೀಡಿಸುವ ಶತ್ರುಗಳು ಇರಲಿಲ್ಲ. ಅವರು ಚೀದೋನ್ ನಗರದಿಂದ ಬಹಳ ದೂರ ಇದ್ದರು. ಅವರು ಆರಾಮಿನ ಜನರೊಡನೆ ಯಾವ ಒಪ್ಪಂದವನ್ನೂ ಇಟ್ಟುಕೊಂಡಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಆ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ, ಅದರಲ್ಲಿ ವಾಸಿಸಿರುವ ಆ ಜನರನ್ನು ನೋಡುವಾಗ, ಅವರು ನಿರ್ಭೀತರಾಗಿಯೂ, ಸೀದೋನ್ಯರ ಹಾಗೆ ನೆಮ್ಮದಿಯಾಗಿಯೂ, ಸುರಕ್ಷಿತವಾಗಿಯೂ ಇದ್ದರು. ಅವರಿಗೆ ಯಾವ ಕೊರತೆಯು ಇರಲಿಲ್ಲ. ಅವರು ಸಮೃದ್ಧಿಯಲ್ಲಿದ್ದರು. ಸೀದೋನ್ಯರಿಂದ ದೂರವಾಗಿ ಜೀವಿಸುತ್ತಿದ್ದರು. ಬೇರೆ ಯಾರೊಂದಿಗೂ ಸಂಬಂಧವನ್ನು ಬೆಳೆಸಿರಲಿಲ್ಲ. ಅಧ್ಯಾಯವನ್ನು ನೋಡಿ |