Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:30 - ಕನ್ನಡ ಸತ್ಯವೇದವು C.L. Bible (BSI)

30 ಅವುಗಳನ್ನು ಕಂಡವರೆಲ್ಲರು, “ಇಸ್ರಯೇಲರು ಈಜಿಪ್ಟನ್ನು ಬಿಟ್ಟು ಬಂದ ದಿವಸ ಮೊದಲ್ಗೊಂಡು ಈ ದಿವಸದವರೆಗೆ ಇಂಥ ಕೃತ್ಯ ನಡೆಯಲೂ ಇಲ್ಲ, ನಾವು ಅದನ್ನು ನೋಡಿಯೂ ಇಲ್ಲ. ಈ ಸಂಗತಿಯನ್ನು ಗಂಭೀರವಾಗಿ ವಿಚಾರಿಸತಕ್ಕದ್ದು,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವುಗಳನ್ನು ಕಂಡವರೆಲ್ಲರೂ, “ಇಸ್ರಾಯೇಲರು ಐಗುಪ್ತವನ್ನು ಬಿಟ್ಟು ಬಂದ ದಿನದಿಂದ ಈ ದಿನದವರೆಗೆ ಇಂಥ ಕೃತ್ಯವು ನಡೆಯಲೇ ಇಲ್ಲ, ನಾವು ಅದನ್ನು ನೋಡಿಯೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು” ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅವುಗಳನ್ನು ಕಂಡವರೆಲ್ಲರೂ - ಇಸ್ರಾಯೇಲ್ಯರು ಐಗುಪ್ತವನ್ನು ಬಿಟ್ಟು ಬಂದ ದಿವಸ ಮೊದಲುಗೊಂಡು ಈ ದಿವಸದವರೆಗೆ ಇಂಥ ಕೃತ್ಯವು ನಡೆಯಲೂ ಇಲ್ಲ. ನಾವು ಅದನ್ನು ನೋಡಿಯೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಇದನ್ನು ನೋಡಿದ ಪ್ರತಿಯೊಬ್ಬರು, “ಈ ಮುಂಚೆ ಇಸ್ರೇಲಿನಲ್ಲಿ ಇಂಥದ್ದು ಆಗಿಲ್ಲ. ನಾವು ಈಜಿಪ್ಟಿನಿಂದ ಹೊರಬಂದಾಗಿನಿಂದ ಇಂಥದನ್ನು ನೋಡಿಲ್ಲ. ಇದಕ್ಕೆ ತಕ್ಕಕ್ರಮ ಕೈಗೊಳ್ಳುವುದು ಅವಶ್ಯವಾಗಿದೆ” ಎಂದು ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಅದನ್ನು ಕಂಡವರೆಲ್ಲಾ, “ಇಸ್ರಾಯೇಲರು ಈಜಿಪ್ಟಿನಿಂದ ಬಂದ ದಿವಸ ಮೊದಲ್ಗೊಂಡು ಈ ಪರ್ಯಂತರ ಇಂಥ ಕಾರ್ಯವು ಆದದ್ದೂ ಇಲ್ಲ, ಕಂಡದ್ದೂ ಇಲ್ಲ. ನೀವು ಇದರ ವಿಷಯ ಆಲೋಚಿಸಿ ಯೋಚಿಸಿರಿ. ನಾವೇನು ಮಾಡಬೇಕು ಹೇಳಿರಿ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:30
7 ತಿಳಿವುಗಳ ಹೋಲಿಕೆ  

ಇಲ್ಲಿ ಕೂಡಿರುವ ಎಲ್ಲ ಇಸ್ರಯೇಲರೇ, ಈಗ ನಿಮ್ಮ ಆಲೋಚನೆಗಳನ್ನೂ ಅಭಿಪ್ರಾಯಗಳನ್ನೂ ಹೇಳಿ,” ಎಂದನು.


ಗರ್ವದಿಂದ ಹುಟ್ಟುವುದು ಕಲಹಕದನ; ಆಲೋಚನೆಯನ್ನು ಕೇಳುವುದು ಸುಜ್ಞಾನ.


ಪೂರ್ವದಲ್ಲಿ ಗಿಬ್ಯದವರು ಭ್ರಷ್ಟರಾದಂತೆ ಎಫ್ರಯಿಮಿನವರು ಅತಿ ಭ್ರಷ್ಟರಾಗಿದ್ದಾರೆ. ದೇವರು ಅವರ ಅಪರಾಧವನ್ನು ನೆನಪಿಗೆ ತಂದುಕೊಳ್ಳುವರು. ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವರು.


ಬುದ್ಧಿವಂತನು ನಾಯಕನನ್ನಿಟ್ಟು ಯುದ್ಧ ನಡೆಸುವನು; ಸುಮಂತ್ರಿಗಳು ಹಲವರಿದ್ದರೆ ಸಂರಕ್ಷಣೆಯಿರುವುದು.


ಉದ್ದೇಶಗಳು ಕೈಗೂಡುವುವು ಹಿತಾಲೋಚನೆಯಿಂದ; ಬುದ್ಧಿವಂತರ ಆಲೋಚನೆ ಕೇಳದೆ ಹೂಡಬೇಡ ಯುದ್ಧ.


ಆಲೋಚನೆಯಿಲ್ಲದೆ ಉದ್ದೇಶಗಳು ಈಡೇರವು; ಹಲವಾರು ಆಲೋಚನಾಪರರಿರುವಲ್ಲಿ ಅವು ಕೈಗೂಡುವುವು.


ನಾಯಕನಿಲ್ಲದ ಜನತೆ ನಾಶವಾಗುವುದು; ಹಲವರು ಸುಮಂತ್ರಿಗಳಿರುವಲ್ಲಿ ಸಂರಕ್ಷಣೆ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು