Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:16 - ಕನ್ನಡ ಸತ್ಯವೇದವು C.L. Bible (BSI)

16 ಅಷ್ಟರಲ್ಲಿ ಎಫ್ರಯಿಮ್ ಪರ್ವತಪ್ರದೇಶಕ್ಕೆ ಸೇರಿದವನು ಹಾಗು ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ವಾಸಿಸುವವನು ಆಗಿದ್ದ ಯಾರೋ ಒಬ್ಬ ಮುದುಕ ಸಾಯಂಕಾಲವಾದ್ದರಿಂದ ಕೆಲಸವನ್ನು ಬಿಟ್ಟು ಹೊಲದಿಂದ ಮನೆಗೆ ಬರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅಷ್ಟರಲ್ಲಿ ಎಫ್ರಾಯೀಮಿನ ಪರ್ವತಪ್ರದೇಶಕ್ಕೆ ಸೇರಿದ ಒಬ್ಬ ಮುದುಕನು, ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ವಾಸವಾಗಿದ್ದ ಆ ಮುದುಕನು ಸಾಯಂಕಾಲವಾದ್ದರಿಂದ ಕೆಲಸವನ್ನು ಮುಗಿಸಿ ಹೊಲದಿಂದ ಮನೆಗೆ ಬರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅಷ್ಟರಲ್ಲಿ ಎಫ್ರಾಯೀಮ್ ಪರ್ವತ ಪ್ರದೇಶಕ್ಕೆ ಸೇರಿದವನೂ ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ವಾಸಿಸುವವನೂ ಆಗಿದ್ದ ಒಬ್ಬಾನೊಬ್ಬ ಮುದುಕನು ಸಾಯಂಕಾಲವಾದದರಿಂದ ಕೆಲಸವನ್ನು ಬಿಟ್ಟು ಹೊಲದಿಂದ ಮನೆಗೆ ಬರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ಸಾಯಂಕಾಲ ಒಬ್ಬ ವೃದ್ಧನು ಹೊಲದಿಂದ ಮನೆಗೆ ಬರುತ್ತಿದ್ದನು. ಅವನು ಎಫ್ರಾಯೀಮ್ ಬೆಟ್ಟಪ್ರದೇಶದವನಾಗಿದ್ದು, ಈಗ ಗಿಬೆಯ ನಗರದಲ್ಲಿ ವಾಸಮಾಡುತ್ತಿದ್ದನು. (ಗಿಬೆಯದ ನಿವಾಸಿಗಳು ಬೆನ್ಯಾಮೀನ್ಯರಾಗಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಒಬ್ಬ ಮುದುಕನು ಹೊಲದಲ್ಲಿ ತನ್ನ ಕೆಲಸಮಾಡಿ ಬರುತ್ತಿದ್ದನು. ಆ ಮನುಷ್ಯನು ಎಫ್ರಾಯೀಮ್ ಬೆಟ್ಟದ ಪ್ರದೇಶಕ್ಕೆ ಸೇರಿದವನೂ ಬೆನ್ಯಾಮೀನರ ಊರಾದ ಗಿಬೆಯದಲ್ಲಿ ಪ್ರವಾಸಿಯಾಗಿಯೂ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:16
16 ತಿಳಿವುಗಳ ಹೋಲಿಕೆ  

ಹೊರಡುತ್ತಾನಾಗ ಮಾನವ ಕೆಲಸಕೆ I ದುಡಿಯುತ್ತಾನೆ ಸಾಯಂಕಾಲದವರೆಗೆ II


ಆ ಕಾಲದಲ್ಲಿ ಇಸ್ರಯೇಲರಿಗೆ ಅರಸನಿರಲಿಲ್ಲ. ಎಫ್ರಯಿಮ್ ಪರ್ವತ ಪ್ರದೇಶದ ಒಂದು ಮೂಲೆಯಲ್ಲಿ ಯಾರೋ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೆತ್ಲೆಹೇಮಿನವಳಾದ ಒಬ್ಬ ಸ್ತ್ರೀ ಅವನಿಗೆ ಉಪಪತ್ನಿಯಾಗಿದ್ದಳು.


ನಾವು ನಿಮ್ಮೊಡನಿದ್ದಾಗ, “ದುಡಿಯಲೊಲ್ಲದವನು ಉಣಲೂಬಾರದು,” ಎಂದು ನಿಮಗೆ ಆಜ್ಞಾಪಿಸಿದ್ದೆವು.


ಕಳ್ಳತನ ಮಾಡುವವನು ಕಳ್ಳತನವನ್ನು ಬಿಟ್ಟುಬಿಡಲಿ; ಶ್ರಮಪಟ್ಟು ದುಡಿದು ಸಂಪಾದಿಸಲಿ. ಆಗ ತನ್ನ ಪ್ರಾಮಾಣಿಕ ದುಡಿಮೆಯಿಂದ ಕಷ್ಟದಲ್ಲಿರುವವರಿಗೆ ನೆರವು ನೀಡಲು ಸಾಧ್ಯವಾಗುವುದು.


ದುಡಿಯುವವನು ಸ್ವಲ್ಪ ತಿಂದರೂ ಸರಿ, ಹೆಚ್ಚು ತಿಂದರೂ ಸರಿ, ಹಾಯಾಗಿ ನಿದ್ರಿಸುತ್ತಾನೆ. ಐಶ್ವರ್ಯವಂತನ ಸಂಪತ್ತಾದರೋ ಅವನಿಗೆ ನಿದ್ರೆ ಬರಲು ಬಿಡುವುದಿಲ್ಲ.


ಆಕಾಶದ ಕೆಳಗೆ ನಡೆಯುವ ಎಲ್ಲಾ ಕಾರ್ಯಗಳನ್ನು ಜ್ಞಾನದಿಂದ ವಿಚಾರಿಸಿದೆ; ವಿಮರ್ಶಿಸಲು ಮನಸ್ಸು ಮಾಡಿದೆ. ನರಮಾನವರ ಕರ್ತವ್ಯ ಎಂದು ದೇವರು ವಿಧಿಸಿರುವ ಕೆಲಸಕಾರ್ಯಗಳೆಲ್ಲ ಕಷ್ಟಕರವಾದುವೇ.


ಕೆಲಸದ ಸಾಮಾನುಗಳನ್ನು ಆಣೆಮಾಡು, ಹೊಲಗದ್ದೆಗಳ ಕೆಲಸವನ್ನು ಮುಗಿಸು, ಆ ಬಳಿಕ ಮನೆ ಕಟ್ಟಲು ತೊಡಗು.


ದುಡಿಮೆಯಿಂದ ಸದಾ ಲಾಭವುಂಟು; ಬರಿ ಮಾತಿನಿಂದ ಬಡತನ ಬರುವುದುಂಟು.


ಬಿಟ್ಟಿಯಾಗಿ ಸಿಕ್ಕಿದ ಸಂಪತ್ತು ಬೇಗನೆ ಕರಗುವುದು; ದುಡಿದು ಕೂಡಿಸಿದ ಹಣ ಅಭಿವೃದ್ಧಿಯಾಗುವುದು.


ನಿನ್ನ ಕೈ ಕೆಸರಾದರೆ ಬಾಯಿ ಮೊಸರಾಗುವುದು I ಧನ್ಯನಾಗುವೆ ನೀನು; ನಿನಗೆ ಶುಭವಾಗುವುದು II


ಹೀಗೆ ಅವರು ಮುಂದೆ ಸಾಗಿ ಬೆನ್ಯಾಮೀನ್ಯರ ಗಿಬೆಯ ಊರಿನ ಸಮೀಪಕ್ಕೆ ಬಂದಾಗ ಸೂರ್ಯನು ಮುಳುಗಿದ್ದನು.


ನೀನುತ್ಪತ್ತಿಯಾದ ಮಣ್ಣಿಗೆ ಮರಳಿ ಸೇರುವ ತನಕ ಗಳಿಸಬೇಕು ಕವಳವನ್ನು ನೆತ್ತಿಬೆವರಿಡುತ. ಮಣ್ಣಿನಿಂದಲೇ ಬಂದವನು ನೀನು ಮರಳಿ ಮಣ್ಣಿಗೆ ಸೇರತಕ್ಕವನು."


ಆದುದರಿಂದ ಅವರು ತಂಗುವುದಕ್ಕಾಗಿ ಗಿಬೆಯಕ್ಕೆ ಹೋಗಿ, ಯಾರೂ ಮನೆಯಲ್ಲಿ ಸೇರಿಸಿಕೊಳ್ಳದೆ ಹೋದುದರಿಂದ ಸಂತೆ ಬೀದಿಯಲ್ಲೇ ಕುಳಿತುಕೊಂಡರು.


ಈ ಮುದುಕ, ಬೀದಿಯಲ್ಲಿ ಕುಳಿತಿದ್ದ ಆ ದಾರಿಗನನ್ನು ಕಂಡು, “ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು.


ಪೂರ್ವದಲ್ಲಿ ಗಿಬ್ಯದವರು ಭ್ರಷ್ಟರಾದಂತೆ ಎಫ್ರಯಿಮಿನವರು ಅತಿ ಭ್ರಷ್ಟರಾಗಿದ್ದಾರೆ. ದೇವರು ಅವರ ಅಪರಾಧವನ್ನು ನೆನಪಿಗೆ ತಂದುಕೊಳ್ಳುವರು. ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು