Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:10 - ಕನ್ನಡ ಸತ್ಯವೇದವು C.L. Bible (BSI)

10 ಅವನ ಕಾಲದವರೆಲ್ಲರೂ ತಮ್ಮ ಪೂರ್ವಜರಂತೆ ದೈವಾಧೀನರಾದ ಮೇಲೆ ಬೇರೊಂದು ಸಂತಾನ ಹುಟ್ಟಿಕೊಂಡಿತು. ಇವರು ಸರ್ವೇಶ್ವರಸ್ವಾಮಿಯನ್ನು ಮರೆತರು; ಇಸ್ರಯೇಲರಿಗೆ ಮಾಡಿದ ಮಹತ್ಕಾರ್ಯಗಳ ನೆನಪು ಇವರಿಗೆ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನ ಕಾಲದವರೆಲ್ಲರೂ ಪೂರ್ವಿಕರ ಬಳಿಗೆ ಸೇರಿದರು. ಆನಂತರ ಯೆಹೋವನನ್ನೂ, ಆತನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನ ಕಾಲದವರೆಲ್ಲರೂ ಪಿತೃಗಳ ಬಳಿಗೆ ಸೇರಿದ ಮೇಲೆ ಯೆಹೋವನನ್ನೂ ಆತನು ಇಸ್ರಾಯೇಲ್ಯರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಈ ಪೀಳಿಗೆಯವರೆಲ್ಲರು ಸತ್ತುಹೋದ ಮೇಲೆ ಮುಂದಿನ ಪೀಳಿಗೆಯು ಬೆಳೆಯಿತು. ಈ ಹೊಸ ಪೀಳಿಗೆಗೆ ಯೆಹೋವನ ಬಗ್ಗೆ ಮತ್ತು ಯೆಹೋವನು ಇಸ್ರೇಲಿನ ಜನರಿಗಾಗಿ ಮಾಡಿದ ಮಹತ್ಕಾರ್ಯಗಳ ಬಗ್ಗೆ ಏನೂ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನ ಕಾಲದವರೆಲ್ಲರೂ ಪಿತೃಗಳ ಬಳಿಗೆ ಸೇರಿದ ಮೇಲೆ, ಯೆಹೋವ ದೇವರನ್ನೂ ಅವರು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:10
26 ತಿಳಿವುಗಳ ಹೋಲಿಕೆ  

ಏಲಿಯ ಮಕ್ಕಳು ಮಹಾದುಷ್ಟರು. ಅವರು ಸರ್ವೇಶ್ವರನನ್ನು ಲಕ್ಷಿಸುತ್ತಿರಲಿಲ್ಲ.


ಅದಕ್ಕೆ ಫರೋಹನು, “ 'ಸರ್ವೇಶ್ವರ' ಎಂಬುವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಯೇಲರನ್ನು ಹೋಗಬಿಡಬೇಕೊ? ಆ ಸರ್ವೇಶ್ವರನು ಯಾರೋ ನನಗೆ ಗೊತ್ತಿಲ್ಲ. ಇಸ್ರಯೇಲರನ್ನು ನಾನು ಹೋಗಬಿಡುವುದಿಲ್ಲ,” ಎಂದು ಬಿಟ್ಟನು.


ತಾವು ದೇವರನ್ನು ಬಲ್ಲವರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಇಂಥವರು ಅವಿಧೇಯರೂ ಅಸಹ್ಯರೂ ಆಗಿರುವುದರಿಂದ ಯಾವುದೇ ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆ.


“ದಾವೀದನು ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕೆ ತಲೆಬಾಗಿ ಬಾಳಿದನು; ಸತ್ತಾಗ ಅವನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು.


ಒಬ್ಬನು ತನ್ನ ನೆರೆಹೊರೆಯವರನ್ನು ಕುರಿತು ಅಥವಾ ಅಣ್ಣತಮ್ಮಂದಿರನ್ನು ಕುರಿತು, ‘ಸರ್ವೇಶ್ವರನನ್ನು ಅರಿತುಕೊ’ ಎಂದು ಬೋಧಿಸಬೇಕಾಗಿರುವುದಿಲ್ಲ. ಚಿಕ್ಕವರಿಂದ ಮೊದಲ್ಗೊಂಡು ದೊಡ್ಡವರ ತನಕ ಎಲ್ಲರು ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅಪರಾಧವನ್ನು ಕ್ಷಮಿಸಿ, ಅವರ ಪಾಪವನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ಕಿನ್ನರಿ, ವೀಣೆ, ತಬಲ, ಕೊಳಲು, ಮದ್ಯಪಾನ ಇವೇ ಅವರ ದುಂದೌತಣದ ಸೊಬಗು. ಸ್ವಾಮಿಯ ಕಾರ್ಯಗಳನ್ನು ಅವರು ಲಕ್ಷಿಸರು. ಸ್ವಾಮಿಯ ಕೃತಿಗಳನ್ನವರು ಧ್ಯಾನಿಸರು.


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಆತ ದೀನದಲಿತರಿಗೆ ನ್ಯಾಯ ದೊರಕಿಸುತ್ತಿದ್ದ ಆಗ ಅವನಿಗೆ ಎಲ್ಲವು ಸುಗಮವಾಗಿತ್ತು. ನನ್ನನ್ನು ಅರಿಯುವುದು ಎಂದರೆ ಇದುವೇ. ಇದು ಸರ್ವೇಶ್ವರನಾದ ನನ್ನ ನುಡಿ.


ಸರ್ವೇಶ್ವರ : “ಸುಳ್ಳಾಡಲು ಬಿಲ್ಲಿನಂತೆ ನಾಲಿಗೆ ಬಗ್ಗಿಸುತ್ತಾರೆ ಸತ್ಯಕ್ಕೆ ಪ್ರತಿಕೂಲವಾಗಿಯೆ ನಾಡಿನಲ್ಲಿ ಪ್ರಬಲಿಸಿದ್ದಾರೆ ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನಾದರೊ ಅರಿಯದೆ ಇದ್ದಾರೆ.”


ಆದರೆ ಈ ದುರುಳರೇ, ದೇವರಿಗೆ, ‘ನಮ್ಮನ್ನು ಬಿಟ್ಟು ತೊಲಗು, ನಮಗೆ ಬೇಡವಾಗಿದೆ ನಿನ್ನ ಮಾರ್ಗದ ಅರಿವು’.


ಸರ್ವೇಶ್ವರ ಮೋಶೆಗೆ, “ನೀನು ಮೃತನಾಗಿ ಪಿತೃಗಳಲ್ಲಿಗೆ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು, ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ, ದೇವದ್ರೋಹಿಗಳಾಗಿ ತಾವು ಹೋಗುವ ನಾಡಿನಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ನೋಡಿದ ಮೇಲೆ ನಿನ್ನ ಅಣ್ಣ ಆರೋನನು ಮರಣಹೊಂದಿ ಪಿತೃಗಳ ಬಳಿಗೆ ಸೇರಿದಂತೆ ನೀನು ಕೂಡ ಸೇರಬೇಕು.


ಮಕ್ಕಳಿಗೆ ಈ ಆಜ್ಞೆಯನ್ನು ಕೊಟ್ಟು ಮುಗಿಸಿದ ನಂತರ ಯಕೋಬನು ಹಾಸಿಗೆಯಲ್ಲಿ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು, ಮೃತರಾದ ಪಿತೃಗಳ ಬಳಿಗೆ ಸೇರಿದನು.


ಪೂರ್ಣ ಆಯುಷ್ಯವನ್ನು ಕಳೆದು, ಹಣ್ಣು ಹಣ್ಣು ಮುದುಕನಾಗಿ ಪ್ರಾಣಬಿಟ್ಟು ಅವನು ತನ್ನ ಪಿತೃಗಳ ಬಳಿಗೆ ಸೇರಿದನು.


ನೀನಂತೂ ಹಣ್ಣುಹಣ್ಣು ಮುದುಕನಾಗಿ ಶವಸಂಸ್ಕಾರವನ್ನು ಪಡೆಯುವೆ; ಶಾಂತಿ ಸಮಾಧಾನದಿಂದ ನಿನ್ನ ಪಿತೃಗಳನ್ನು ಸೇರುವೆ.


ಇಷ್ಮಾಯೇಲನು ನೂರಮೂವತ್ತೇಳು ವರ್ಷ ಬದುಕಿದ್ದನು. ಅನಂತರ ಸತ್ತು ತನ್ನ ಪಿತೃಗಳ ಬಳಿಗೆ ಸೇರಿದನು.


ಕಾಲಕ್ರಮೇಣ ಜೋಸೆಫನು, ಅವನ ಅಣ್ಣತಮ್ಮಂದಿರು ಹಾಗು ಆ ತಲೆಮಾರಿನ ಎಲ್ಲರು ತೀರಿಹೋದರು.


ಅನಂತರ ಹೊಸ ರಾಜನೊಬ್ಬನು ಈಜಿಪ್ಟ್ ದೇಶದ ಆಳ್ವಿಕೆಗೆ ಬಂದನು. ಅವನಿಗೆ ಜೋಸೆಫನ ವಿಷಯ ತಿಳಿದಿರಲಿಲ್ಲ.


ಯೆಹೋಶುವನ ದಿನಗಳಲ್ಲೂ ಅವನ ಕಾಲದಿಂದ ಇನ್ನೂ ಜೀವಿಸುತ್ತಿದ್ದ ಹಿರಿಯರ ದಿನಗಳಲ್ಲೂ ಇಸ್ರಯೇಲರು, ಸರ್ವೇಶ್ವರ ಇಸ್ರಯೇಲರ ಹಿತಕ್ಕಾಗಿ ನಡೆಸಿದ ಅದ್ಭುತಕಾರ್ಯಗಳಿಗೆ ಸಾಕ್ಷಿಗಳಾಗಿದ್ದರು.


ಅಕಟಾ, ದಾರಿಗರು ತಂಗುವ ಗುಡಿಸಲೊಂದು ಕಾಡಿನಲ್ಲಿ ಸಿಗಬಾರದೆ ! ಆಗ ಜನರನ್ನು ತ್ಯಜಿಸಿಬಿಟ್ಟು ನಾನಲ್ಲಿಗೆ ತೆರಳುತ್ತಿದ್ದೆ ! ಅವರೆಲ್ಲರು ವ್ಯಭಿಚಾರಿಗಳು, ದ್ರೋಹಿಗಳ ಗುಂಪೇ ಅಲ್ಲವೆ?


ಎಲ್ಲರು ತಂತಮ್ಮ ಗೆಳೆಯರಿಗೆ ಮೋಸಮಾಡುತ್ತಾರೆ ಸತ್ಯವನ್ನು ನುಡಿವುದೇ ಇಲ್ಲ; ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ ಆಯಾಸವಾಗುವ ಮಟ್ಟಿಗೂ ಕೆಡಕನ್ನು ಮಾಡುತ್ತಿದ್ದಾರೆ.


ಕಟ್ಟಕಡೆಗೆ ಆ ಮಹಿಳೆಯೂ ಮರಣಹೊಂದಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು