Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:27 - ಕನ್ನಡ ಸತ್ಯವೇದವು C.L. Bible (BSI)

27 ಆಕೆಯ ಪತಿ ಬೆಳಿಗ್ಗೆ ಎದ್ದು ಹೊರಡುವುದಕ್ಕೆ ಸಿದ್ಧನಾಗಿ ಬಾಗಿಲನ್ನು ತೆರೆದಾಗ ತನ್ನ ಉಪಪತ್ನಿ ಬಾಗಿಲ ಮುಂದೆ ಬಿದ್ದಿರುವುದನ್ನೂ ಆಕೆಯ ಕೈಗಳು ಹೊಸ್ತಲಿನ ಮೇಲಿರುವುದನ್ನೂ ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಕೆಯ ಪತಿಯು ಬೆಳಿಗ್ಗೆ ಎದ್ದು ಹೊರಡುವುದಕ್ಕೆ ಸಿದ್ಧನಾಗಿ ಬಾಗಿಲನ್ನು ತೆರೆಯಲು, ತನ್ನ ಉಪಪತ್ನಿಯು ಬಾಗಿಲ ಮುಂದೆ ಬಿದ್ದಿರುವುದನ್ನೂ, ಆಕೆಯ ಕೈಗಳು ಹೊಸ್ತಿಲಿನ ಮೇಲಿರುವುದನ್ನೂ ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಕೆಯ ಪತಿಯು ಬೆಳಿಗ್ಗೆ ಎದ್ದು ಹೊರಡುವದಕ್ಕೆ ಸಿದ್ಧನಾಗಿ ಬಾಗಲನ್ನು ತೆರೆಯಲು ತನ್ನ ಉಪಪತ್ನಿಯು ಬಾಗಲ ಮುಂದೆ ಬಿದ್ದಿರುವದನ್ನೂ ಆಕೆಯ ಕೈಗಳು ಹೊಸ್ತಲಿನ ಮೇಲಿರುವದನ್ನೂ ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆ ಲೇವಿಯನು ಮರುದಿನ ಬೆಳಿಗ್ಗೆ ಬೇಗ ಎದ್ದನು. ಅವನು ತನ್ನ ಮನೆಗೆ ಹೋಗಬೇಕೆಂದಿದ್ದನು. ಆದ್ದರಿಂದ ಹೊರಗೆ ಹೋಗಲು ಬಾಗಿಲು ತೆರೆದನು. ಬಾಗಿಲ ಮುಂದೆ ಹೊಸ್ತಿಲದ ಮೇಲೆ ಕೈಚಾಚಿ ಬಿದ್ದಿದ್ದ ತನ್ನ ಉಪಪತ್ನಿಯನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವಳ ಯಜಮಾನನು ಉದಯದಲ್ಲಿ ಎದ್ದು, ಮನೆಯ ಬಾಗಿಲನ್ನು ತೆರೆದು, ತನ್ನ ಮಾರ್ಗವಾಗಿ ಹೊರಡುವಾಗ, ತನ್ನ ಉಪಪತ್ನಿ ಮನೆಯ ಬಾಗಿಲ ಮುಂದೆ ತನ್ನ ಕೈಗಳನ್ನು ಹೊಸ್ತಿಲ ಮೇಲೆ ಇಟ್ಟವಳಾಗಿ ಬಿದ್ದಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:27
4 ತಿಳಿವುಗಳ ಹೋಲಿಕೆ  

ಆ ಸ್ತ್ರೀ ಸೂರ್ಯೋದಯಕ್ಕೆ ಮುಂಚೆಯೇ ಬಂದು ತನ್ನ ಯಜಮಾನನು ತಂಗಿದ್ದ ಮನೆಯ ಬಾಗಿಲಲ್ಲಿ ಬಿದ್ದಳು; ಬೆಳಗಾದರೂ ಏಳಲೇ ಇಲ್ಲ.


ಅವನು, “ಏಳು, ಹೋಗೋಣ,” ಎಂದು ಆಕೆಯನ್ನು ಕರೆಯಲು ಪ್ರತ್ಯುತ್ತರವೇ ಬರಲಿಲ್ಲ. ಆಗ ಅವನು ಆಕೆಯ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು ಸ್ವಸ್ಥಳಕ್ಕೆ ಹೋದನು.


ಇದಲ್ಲದೆ ಸರ್ವೇಶ್ವರನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲೂ ಮೇಘವು ತುಂಬಿತ್ತು; ಸರ್ವೇಶ್ವರನ ತೇಜಸ್ಸಿನ ಅದ್ಭುತಕಾಂತಿ ಆವರಣದಲ್ಲೆಲ್ಲಾ ವ್ಯಾಪಿಸಿತ್ತು.


ಬಳಿಕ ಸರ್ವೇಶ್ವರನ ತೇಜಸ್ಸು ದೇವಾಲಯದ ಹೊಸ್ತಿಲನ್ನು ಬಿಟ್ಟು, ಕೆರೂಬಿಗಳ ಮೇಲೆ ನಿಂತಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು