Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:19 - ಕನ್ನಡ ಸತ್ಯವೇದವು C.L. Bible (BSI)

19 ನಮ್ಮ ಕತ್ತೆಗಳಿಗೆ ಹುಲ್ಲೂ ಕಾಳೂ ಇವೆ. ನನಗೂ ನಿನ್ನ ಸೇವಕಿಗೂ ನಿನ್ನ ಸೇವಕನ ಸಂಗಡ ಬಂದಿರುವ ಈ ಪ್ರಾಯಸ್ಥನಿಗೂ ಸಾಕಾಗುವಷ್ಟು ರೊಟ್ಟಿಯೂ ದ್ರಾಕ್ಷಾರಸವೂ ಇರುತ್ತವೆ; ನಮಗೆ ಹೆಚ್ಚು ಏನೂ ಬೇಕಾಗಿರುವುದಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಮ್ಮ ಕತ್ತೆಗಳಿಗೆ ಹುಲ್ಲೂ ಕಾಳೂ ಇವೆ; ನನಗೂ ನಿನ್ನ ಸೇವಕಿಗೂ, ನಿನ್ನ ಸೇವಕನ ಸಂಗಡ ಬಂದಿರುವ ಈ ಪ್ರಾಯಸ್ಥನಿಗೂ ಸಾಕಾಗುವಷ್ಟು ರೊಟ್ಟಿಯೂ, ದ್ರಾಕ್ಷಾರಸವೂ ಇರುತ್ತವೆ. ನಮಗೆ ಹೆಚ್ಚು ಏನೂ ಬೇಕಾಗಿರುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಮ್ಮ ಕತ್ತೆಗಳಿಗೆ ಹುಲ್ಲೂ ಕಾಳೂ ಇವೆ; ನನಗೂ ನಿನ್ನ ಸೇವಕಿಗೂ ನಿನ್ನ ಸೇವಕನ ಸಂಗಡ ಬಂದಿರುವ ಈ ಪ್ರಾಯಸ್ಥನಿಗೂ ಸಾಕಾಗುವಷ್ಟು ರೊಟ್ಟಿಯೂ ದ್ರಾಕ್ಷಾರಸವೂ ಇರುತ್ತವೆ; ನಮಗೆ ಹೆಚ್ಚು ಏನೂ ಬೇಕಾಗಿರುವದಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಮ್ಮ ಕತ್ತೆಗಳಿಗೆ ಮೇವು ಮತ್ತು ಹುಲ್ಲು ಇವೆ. ನನಗೂ ಈ ಸ್ತ್ರೀಗೂ ನನ್ನ ಸೇವಕನಿಗೂ ರೊಟ್ಟಿ ಮತ್ತು ದ್ರಾಕ್ಷಾರಸ ಇವೆ. ನಮಗೆ ಏನೂ ಬೇಕಾಗಿಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೂ ನಮ್ಮ ಕತ್ತೆಗಳಿಗೆ ಮೇವೂ, ನಿನ್ನ ಸೇವಕನಾದ ನನಗೂ, ನಿನ್ನ ಸೇವಕಿಗೂ, ನಿನ್ನ ಸೇವಕನ ಸಂಗಡ ಇರುವ ಪ್ರಾಯಸ್ಥನಿಗೂ ಸಾಕಾಗುವಷ್ಟು ರೊಟ್ಟಿ ಮತ್ತು ದ್ರಾಕ್ಷಾರಸವು ಉಂಟು. ಏನೂ ಕೊರತೆ ಇಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:19
6 ತಿಳಿವುಗಳ ಹೋಲಿಕೆ  

ಹುಲ್ಲು, ಮೇವು ನಮ್ಮಲ್ಲಿ ಬಹಳ ಉಂಟು; ತಂಗುವುದಕ್ಕೆ ಸ್ಥಳವಿದೆ,” ಎಂದು ಉತ್ತರಕೊಟ್ಟಳು.


ಅವರು ಯೆಬೂಸಿಯರ ಊರಾದ ಜೆರುಸಲೇಮಿನ ಸಮೀಪಕ್ಕೆ ಬಂದಾಗ ಹೊತ್ತು ಮುಳುಗುವ ಕಾಲವಾದುದರಿಂದ ಸೇವಕನು ದಣಿಗೆ, “ದಯವಿಟ್ಟು ಬನ್ನಿ, ನಾವು ಯೆಬೂಸಿಯರ ಈ ಪಟ್ಟಣಕ್ಕೆ ಹೋಗಿ ಅಲ್ಲಿ ರಾತ್ರಿಯನ್ನು ಕಳೆಯೋಣ,” ಎಂದನು.


ಅವನು ಆ ಮುದುಕನಿಗೆ, “ನಾವು ಯೆಹೂದದ ಬೆತ್ಲೆಹೇಮಿನಿಂದ ಎಫ್ರಯಿಮ್ ಪರ್ವತಪ್ರದೇಶದ ಒಂದು ಮೂಲೆಯಲ್ಲಿರುವ ನಮ್ಮ ವಾಸಸ್ಥಳಕ್ಕೆ ಹೋಗುತ್ತಿದ್ದೇವೆ. ನಾನು ಅಲ್ಲಿಂದ ಯೆಹೂದದ ಬೆತ್ಲೆಹೇಮಿಗೆ ಹೋಗಿದ್ದೆ; ಈಗ ಮರಳಿ ಸರ್ವೇಶ್ವರನ ಮಂದಿರಕ್ಕೆ ಹೋಗುತ್ತಿದ್ದೇನೆ. ಇಲ್ಲಿ ಯಾರೂ ನಮ್ಮನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಲಿಲ್ಲ.


"ಇನ್ನು ಮೇಲೆ ನೀವು ಈ ಜನರಿಗೆ ಇಟ್ಟಿಗೆ ಮಾಡುವುದಕ್ಕೆ ಹುಲ್ಲನ್ನು ಕೊಡಕೂಡದು; ಅವರೇ ಹೋಗಿ ಹುಲ್ಲನ್ನು ಹುಡುಕಿಕೊಳ್ಳಲಿ.


ಪೇತ್ರನು ಅವರನ್ನು ಒಳಕ್ಕೆ ಬರಮಾಡಿಕೊಂಡು ಉಪಚರಿಸಿ, ರಾತ್ರಿ ಅಲ್ಲೇ ತಂಗುವಂತೆ ಮಾಡಿದನು. ಮಾರನೆಯ ದಿನ ಪೇತ್ರನು ಅವರೊಡನೆ ಹೋದನು. ಜೊತೆಯಲ್ಲಿ ಜೊಪ್ಪದ ಕೆಲವು ಸಹೋದರರೂ ಹೋದರು.


ಅಂತೆಯೇ ತನ್ನ ಮನೆಯವರ ಸಮೇತ ದೀಕ್ಷಾಸ್ನಾನವನ್ನು ಪಡೆದಳು. ಅನಂತರ, “ನಾನು ಪ್ರಭುವಿನ ನಿಜವಾದ ವಿಶ್ವಾಸಿಯೆಂದು ನೀವು ಒಪ್ಪಿಕೊಳ್ಳುವುದಾದರೆ ನನ್ನ ಮನೆಗೆ ಬಂದು ತಂಗಿರಿ,” ಎಂದು ನಮ್ಮನ್ನು ಒತ್ತಾಯಪೂರ್ವಕವಾಗಿ ಆಹ್ವಾನಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು