Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:1 - ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರಸ್ವಾಮಿಯ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು ಇಸ್ರಯೇಲರಿಗೆ, “ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿ ನಿಮ್ಮ ಪೂರ್ವಜರಿಗೆ ಪ್ರಮಾಣಮಾಡಿದ ನಾಡಿಗೆ ಕರೆದುತಂದೆನು. ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವುದಿಲ್ಲ ಎಂದು ಮಾತುಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು ಇಸ್ರಾಯೇಲ್ಯರಿಗೆ, “ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿ, ನಿಮ್ಮ ಪೂರ್ವಿಕರಿಗೆ ಪ್ರಮಾಣ ಮಾಡಿದ ದೇಶಕ್ಕೆ ಕರೆತಂದೆನು. ‘ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವುದಿಲ್ಲವೆಂದು ನಾನು ಮಾತು ಕೊಟ್ಟಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನ ದೂತನು ಗಿಲ್ಗಾಲಿನಿಂದ ಬೋಕೀವಿುಗೆ ಬಂದು ಇಸ್ರಾಯೇಲ್ಯರಿಗೆ - ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶಕ್ಕೆ ಕರತಂದೆನು. ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವದಿಲ್ಲವೆಂದು ನಾನು ಮಾತು ಕೊಟ್ಟಾಗ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನ ದೂತನು ಗಿಲ್ಗಾಲ್ ನಗರದಿಂದ ಬೋಕೀಮ್ ನಗರದವರೆಗೆ ಹೋದನು. ಆ ದೂತನು ಇಸ್ರೇಲರಿಗೆ ಯೆಹೋವನ ಒಂದು ಸಂದೇಶವನ್ನು ತಿಳಿಸಿದನು. ಆ ಸಂದೇಶವು ಹೀಗೆದೆ: “ನಾನು ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ಹೊರಗೆತಂದೆ. ನಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ‘ನಾನು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದಿಗೂ ಮುರಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು, “ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿ, ನಿಮ್ಮ ತಂದೆಗಳಿಗೆ ಆಣೆ ಇಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:1
41 ತಿಳಿವುಗಳ ಹೋಲಿಕೆ  

ಯಕೋಬ್, ಇಸಾಕ್ ಹಾಗು ಅಬ್ರಹಾಮ್ ಇವರಿಗೆ ಮಾಡಿದ ವಾಗ್ದಾನಗಳನ್ನು ನೆನಪಿಗೆ ತಂದುಕೊಳ್ಳುವೆನು. ಅವುಗಳನ್ನು ನೆರವೇರಿಸುವೆನು. ಅವರ ಸ್ವಂತ ನಾಡನ್ನು ಕರುಣೆಯಿಂದ ಜ್ಞಾಪಿಸಿಕೊಳ್ಳುವೆನು.


“ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.


“ಇಗೋ, ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೆ ಹಾಗು ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆದುತರುವುದಕ್ಕೆ ಒಬ್ಬ ದೂತನನ್ನು ನಿಮ್ಮ ಮುಂದೆ ಕಳಿಸುತ್ತೇನೆ.


ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ಬಳಿಕ ಎಲ್ಲ ರಾಷ್ಟ್ರಗಳೊಂದಿಗೆ ನಾನು ಮಾಡಿಕೊಂಡಿದ್ದ ಒಡಂಬಡಿಕೆಯನ್ನು ರದ್ದುಗೊಳಿಸಬೇಕೆಂದು ‘ಕೃಪೆ’ ಎಂಬ ಕೋಲನ್ನು ಮುರಿದುಬಿಟ್ಟೆ.


ನಿಮ್ಮ ನಾಮವನ್ನು ಮುಂದಿಟ್ಟು, ನಮಗೆ ಅವಮಾನ ಮಾಡಬೇಡಿ ನಿಮ್ಮ ಮಹಿಮೆಯ ಸಿಂಹಾಸನವನ್ನು ಅಸಡ್ಡೆ ಮಾಡಬೇಡಿ ನಮ್ಮೊಡನೆ ಮಾಡಿದ ಒಡಂಬಡಿಕೆಯನ್ನು ನೆನೆಯಿರಿ. ಅದನ್ನು ಭಂಗಪಡಿಸಬೇಡಿ.


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


ಭಂಗಪಡಿಸೆನು ಎನ್ನ ಒಡಂಬಡಿಕೆಯನು I ಮೀರೆನು ನಾನವನಿಗೆ ಕೊಟ್ಟ ಮಾತನು II


ಒಂದಾನೊಂದು ದಿನ ಸರ್ವೇಶ್ವರನ ದೂತ ಆಕೆಗೆ ಪ್ರತ್ಯಕ್ಷನಾಗಿ, “ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ.


ಆದುದರಿಂದಲೇ ಆ ಸ್ಥಳಕ್ಕೆ ‘ಬೋಕೀಮ್’ ಎಂದು ಹೆಸರಿಟ್ಟು ಅಲ್ಲಿಯೇ ಸರ್ವೇಶ್ವರನಿಗೆ ಬಲಿಯನ್ನರ್ಪಿಸಿದರು.


ಚೈತನ್ಯಸ್ವರೂಪನಾದ ದೇವರು ನಿಮ್ಮ ಮಧ್ಯೆ ಇದ್ದಾರೆಂದು ನಿಮಗೆ ಈಗ ತಿಳಿಯುವುದು. ಅದೇ ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು ಹಾಗೂ ಯೆಬೂಸಿಯರನ್ನು ನಿಮ್ಮ ಮುಂದಿನಿಂದ ಓಡಿಸಿಬಿಡುವರೆಂದು ನಿಮಗೆ ಗೊತ್ತಾಗುವುದು.


ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರೇ ದೇವರೆಂದು ತಿಳಿದುಕೊಳ್ಳಬೇಕು. ಅವರೇ ನಂಬಿಕಸ್ತರಾದ ದೇವರು; ತಮ್ಮನ್ನು ಪ್ರೀತಿಸಿ ತಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ತಾವು ಮಾಡಿದ ವಾಗ್ದಾನವನ್ನು ನೆರವೇರಿಸಿ, ತಮ್ಮ ಅಚಲಪ್ರೀತಿಯನ್ನು ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ತೋರಿಸುವರು.


ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೊ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೆ?


ನೀವು ಆ ನಾಡನ್ನು ನಾಲ್ವತ್ತು ದಿನಗಳು ಸಂಚರಿಸಿ ನೋಡಿದಿರಿ. ಅಂತೆಯೇ ಒಂದು ದಿನಕ್ಕೆ ಒಂದು ವರ್ಷದ ಮೇರೆಗೆ ನಾಲ್ವತ್ತು ವರ್ಷ ನಿಮ್ಮ ಪಾಪದ ಫಲವನ್ನು ಅನುಭವಿಸಿರಿ; ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳುವಿರಿ.


ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವುದಿಲ್ಲ. ತಾತ್ಸಾರ ಮಾಡುವುದಿಲ್ಲ, ನಾನು ಅವರಿಗೆ ಮಾಡಿದ ವಾಗ್ದಾನವನ್ನು ಮೀರುವುದಿಲ್ಲ. ನಾನು ಅವರ ದೇವರಾದ ಸರ್ವೇಶ್ವರನಲ್ಲವೆ?


ಅದಕ್ಕೆ ಸರ್ವೇಶ್ವರ, “ನನ್ನ ಪ್ರಸನ್ನತೆ ನಿನ್ನ ಜೊತೆಯಲ್ಲಿ ಬರುವುದು. ನಾನು ನಿನಗೆ ವಿಶ್ರಾಂತಿ ನೀಡುವೆನು,” ಎಂದರು.


ಇಸ್ರಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ಸ್ಥಳ ಬದಲಾಯಿಸಿ ಅವರ ಹಿಂದಕ್ಕೆ ಬಂದನು. ಅವರ ಮುಂಭಾಗದಲ್ಲಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.


ಸರ್ವೇಶ್ವರ ಸ್ವಾಮಿಯೇ ನಿಮ್ಮ ಪರವಾಗಿ ಯುದ್ಧಮಾಡುವರು. ನೀವು ನೆಮ್ಮದಿಯಿಂದಿರಿ,” ಎಂದು ಹೇಳಿದನು.


ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”


ಹಾಗರಳು, “ನನ್ನನ್ನು ನೋಡುವಾತ ದೇವರನ್ನು ನಾನಿಲ್ಲೇ ನೋಡಿಬಿಟ್ಟೆನಲ್ಲಾ!” ಎಂದುಕೊಂಡು ತನ್ನ ಸಂಗಡ ಮಾತನಾಡಿದ ಸರ್ವೇಶ್ವರ ಸ್ವಾಮಿಗೆ, “ಎಲ್ಲವನ್ನು ನೋಡುವಾತ ದೇವರು" ಎಂದು ಹೆಸರಿಟ್ಟಳು.


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.”


ಅವನು ಬಂದು ಇಸ್ರಯೇಲರಿಗೆ ಹೀಗೆಂದನು: “ನಿಮ್ಮ ದೇವರಾದ ಸರ್ವೇಶ್ವರ ಹೇಳುವ ಈ ಮಾತುಗಳನ್ನು ಗಮನಿಸಿರಿ: ‘ನೀವು ದಾಸತ್ವದಲ್ಲಿದ್ದಾಗ ನಿಮ್ಮನ್ನು ಈಜಿಪ್ಟಿನಿಂದ ಕರೆತಂದವನು ನಾನು.


ಚೊರ್ಗಾ ಎಂಬ ಊರಲ್ಲಿ ದಾನ್ ಕುಲದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿ ಬಂಜೆಯಾಗಿದ್ದುದರಿಂದ ಅವನಿಗೆ ಮಕ್ಕಳಿರಲಿಲ್ಲ.


ಆ ನಾಡನ್ನು ನಿಮಗೆ ಕೊಟ್ಟಿದ್ದೇನೆ. ಸರ್ವೇಶ್ವರನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಕೋಬರಿಗೂ ಅವರ ಸಂತತಿಯವರಿಗೂ ಆ ನಾಡನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ್ದೆನು. ಅದನ್ನು ಸೇರಿ ಸ್ವಾಧೀನಮಾಡಿಕೊಳ್ಳಿ,’ ಎಂದು ಆಜ್ಞಾಪಿಸಿದರು.


ನಿನ್ನ ದೇವನಾದ ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವತಂತ್ರಿಸಿಕೊಳ್ಳುವುದಿಲ್ಲವೇ? ಹಾಗೆಯೇ ನಮ್ಮ ದೇವರಾದ ಸರ್ವೇಶ್ವರ ನಮಗೆ ಒಪ್ಪಿಸಿಕೊಡುವುದನ್ನು ನಾವು ಸ್ವತಂತ್ರಿಸಿಕೊಳ್ಳುವುದು ನ್ಯಾಯವಾಗಿದೆ.


ನೀನೆಂದೆ, “ನಾನಾರಿಸಿದವನೊಡನೆ ಮಾಡಿರುವೆ ಒಪ್ಪಂದ I ನನ್ನ ದಾಸ ದಾವೀದನಿಗಿತ್ತಿರುವೆ ಈ ತೆರವಾದ ಶಪಥ : II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು