Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:3 - ಕನ್ನಡ ಸತ್ಯವೇದವು C.L. Bible (BSI)

3 ಅನಂತರ ಆಕೆಯ ಗಂಡನಾದ ಆ ಲೇವಿಯನು ಆಕೆಯನ್ನು ಪ್ರೀತಿಯಿಂದ ಮಾತಾಡಿಸಿ ಮತ್ತೆ ಮನೆಗೆ ಕರೆದು ತರಬೇಕೆಂದು ಒಬ್ಬ ಸೇವಕನನ್ನೂ ಎರಡು ಕತ್ತೆಗಳನ್ನೂ ತೆಗೆದುಕೊಂಡು ಅಲ್ಲಿಗೆ ಹೋದನು. ಆಕೆ ಅವನನ್ನು ತನ್ನ ತೌರುಮನೆಯಲ್ಲಿ ಸೇರಿಸಿಕೊಂಡಳು. ಆಕೆಯ ತಂದೆಯೂ ಅವನನ್ನು ನೋಡಿ ಸಂತೋಷಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅನಂತರ ಆಕೆಯ ಗಂಡನಾದ ಆ ಲೇವಿಯನು ಆಕೆಯನ್ನು ಪ್ರೀತಿಯಿಂದ ಮಾತನಾಡಿಸಿ ತಿರುಗಿ ಮನೆಗೆ ಕರೆದುಕೊಂಡು ಹೋಗಬೇಕೆಂದು ಒಬ್ಬ ಸೇವಕನನ್ನೂ, ಎರಡು ಕತ್ತೆಗಳನ್ನೂ ತೆಗೆದುಕೊಂಡು ಅಲ್ಲಿಗೆ ಹೋದನು. ಆಕೆಯು ಅವನನ್ನು ತನ್ನ ತವರುಮನೆಯಲ್ಲಿ ಸೇರಿಸಿಕೊಂಡಳು; ಆಕೆಯ ತಂದೆಯೂ ಅವನನ್ನು ನೋಡಿ ಸಂತೋಷಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅನಂತರ ಆಕೆಯ ಗಂಡನಾದ ಆ ಲೇವಿಯನು ಆಕೆಯನ್ನು ಪ್ರೀತಿಯಿಂದ ಮಾತಾಡಿಸಿ ತಿರಿಗಿ ಮನೆಗೆ ಕರತರಬೇಕೆಂದು ಒಬ್ಬ ಸೇವಕನನ್ನೂ ಎರಡು ಕತ್ತೆಗಳನ್ನೂ ತೆಗೆದುಕೊಂಡು ಅಲ್ಲಿಗೆ ಹೋದನು. ಆಕೆಯು ಅವನನ್ನು ತನ್ನ ತೌರ ಮನೆಯಲ್ಲಿ ಸೇರಿಸಿಕೊಂಡಳು; ಆಕೆಯ ತಂದೆಯೂ ಅವನನ್ನು ನೋಡಿ ಸಂತೋಷಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಆಕೆಯ ಗಂಡನು ಅವಳ ಬಳಿಗೆ ಹೋದನು; ಅವಳೊಂದಿಗೆ ಪ್ರೀತಿಯಿಂದ ಮಾತನಾಡಿ ಅವಳನ್ನು ಕರೆದುಕೊಂಡು ಬರಬೇಕೆಂಬುದು ಅವನ ಆಲೋಚನೆಯಾಗಿತ್ತು. ಆದ್ದರಿಂದ ಅವನು ತನ್ನ ಸೇವಕನೊಡನೆ ಎರಡು ಕತ್ತೆಗಳನ್ನೂ ತೆಗೆದುಕೊಂಡು ಹೋದನು. ಆ ಲೇವಿಯನು ಆಕೆಯ ತಂದೆಯ ಮನೆಗೆ ಬಂದನು. ಅವಳ ತಂದೆಯು ಆ ಲೇವಿಯನನ್ನು ನೋಡಿ ಅವನನ್ನು ಸ್ವಾಗತಿಸಲು ಮನೆಯ ಹೊರಗೆ ಬಂದನು. ಅವಳ ತಂದೆಗೆ ಬಹಳ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಅವಳ ಗಂಡನು ಎದ್ದು, ಅವಳ ಸಂಗಡ ಪ್ರೀತಿಯಿಂದ ಮಾತನಾಡಿ, ಅವಳನ್ನು ತಿರುಗಿ ಕರೆತರುವುದಕ್ಕೆ ತನ್ನ ಸೇವಕನನ್ನೂ, ಎರಡು ಕತ್ತೆಗಳನ್ನೂ ತೆಗೆದುಕೊಂಡು ಅವಳ ಬಳಿಗೆ ಹೋದನು. ಅವಳು ಅವನನ್ನು ತನ್ನ ತಂದೆಯ ಮನೆಗೆ ಕರೆದುಕೊಂಡು ಹೋದಳು. ಆಕೆಯ ತಂದೆ ಅವನನ್ನು ಕಂಡಾಗ, ಸಂತೋಷದಿಂದ ಅವನನ್ನು ಸ್ವಾಗತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:3
16 ತಿಳಿವುಗಳ ಹೋಲಿಕೆ  

ಆದುದರಿಂದ ನೀವು ಸ್ವಲ್ಪವೂ ಸಂಕೋಚಪಡಬೇಕಾಗಿಲ್ಲ. ನಾನು ನಿಮ್ಮನ್ನೂ ನಿಮಗೆ ಸೇರಿದ ಎಲ್ಲರನ್ನೂ ಪೋಷಿಸುತ್ತೇನೆ,” ಎಂದು ಹೇಳಿ ಅವರನ್ನು ಸಂತೈಸಿ, ಅವರ ಸಂಗಡ ಪ್ರೀತಿಯಿಂದ ಮಾತಾಡಿದನು.


ಅವನ ಮನಸ್ಸು ಯಕೋಬನ ಮಗಳಾದ ಆ ದೀನಳ ಮೇಲೆಯೇ ತಲ್ಲೀನಗೊಂಡಿತ್ತು. ಆಕೆಯನ್ನು ಮೋಹಿಸಿ ಅವಳ ಮನವೊಲಿಸುವಂಥ ಮಾತುಗಳನ್ನಾಡಿದನು.


ಸಹೋದರರೇ, ನಿಮ್ಮಲ್ಲಿ ಯಾರಾದರೂ ತಪ್ಪಿತಸ್ಥರಾಗಿದ್ದರೆ, ಆಧ್ಯಾತ್ಮಿಕ ಜೀವಿಗಳಾದ ನೀವು ಅಂಥವನನ್ನು ನಯವಿನಯದಿಂದ ತಿದ್ದಿ ಸರಿಯಾದ ದಾರಿಗೆ ತರಬೇಕು. ಆದರೆ ನೀನೂ ಅವನಂತೆ ಪಾಪಪ್ರಚೋದನೆಗೆ ಒಳಗಾಗದಂತೆ ಎಚ್ಚರಿಕೆಯಿಂದಿರಬೇಕು.


ಅವಳು, “ಇಲ್ಲ, ಸ್ವಾಮೀ,” ಎಂದಳು. ಯೇಸು ಅವಳಿಗೆ, “ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ, ಹೋಗು; ಇನ್ನು ಮೇಲೆ ಪಾಪಮಾಡಬೇಡ,” ಎಂದರು).


ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು.


ಆದುದರಿಂದ ಇಗೋ, ನಾನು ಅವಳನ್ನು ಪುನಃ ಬೆಂಗಾಡಿಗೆ ಕರೆದೊಯ್ಯುವೆನು. ಹೃದಯಂಗಮವಾಗಿ ಅವಳನ್ನು ಒಲಿಸಿಕೊಂಡು ಮಾತಾಡುವೆನು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಗಂಡನು ತ್ಯಜಿಸಿದವಳು, ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ, ಅವಳನ್ನು ಆ ಗಂಡನು ಮತ್ತೆ ಸೇರಿಸಿಕೊಳ್ಳುತ್ತಾನೆಯೆ? ಸೇರಿಸಿಕೊಂಡರೆ ಆ ನಾಡು ಕೆಟ್ಟು ಅಪವಿತ್ರವಾಗಿ ಹೋಗುವುದಿಲ್ಲವೇ? ಹೀಗಿರಲು ಓ ಇಸ್ರಯೇಲ್, ಬಹುಮಂದಿ ಮಿಂಡರೊಡನೆ ವೇಶ್ಯವಾಟಿಕೆ ನಡೆಸಿದ ನೀನು ನನ್ನ ಬಳಿಗೆ ಬರುವೆಯಾ?


ಕೆಲವು ದಿನಗಳಾದ ಮೇಲೆ ಗೋದಿಯ ಸುಗ್ಗಿಯಲ್ಲಿ ಸಂಸೋನನು ಒಂದು ಹೋತಮರಿಯನ್ನು ತೆಗೆದುಕೊಂಡು ತನ್ನ ಹೆಂಡತಿಯನ್ನು ನೋಡುವುದಕ್ಕೆ ಹೋದನು. ಆಕೆಯ ತಂದೆ ಬಳಿಗೆ ಬಂದನು; “ನನ್ನ ಹೆಂಡತಿಯ ಒಳಗಿನ ಕೋಣೆಗೆ ಹೋಗಬಿಡು,” ಎಂದನು. ಅವನು, “ಹೋಗಕೂಡದು.


ಬಿಳಾಮನು ಹೀಗೆ ಹೋದುದರಿಂದ ದೇವರಿಗೆ ಸಿಟ್ಟಾಯಿತು. ಸರ್ವೇಶ್ವರನ ದೂತನು ಅವನಿಗೆ ಎದುರಾಳಿಯಾಗಿ ದಾರಿಯಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಹತ್ತಿ ಇಬ್ಬರು ಆಳುಗಳ ಸಂಗಡ ಸವಾರಿ ಮಾಡುತ್ತಿದ್ದನು.


“ಯಾವನಾದರು ಪರಪತ್ನಿಯೊಡನೆ ವ್ಯಭಿಚಾರ ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.


“ಸಹೋದರನ ಬಗ್ಗೆ ಒಳಗೊಳಗೇ ಹಗೆ ಇಟ್ಟುಕೊಳ್ಳಬೇಡ. ನೆರೆಯವನ ದೋಷಕ್ಕೆ ನೀನು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ಎತ್ತಿ ತೋರಿಸಲೇಬೇಕು.


ಈಕೆ ಇವನನ್ನು ಬಿಟ್ಟು ವೇಶ್ಯೆಯಾಗಿ ಯೆಹೂದದ ಬೆತ್ಲೆಹೇಮಿನಲ್ಲಿದ್ದ ತನ್ನ ತೌರುಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳು ಇದ್ದಳು.


ಆ ಸ್ತ್ರೀ ಹಾಗು ಅವನ ಮಾವ ಅವನನ್ನು ಮೂರು ದಿವಸ ಅಲ್ಲೇ ನಿಲ್ಲಿಸಿಕೊಂಡರು. ಅವನೂ ಅವನ ಸೇವಕನೂ ಅನ್ನಪಾನಗಳನ್ನು ತೆಗೆದುಕೊಳ್ಳುತ್ತಾ ಅಲ್ಲಿದ್ದರು.


ಆ ಸ್ತ್ರೀ ಸೂರ್ಯೋದಯಕ್ಕೆ ಮುಂಚೆಯೇ ಬಂದು ತನ್ನ ಯಜಮಾನನು ತಂಗಿದ್ದ ಮನೆಯ ಬಾಗಿಲಲ್ಲಿ ಬಿದ್ದಳು; ಬೆಳಗಾದರೂ ಏಳಲೇ ಇಲ್ಲ.


ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನಗಳಲ್ಲಿ ನೀನು ನನ್ನನ್ನು ‘ಬಾಳ್‍ದೇವತೆ’ ಎಂದು ಕರೆಯದೆ ‘ನನ್ನ ಪತಿ’ ಎಂದು ಕರೆಯುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು