Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:23 - ಕನ್ನಡ ಸತ್ಯವೇದವು C.L. Bible (BSI)

23 ಆಗ ಆ ಮುದುಕ ಹೊರಗೆ ಹೋಗಿ ಅವರಿಗೆ, “ಸಹೋದರರೇ, ಇಂಥ ದುಷ್ಟತನವನ್ನು ನಡೆಸಬೇಡಿ; ಅವನು ಆಶ್ರಯಕ್ಕಾಗಿ ನನ್ನ ಮನೆಗೆ ಬಂದಿದ್ದಾನೆ; ನೀವು ಇಂಥ ಹುಚ್ಚುತನ ಮಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಆ ಮುದುಕನು ಹೊರಗೆ ಹೋಗಿ ಅವರಿಗೆ, “ಸಹೋದರರೇ, ಇಂಥ ದುಷ್ಟತನವನ್ನು ನಡೆಸಬೇಡಿರಿ; ಅವನು ಆಶ್ರಯಕ್ಕಾಗಿ ನನ್ನ ಮನೆಗೆ ಬಂದಿದ್ದಾನೆ; ನೀವು ಇಂಥ ಹುಚ್ಚುತನವನ್ನು ಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಗ ಆ ಮುದುಕನು ಹೊರಗೆ ಹೋಗಿ ಅವರಿಗೆ - ಸಹೋದರರೇ, ಇಂಥ ದುಷ್ಟತನವನ್ನು ನಡಿಸಬೇಡಿರಿ; ಅವನು ಆಶ್ರಯಕ್ಕಾಗಿ ನನ್ನ ಮನೆಗೆ ಬಂದಿದ್ದಾನೆ; ನೀವು ಇಂಥ ಹುಚ್ಚುತನವನ್ನು ಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆ ವೃದ್ಧನು ಮನೆಯಿಂದ ಹೊರಗೆ ಬಂದು ಆ ನೀಚರ ಜೊತೆ ಮಾತನಾಡಿ, “ಬೇಡ, ನನ್ನ ಮಿತ್ರರೇ, ಅಂಥ ಪಾಪದ ಕೆಲಸವನ್ನು ಮಾಡಬೇಡಿ. ಆ ಮನುಷ್ಯ ನನ್ನ ಅತಿಥಿಯಾಗಿದ್ದಾನೆ. ಈ ಭಯಂಕರ ಪಾಪವನ್ನು ಮಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಮನೆಯ ಯಜಮಾನನಾದ ಆ ಮನುಷ್ಯನು ಅವರ ಬಳಿಗೆ ಹೊರಟುಹೋಗಿ, ಅವರಿಗೆ, “ಹಾಗೆ ಮಾಡಬೇಡಿರಿ. ನನ್ನ ಸಹೋದರರೇ, ದಯಮಾಡಿ ಕೆಟ್ಟತನ ಮಾಡಬೇಡಿರಿ. ಆ ಮನುಷ್ಯನು ನನ್ನ ಮನೆಯಲ್ಲಿ ಪ್ರವೇಶಿಸಿದ್ದರಿಂದ ನೀವು ಅಂಥ ಬುದ್ಧಿಹೀನತೆಯನ್ನು ಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:23
7 ತಿಳಿವುಗಳ ಹೋಲಿಕೆ  

ಆಕೆ, “ಅಣ್ಣಾ, ಬೇಡ; ನನ್ನನ್ನು ಕೆಡಿಸಬೇಡ; ಇಸ್ರಯೇಲರಲ್ಲಿ ಇಂಥದು ನಡೆಯಬಾರದು.


ಅವರು ಇಸ್ರಯೇಲರಲ್ಲಿ ನಡೆಸಿದ ಇಂಥ ಕೆಟ್ಟ ಹಾಗು ಹುಚ್ಚುಗೆಲಸ ಎಲ್ಲರಿಗೂ ಗೊತ್ತಾಗಲೆಂದು ನಾನು ಆಕೆಯ ಶವವನ್ನು ತುಂಡುಮಾಡಿ ಇಸ್ರಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದೆನು.


ಇತ್ತ ಯಕೋಬನ ಗಂಡು ಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದರು. ಶೆಕೆಮನು ತಮ್ಮ ತಂಗಿಯನ್ನು ಬಲಾತ್ಕಾರದಿಂದ ಕೂಡಿ, ಮಾಡಬಾರದನ್ನು ಮಾಡಿ, ಇಸ್ರಯೇಲರಿಗೆ ಘನ ಅವಮಾನವನ್ನು ಮಾಡಿದ್ದರಿಂದ ಅವರು ತಳಮಳಗೊಂಡು ಕಡುಕೋಪದಿಂದ ಇದ್ದರು.


ಯಾವನು ಮೀಸಲಾದ ವಸ್ತುವನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುತ್ತಾನೋ ಅವನು ತನ್ನ ಆಸ್ತಿಪಾಸ್ತಿ ಸಹಿತವಾಗಿ ಸುಡಲ್ಪಡಬೇಕು. ಏಕೆಂದರೆ ಅವನು ಸರ್ವೇಶ್ವರನ ಕಟ್ಟಳೆಯನ್ನು ಮೀರಿ ಇಸ್ರಯೇಲರಲ್ಲಿ ಭ್ರಷ್ಟಾಚಾರವನ್ನು ನಡೆಸಿದ್ದಾನೆ,’ ಎಂದು ಹೇಳು.”


ಅವಳು ತಂದೆಯ ಮನೆಯಲ್ಲೇ ಸೂಳೆತನಮಾಡಿ ಇಸ್ರಯೇಲರಲ್ಲಿ ದುರಾಚಾರವನ್ನು ನಡೆಸಿದ್ದರಿಂದ ಅವಳನ್ನು ತಂದೆಯ ಮನೆಯ ಬಾಗಿಲಿಗೆ ಬರಮಾಡಬೇಕು; ಊರಿನವರೆಲ್ಲರು ಕಲ್ಲೆಸೆದು ಅವಳನ್ನು ಕೊಲ್ಲಬೇಕು. ಹೀಗೆ ಇಂಥ ಕೇಡನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.


ಕೇಳಿ, ಕನ್ಯೆಯರಾದ ಇಬ್ಬರು ಹೆಣ್ಣುಮಕ್ಕಳು ನನಗಿದ್ದಾರೆ; ಅವರನ್ನು ಬೇಕಾದರೆ ಹೊರಗೆ ಕರೆಯಿಸುತ್ತೇನೆ; ನಿಮಗೆ ಇಷ್ಟಬಂದಂತೆ ಮಾಡಬಹುದು. ಆದರೆ ಆ ಮನುಷ್ಯರು ನನ್ನ ಆಶ್ರಯಕ್ಕಾಗಿ ಬಂದವರು; ಅವರಿಗೆ ಏನೂ ಮಾಡಬೇಡಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು