Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:8 - ಕನ್ನಡ ಸತ್ಯವೇದವು C.L. Bible (BSI)

8 ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಲ್ಲಿ ಇರುವ ತಮ್ಮ ಬಂಧುಗಳ ಬಳಿಗೆ ಬಂದರು. ಆ ಬಂಧುಗಳು, “ನೀವು ಯಾವ ವರ್ತಮಾನ ತಂದಿದ್ದೀರಿ?” ಎಂದು ಅವರನ್ನು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹಿಂದಿರುಗಿ ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಲ್ಲಿರುವ ತಮ್ಮ ಬಂಧುಗಳ ಬಳಿಗೆ ಬಂದರು. ಅವರ ಬಂಧುಗಳು, “ನೀವು ಯಾವ ವರ್ತಮಾನ ತಂದಿದ್ದೀರಿ” ಎಂದು ಅವರನ್ನು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹಿಂದಿರುಗಿ ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಲ್ಲಿರುವ ತಮ್ಮ ಬಂಧುಗಳ ಬಳಿಗೆ ಬಂದರು. ಅವರ ಬಂಧುಗಳು - ನೀವು ಯಾವ ವರ್ತಮಾನ ತಂದಿದ್ದೀರಿ ಎಂದು ಅವರನ್ನು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ಐದು ಜನರು ಚೊರ್ಗಾ, ಎಷ್ಟಾವೋಲ್ ನಗರಗಳಿಗೆ ಹಿಂತಿರುಗಿಹೋದರು. ಅವರ ಬಂಧುಗಳು, “ನೀವು ಯಾವ ವರ್ತಮಾನ ತಂದಿದ್ದೀರಿ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಚೊರ್ಗದಲ್ಲಿಯೂ, ಎಷ್ಟಾವೋಲಿನಲ್ಲಿಯೂ ಇರುವ ಸಹೋದರರ ಬಳಿಗೆ ತಿರುಗಿ ಬಂದರು. ಅವರ ಸಹೋದರರಾದ ದಾನರು ಅವರಿಗೆ, “ನೀವು ಯಾವ ವರ್ತಮಾನ ತಂದಿದ್ದೀರಿ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:8
7 ತಿಳಿವುಗಳ ಹೋಲಿಕೆ  

ಆಗ ಚೊರ್ಗಾ, ಎಷ್ಟಾವೋಲ್ ಊರುಗಳಿಂದ ಆರುನೂರು ಮಂದಿ ದಾನ್ ಕುಲದವರು ಯುದ್ಧಸನ್ನದ್ಧರಾಗಿ ಹೊರಟರು.


ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದುಮಂದಿ ಪರಾಕ್ರಮಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ, “ನೀವು ಹೋಗಿ (ಲಯಿಷ್) ದೇಶವನ್ನು ಸಂಚರಿಸಿ ನೋಡಿ ಬನ್ನಿ,” ಎಂದು ಆಜ್ಞಾಪಿಸಿ ಕಳುಹಿಸಿದನರು . ಇವರು ಪ್ರಯಾಣ ಮಾಡುತ್ತಾ ಎಫ್ರಯಿಮ್ ಬೆಟ್ಟದ ಸೀಮೆಯಲ್ಲಿ ಇದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು.


ಅವನ ಬಂಧುಗಳೂ ತಂದೆಯ ಮನೆಯವರೆಲ್ಲರೂ ಬಂದು ಅವನ ಶವವನ್ನು ಎತ್ತಿಕೊಂಡು ಹೋಗಿ ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿದ್ದ ಅವನ ತಂದೆ ಮಾನೋಹನ ಸಮಾಧಿಯಲ್ಲಿ ಸ್ಥಾಪನೆಮಾಡಿದರು. ಅವನು ಇಸ್ರಯೇಲರನ್ನು ಇಪ್ಪತ್ತು ವರ್ಷ ಪಾಲಿಸಿದನು


ಚೊರ್ಗಾ ಎಂಬ ಊರಲ್ಲಿ ದಾನ್ ಕುಲದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿ ಬಂಜೆಯಾಗಿದ್ದುದರಿಂದ ಅವನಿಗೆ ಮಕ್ಕಳಿರಲಿಲ್ಲ.


ಇಳಿಜಾರು ಪ್ರದೇಶದಲ್ಲಿ


ಆ ಐದು ಮಂದಿ ಹೊರಟು ಲಯಿಷಿಗೆ ಬಂದರು. ಇಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖಸಮಾಧಾನಗಳಿಂದ ಜೀವಿಸುತ್ತಾರೆ; ಇವರನ್ನು ಅಡಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ. ಇವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಬಳಕೆಯಿಲ್ಲದವರು ಎಂಬುದನ್ನು ತಿಳಿದುಕೊಂಡು ಹಿಂದಿರುಗಿ,


ಅವರು, “ಏಳಿ, ಅವರಿಗೆ ವಿರುದ್ಧ ಯುದ್ಧಕ್ಕೆ ಹೋಗೋಣ. ನಾವು ಆ ದೇಶವನ್ನು ನೋಡಿದೆವು; ಅದು ಬಹು ಉತ್ತಮ ದೇಶ. ನೀವು ಸುಮ್ಮನೆ ಕುಳಿತುಕೊಳ್ಳುವುದೇಕೆ? ತಡಮಾಡದೆ ಹೊರಡಿ; ಆ ದೇಶವನ್ನು ನಮ್ಮದಾಗಿಸಿಕೊಳ್ಳೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು