ನ್ಯಾಯಸ್ಥಾಪಕರು 19:18 - ಕನ್ನಡ ಸತ್ಯವೇದವು C.L. Bible (BSI)18 ಅವನು ಆ ಮುದುಕನಿಗೆ, “ನಾವು ಯೆಹೂದದ ಬೆತ್ಲೆಹೇಮಿನಿಂದ ಎಫ್ರಯಿಮ್ ಪರ್ವತಪ್ರದೇಶದ ಒಂದು ಮೂಲೆಯಲ್ಲಿರುವ ನಮ್ಮ ವಾಸಸ್ಥಳಕ್ಕೆ ಹೋಗುತ್ತಿದ್ದೇವೆ. ನಾನು ಅಲ್ಲಿಂದ ಯೆಹೂದದ ಬೆತ್ಲೆಹೇಮಿಗೆ ಹೋಗಿದ್ದೆ; ಈಗ ಮರಳಿ ಸರ್ವೇಶ್ವರನ ಮಂದಿರಕ್ಕೆ ಹೋಗುತ್ತಿದ್ದೇನೆ. ಇಲ್ಲಿ ಯಾರೂ ನಮ್ಮನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆ ಲೇವಿಯನು ಅವನಿಗೆ, “ನಾವು ಯೆಹೂದದ ಬೇತ್ಲೆಹೇಮಿನಿಂದ ಎಫ್ರಾಯೀಮಿನ ಪರ್ವತಪ್ರದೇಶದ ಒಂದು ದೂರಸ್ಥಳದಲ್ಲಿರುವ ನಮ್ಮ ವಾಸಸ್ಥಳಕ್ಕೆ ಹೋಗುತ್ತಿದ್ದೇವೆ. ನಾನು ಯೆಹೂದದ ಬೇತ್ಲೆಹೇಮಿಗೆ ಹೋಗಿದ್ದೆನು; ಈಗ ತಿರುಗಿ ಯೆಹೋವನ ಮಂದಿರಕ್ಕೆ ಹೋಗುತ್ತೇನೆ. ಇಲ್ಲಿ ಯಾರೂ ನಮ್ಮನ್ನು ತಮ್ಮ ಮನೆಗೆ ಸೇರಿಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವನು ಇವನಿಗೆ - ನಾವು ಯೆಹೂದದ ಬೇತ್ಲೆಹೇವಿುನಿಂದ ಎಫ್ರಾಯೀಮ್ ಪರ್ವತಪ್ರದೇಶದ ಒಂದು ಮೂಲೆಯಲ್ಲಿರುವ ನಮ್ಮ ವಾಸಸ್ಥಳಕ್ಕೆ ಹೋಗುತ್ತಿದ್ದೇವೆ. ನಾನು ಅಲ್ಲಿಂದ ಯೆಹೂದದ ಬೇತ್ಲೆಹೇವಿುಗೆ ಹೋಗಿದ್ದೆನು; ಈಗ ತಿರಿಗಿ ಯೆಹೋವನ ಮಂದಿರಕ್ಕೆ ಹೋಗುತ್ತೇನೆ. ಇಲ್ಲಿ ಯಾರೂ ನಮ್ಮನ್ನು ತಮ್ಮ ಮನೆಗೆ ಕರಕೊಂಡು ಹೋಗಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅದಕ್ಕೆ ಲೇವಿಯು, “ನಾವು ಯೆಹೂದದ ಬೆತ್ಲೆಹೇಮಿನಿಂದ ಹೊರಟಿದ್ದೇವೆ. ಎಫ್ರಾಯೀಮ್ ಬೆಟ್ಟಪ್ರದೇಶದ ಒಂದು ಮೂಲೆಯಲ್ಲಿರುವ ನಮ್ಮ ಮನೆಗೆ ಹೋಗುತ್ತಿದ್ದೇವೆ. ಆದರೆ ಈ ರಾತ್ರಿ ಇಲ್ಲಿ ತಂಗಲು ಯಾರೂ ನಮ್ಮನ್ನು ತಮ್ಮ ಮನೆಗೆ ಆಹ್ವಾನಿಸಲಿಲ್ಲ. ನಾನು ಯೆಹೂದದ ಬೆತ್ಲೆಹೇಮಿಗೆ ಹೋಗಿದ್ದೆ. ಈಗ ನಾನು ನಮ್ಮ ಮನೆಗೆ ಹೋಗುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವನು ಇವನಿಗೆ, “ನಾವು ಯೆಹೂದದ ಬೇತ್ಲೆಹೇಮಿನಿಂದ ಎಫ್ರಾಯೀಮ್ ಬೆಟ್ಟದ ಕಡೆಯಲ್ಲಿ ಹಾದು ಹೋಗುತ್ತೇವೆ. ನಾನು ಅಲ್ಲಿಯವನು. ಯೆಹೂದದ ಬೇತ್ಲೆಹೇಮಿಗೆ ಹೋಗಿದ್ದೆನು. ಈಗ ಯೆಹೋವ ದೇವರ ಮನೆಗೆ ಹೋಗುತ್ತೇನೆ. ಆದರೆ ನಮ್ಮನ್ನು ಯಾರೂ ಮನೆಗೆ ಸೇರಿಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿ |