Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:5 - ಕನ್ನಡ ಸತ್ಯವೇದವು C.L. Bible (BSI)

5 ಅವರು ನಾಲ್ಕನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾದರು. ಆ ಸ್ತ್ರೀಯ ತಂದೆ ಅಳಿಯನಿಗೆ, “ಮೊದಲು ಸ್ವಲ್ಪ ಊಟಮಾಡಿ ಚೇತರಿಸಿಕೊ, ಆಮೇಲೆ ಹೋಗಬಹುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ನಾಲ್ಕನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಮೊದಲು ಸ್ವಲ್ಪ ಊಟಮಾಡಿ ಬಲಹೊಂದು; ಆಮೇಲೆ ಹೋಗಬಹುದು” ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರು ನಾಲ್ಕನೆಯ ದಿನ ಬೆಳಿಗ್ಗೆ ಎದ್ದು ಹೋಗುವದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ - ಮೊದಲು ಸ್ವಲ್ಪ ಊಟಮಾಡಿ ಬಲಹೊಂದು; ಆಮೇಲೆ ಹೋಗಬಹುದು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾಲ್ಕನೆಯ ದಿನ ಅವರು ಬೆಳಗಿನ ಜಾವ ಬೇಗ ಎದ್ದರು. ಆ ಲೇವಿಯು ಹೊರಡುವದಕ್ಕೆ ಸಿದ್ಧನಾಗುತ್ತಿದ್ದನು. ಆದರೆ ಮಾವನು ತನ್ನ ಅಳಿಯನಿಗೆ, “ಸ್ವಲ್ಪ ಊಟಮಾಡು; ಆಮೇಲೆ ಹೋಗುವಿಯಂತೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾಲ್ಕನೆಯ ದಿನ ಅವರು ಬೇಗನೆ ಎದ್ದು, ಹೊರಡಲಿಕ್ಕೆ ಸಿದ್ಧರಾದರು. ಆದರೆ ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಸ್ವಲ್ಪ ಊಟಮಾಡಿ ಚೇತರಿಸಿಕೋ, ಆಮೇಲೆ ನೀವು ಹೋಗಬಹುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:5
9 ತಿಳಿವುಗಳ ಹೋಲಿಕೆ  

ಅವನು ಐದನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆ, “ದಯವಿಟ್ಟು ಇಳಿಹೊತ್ತಿನವರೆಗೆ ಇಲ್ಲೇ ಇದ್ದು ವಿಶ್ರಮಿಸಿಕೋ,” ಎಂದು ಅವನನ್ನು ಬೇಡಿಕೊಳ್ಳಲು ಅವನು ಮತ್ತೆ ಊಟಕ್ಕೆ ನಿಂತನು.


ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು. ದಾಸನಿರುವ ಸ್ಥಳದ ಹತ್ತಿರ ಹಾದುಹೋಗುತ್ತಿದ್ದೀರಲ್ಲವೇ?” ಎನ್ನಲು ಅವರು “ನೀನು ಹೇಳಿದಂತೆಯೇ ಆಗಲಿ,” ಎಂದರು.


ತರುವಾಯ ಊಟಮಾಡಿದ ಮೇಲೆ ಅವನಿಗೆ ತ್ರಾಣ ಬಂದಿತು. ಸೌಲನು ಕೆಲವು ದಿನಗಳವರೆಗೆ ದಮಸ್ಕಸಿನಲ್ಲಿ ಭಕ್ತವಿಶ್ವಾಸಿಗಳೊಡನೆ ಇದ್ದನು.


ಯೇಸು ಅವರಿಗೆ, “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸುವುದೇ ನನಗೇ ಆಹಾರ. ಆತನು ಕೊಟ್ಟ ಕಾರ್ಯಗಳನ್ನು ಪೂರೈಸುವುದೇ ನನಗೆ ತಿಂಡಿತೀರ್ಥ.


ಒದಗಿಸುವೆ ಬೇಸಾಯದ ಆಹಾರವನು I ಹೃದಯವನು ಮುದಗೊಳಿಸುವ ದ್ರಾಕ್ಷಾರಸವನು I ಮುಖಕೆ ಮೆರಗನ್ನೀಯುವ ತಿಳಿತೈಲಗಳನು I ದೇಹವನು ಗಟ್ಟಿಮುಟ್ಟಾಗಿಸುವ ರೊಟ್ಟಿಯನು II


ಆಗ ಅರಸನು, “ನನ್ನ ಮನೆಗೆ ಬಾ; ಸ್ವಲ್ಪ ಊಟಮಾಡಿ ಸುಧಾರಿಸಿಕೊ. ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ,” ಎಂದನು.


ಅಂಜೂರ ಹಣ್ಣಿನ ಉಂಡೆಯನ್ನೂ ಎರಡು ದ್ರಾಕ್ಷಿಗೊಂಚಲುಗಳನ್ನೂ ಕೊಟ್ಟರು. ಮೂರು ದಿವಸ ಹಗಲಿರುಳು ಅನ್ನಪಾನವಿಲ್ಲದ್ದರಿಂದ ಬಹಳವಾಗಿ ಬಳಲಿಹೋಗಿದ್ದ ಇವನು ಅವುಗಳನ್ನು ತಿಂದು ಚೇತರಿಸಿಕೊಂಡನು.


ಆ ಸ್ತ್ರೀ ಹಾಗು ಅವನ ಮಾವ ಅವನನ್ನು ಮೂರು ದಿವಸ ಅಲ್ಲೇ ನಿಲ್ಲಿಸಿಕೊಂಡರು. ಅವನೂ ಅವನ ಸೇವಕನೂ ಅನ್ನಪಾನಗಳನ್ನು ತೆಗೆದುಕೊಳ್ಳುತ್ತಾ ಅಲ್ಲಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು