ನ್ಯಾಯಸ್ಥಾಪಕರು 19:1 - ಕನ್ನಡ ಸತ್ಯವೇದವು C.L. Bible (BSI)1 ಆ ಕಾಲದಲ್ಲಿ ಇಸ್ರಯೇಲರಿಗೆ ಅರಸನಿರಲಿಲ್ಲ. ಎಫ್ರಯಿಮ್ ಪರ್ವತ ಪ್ರದೇಶದ ಒಂದು ಮೂಲೆಯಲ್ಲಿ ಯಾರೋ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೆತ್ಲೆಹೇಮಿನವಳಾದ ಒಬ್ಬ ಸ್ತ್ರೀ ಅವನಿಗೆ ಉಪಪತ್ನಿಯಾಗಿದ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಎಫ್ರಾಯೀಮ್ ಪರ್ವತಪ್ರದೇಶದ ಒಂದು ದೂರ ಸ್ಥಳದಲ್ಲಿ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೇತ್ಲೆಹೇಮಿನವಳಾದ ಒಬ್ಬ ಸ್ತ್ರೀಯು ಅವನಿಗೆ ಉಪಪತ್ನಿಯಾಗಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಎಫ್ರಾಯೀಮ್ ಪರ್ವತಪ್ರದೇಶದ ಒಂದು ಮೂಲೆಯಲ್ಲಿ ಒಬ್ಬಾನೊಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೇತ್ಲೆಹೇವಿುನವಳಾದ ಒಬ್ಬ ಸ್ತ್ರೀಯು ಅವನಿಗೆ ಉಪಪತ್ನಿಯಾಗಿದ್ದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆಗಿನ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಎಫ್ರಾಯೀಮ್ ಬೆಟ್ಟಪ್ರದೇಶದ ಒಂದು ಮೂಲೆಯಲ್ಲಿ ಒಬ್ಬ ಲೇವಿಯು ವಾಸಮಾಡುತ್ತಿದ್ದನು. ಆ ಮನುಷ್ಯನಿಗೆ ಒಬ್ಬ ಉಪಪತ್ನಿ ಇದ್ದಳು. ಅವಳು ಯೆಹೂದದ ಬೆತ್ಲೆಹೇಮಿನವಳಾಗಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇಸ್ರಾಯೇಲಿನಲ್ಲಿ ಆ ದಿವಸಗಳಲ್ಲಿ ಅರಸನಿರಲಿಲ್ಲ. ಎಫ್ರಾಯೀಮ್ ಬೆಟ್ಟದ ಒಂದು ಮೂಲೆಯಲ್ಲಿ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಅವನು ಯೆಹೂದದ ಬೇತ್ಲೆಹೇಮಿನವಳಾದಂಥ ಸ್ತ್ರೀಯನ್ನು ಉಪಪತ್ನಿಯಾಗಿ ತೆಗೆದುಕೊಂಡಿದ್ದನು. ಅಧ್ಯಾಯವನ್ನು ನೋಡಿ |