Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:13 - ಕನ್ನಡ ಸತ್ಯವೇದವು C.L. Bible (BSI)

13 ಅವನು ಮತ್ತೆ ತನ್ನ ಆಳಿಗೆ, “ನಾವು ಬೇಗನೆ ಹೋಗಿ ಮುಂದಿರುವ ಗಿಬೆಯದಲ್ಲಾಗಲಿ, ದಾಮದಲ್ಲಾಗಲಿ ತಂಗೋಣ ಬಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನು ತಿರುಗಿ ತನ್ನ ಆಳಿಗೆ, “ನಾವು ಬೇಗನೆ ಹೋಗಿ ಮುಂದಿರುವ ಗಿಬೆಯದಲ್ಲಾಗಲಿ, ರಾಮದಲ್ಲಾಗಲಿ ಇಳಿದುಕೊಳ್ಳೋಣ ಬಾ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವನು ತಿರಿಗಿ ತನ್ನ ಆಳಿಗೆ - ನಾವು ಬೇಗನೆ ಹೋಗಿ ಮುಂದಿರುವ ಗಿಬೆಯದಲ್ಲಾಗಲಿ ರಾಮದಲ್ಲಾಗಲಿ ಇಳುಕೊಳ್ಳೋಣ ಬಾ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆ ಲೇವಿಯು ಮತ್ತೆ ತನ್ನ ಸೇವಕನಿಗೆ, “ಬಾ ಹೋಗೋಣ, ಗಿಬೆಯದಲ್ಲಾಗಲಿ ಅಥವಾ ರಾಮದಲ್ಲಾಗಲಿ ಈ ರಾತ್ರಿ ಇಳಿದುಕೊಳ್ಳುವ ಪ್ರಯತ್ನ ಮಾಡೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವನು ಸೇವಕನಿಗೆ, “ಗಿಬೆಯದಲ್ಲಾದರೂ, ರಾಮಾದಲ್ಲಾದರೂ ಇಳಿದುಕೊಳ್ಳುವುದಕ್ಕೆ ಆ ಸ್ಥಳಗಳಲ್ಲಿ ಒಂದಕ್ಕೆ ಸೇರೋಣ ಬಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:13
7 ತಿಳಿವುಗಳ ಹೋಲಿಕೆ  

ಗಿಬ್ಯದಲ್ಲಿ ತುತೂರಿಯನ್ನು ಊದಿರಿ, ರಮಾದಲ್ಲಿ ಕೊಂಬನ್ನು ಮೊಳಗಿಸಿರಿ; ಬೇತಾವೆನಿನಲ್ಲಿ ಕಾಳಗದ ಕರೆನೀಡಿರಿ. ಬೆನ್ಯಾಮಿನೇ, ನಿನ್ನನ್ನು ಬೆನ್ನಟ್ಟಿಬರುತ್ತಿರುವವರನ್ನು ನೋಡು.


ಕಣಿವೆಯನ್ನು ದಾಟಿದೆ; ‘ಗೆಬಾದಲ್ಲಿ ದಂಡಿಳಿಸೋಣ’ ಎಂದು ಹೇಳುತ್ತಿದೆ. ರಾಮಾ ಜನತೆ ನಡುಗುತ್ತಿದೆ, ಸೌಲನ ಗಿಬೆಯದ ಜನ ಪಲಾಯನ ಗೈದಿದೆ.


ಸೌಲನೂ ಗಿಬೆಯದಲ್ಲಿದ್ದ ತನ್ನ ಮನೆಗೆ ಹೋದನು. ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲೇ ಹೋದರು.


ಎಲೆಫ್, ಯೆಬೂಸಿಯರು ಇದ್ದಂಥ ಜೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ನಗರಗಳೂ ಮತ್ತು ಅವುಗಳಿಗೆ ಸೇರಿದ ಗ್ರಾಮಗಳು. ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ಆಸ್ತಿಪಾಸ್ತಿ ಇವೇ.


ಆಗ ಆ ದಣಿ, “ನಾವು ಇಸ್ರಯೇಲರಲ್ಲದ ಅನ್ಯರ ಪಟ್ಟಣದಲ್ಲಿ ತಂಗಬಾರದು; ಗಿಬೆಯಕ್ಕೆ ಹೋಗೋಣ,” ಎಂದನು.


ಹೀಗೆ ಅವರು ಮುಂದೆ ಸಾಗಿ ಬೆನ್ಯಾಮೀನ್ಯರ ಗಿಬೆಯ ಊರಿನ ಸಮೀಪಕ್ಕೆ ಬಂದಾಗ ಸೂರ್ಯನು ಮುಳುಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು