Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:12 - ಕನ್ನಡ ಸತ್ಯವೇದವು C.L. Bible (BSI)

12 ತಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಕರೆದುತಂದ ದೇವರಾದ ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಮುತ್ತಲಿನ ಜನಾಂಗಗಳ ದೇವರುಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಸರ್ವೇಶ್ವರನನ್ನು ರೇಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಯೆಹೋವನಿಗೆ ಸಿಟ್ಟು ಬರುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತಮ್ಮ ಪಿತೃಗಳನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಯೆಹೋವನನ್ನು ರೇಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಿದ್ದನು. ಅವರ ಪೂರ್ವಿಕರು ಯೆಹೋವನನ್ನು ಆರಾಧಿಸುತ್ತಿದ್ದರು. ಆದರೆ ಇಸ್ರೇಲರು ಯೆಹೋವನನ್ನು ಅನುಸರಿಸದೆ ತಮ್ಮ ಸುತ್ತಮುತ್ತಲಿನ ಜನರ ಸುಳ್ಳುದೇವರುಗಳನ್ನು ಪೂಜಿಸಲು ಆರಂಭಿಸಿದರು. ಆದ್ದರಿಂದ ಯೆಹೋವನಿಗೆ ಕೋಪ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ತಮ್ಮ ತಂದೆಗಳನ್ನು ಈಜಿಪ್ಟಿನಿಂದ ಹೊರಡಿಸಿದ ತಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು, ತಮ್ಮ ಸುತ್ತಲಿರುವ ಜನಾಂಗಗಳ ದೇವರುಗಳ ಹಿಂದೆ ಹೋಗಿ, ಅವುಗಳಿಗೆ ಅಡ್ಡಬಿದ್ದು, ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:12
21 ತಿಳಿವುಗಳ ಹೋಲಿಕೆ  

ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ಅದಕ್ಕೆ ಜನರು, ‘ಈ ನಾಡಿನವರ ಪಿತೃಗಳ ದೇವರಾದ ಸರ್ವೇಶ್ವರ ಅವರನ್ನು ಈಜಿಪ್ಟ್ ದೇಶದಿಂದ ಬಿಡಿಸಿ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು.


ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣಶಿಕ್ಷೆಯಾಗಬೇಕು. ಗುಲಾಮಗಿರಿಯಲ್ಲಿ ಇದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಸರ್ವೇಶ್ವರ ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕು ಎಂದಿದ್ದರೆ, ಅಂಥವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೊಡೆದುಹಾಕಬೇಕು.


“ಎಚ್ಚರಿಕೆಯಿಂದಿರಿ! ನಮ್ಮ ದೇವರಾದ ಸರ್ವೇಶ್ವರನನ್ನು ಬಿಟ್ಟು, ಆ ಜನಾಂಗಗಳ ದೇವರುಗಳನ್ನು ಅವಲಂಬಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಪುರುಷರಾಗಲಿ ನಿಮ್ಮಲ್ಲಿ ಇರಲೇಬಾರದು; ನಿಮ್ಮಲ್ಲಿ ಯಾವ ವಿಷಲತೆಯ ಬೇರೂ ಇರಬಾರದು.


ಅವುಗಳಿಗೆ ಅಡ್ಡಬೀಳಬೇಡ. ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ, ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬನಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಹೆತ್ತವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ಆರಿಸಿಕೊಂಡಿದ್ದರು ಜನರು ಅನ್ಯ ದೇವತೆಗಳನು ಊರಬಾಗಿಲವರೆಗೆ ಬಂದಿತು ಕದನಕಾಳಗಗಳು ಇರಲಿಲ್ಲ ಗುರಾಣಿ, ಭರ್ಜಿಗಳಾವು ಓರ್ವರಲ್ಲೂ ಇಸ್ರಯೇಲರಾ ನಾಲ್ವತ್ತು ಸಾವಿರ ಸೈನಿಕರಲ್ಲೂ.


ಜೋಸೆಫನದು ಜೇಷ್ಠಸಂತತಿಯು ಗೂಳಿಯ ಗಾಂಭೀರ್ಯವೂ ಅವನ ಕೊಂಬುಗಳು, ಕಾಡುಕೋಣದ ಕೊಂಬುಗಳು ಅವುಗಳಿಂದ ಇರಿದು ಓಡಿಸಬಲ್ಲನು ಜಗದ ಜನಾಂಗಗಳನು! ಇವನಂಥವರು ಎಫ್ರಯಿಮ್ ಕುಲದ ಕೋಟ್ಯಾಂತರ ಜನರು ಇವನಂಥವರು ಮನಸ್ಸೆಕುಲದ ಲಕ್ಷಾಂತರ ಮಂದಿಗಳು.”


“ತೃಪ್ತಿಯಾಗಿ ತಿಂದನು ಯಕೋಬನು, ಕೊಬ್ಬಿಹೋದನು ಆ ಯೆಶೂರನು; ತೊರೆದುಬಿಟ್ಟನು ತನ್ನ ಪೊರೆಬಂಡೆಯನು ಮರೆತುಬಿಟ್ಟನು ತನ್ನ ಸೃಷ್ಟಿಕರ್ತನನು.


ಗಿದ್ಯೋನನು ಸತ್ತನಂತರ ಇಸ್ರಯೇಲರು ದೇವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜಿಸಿದರು; ಬಾಳ್ ಬೆರೀತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು.


ಸರ್ವೇಶ್ವರ ಅವರಿಗೆ, “ಈಜಿಪ್ಟ್, ಅಮೋರಿಯ, ಅಮ್ಮೋನಿಯ, ಫಿಲಿಷ್ಟಿಯ, ಚೀದೋನ್ಯ, ಅಮಾಲೇಕ್ಯ, ಮಾವೋನ್ಯ


ಬೇಸರಗೊಳಿಸಿದರು ತಮ್ಮ ಪೂಜಾಸ್ಥಾನಗಳಿಂದ I ರೇಗಿಸಿದರಾತನನು ಕೆತ್ತನೆಯ ವಿಗ್ರಹಗಳಿಂದ II


ಪೂಜೆಮಾಡಿದರು ಆ ಜನರ ವಿಗ್ರಹಗಳಿಗೆ I ಉರುಲಾದವು ಆ ವಿಗ್ರಹಗಳೆ ಅವರಿಗೆ II


ಮೋಶೆ ಇಸ್ರಯೇಲರಿಗೆ, “ಗುಲಾಮತನದಲ್ಲಿದ್ದು ಈಜಿಪ್ಟ್ ದೇಶದಿಂದ ಬಿಡುಗಡೆಯಾದ ಈ ದಿನವನ್ನು ನೀವು ಸ್ಮರಿಸಬೇಕು. ಈ ದಿನದಲ್ಲೇ ಸರ್ವೇಶ್ವರ ಸ್ವಾಮಿ ತಮ್ಮ ಭುಜಬಲ ಪ್ರಯೋಗಿಸಿ ನಿಮ್ಮನ್ನು ಅಲ್ಲಿಂದ ವಿಮೋಚಿಸಿದರು. ಈ ದಿನದಂದು ನೀವು ಹುಳಿಬೆರತದ್ದನ್ನು ತಿನ್ನಕೂಡದು.


ಇದಕ್ಕೆ ಈ ಆಚರಣೆಯು ನಮ್ಮ ಕೈಗೆ ಕಟ್ಟಿದ ಕಂಕಣದಂತೆ, ಹಣೆಗೆ ಕಟ್ಟಿದ ಜ್ಞಾಪಕ ಪಟ್ಟಿಯಂತೆ ಇರುತ್ತದೆ.


ಇನ್ನು ಮುಂದೆ ನಿಮ್ಮ ಮಕ್ಕಳು, ಇದರ ಅರ್ಥವೇನೆಂದು ವಿಚಾರಿಸುವಾಗ ನೀವು ಅವರಿಗೆ, ‘ನಾವು ಗುಲಾಮತನದಲ್ಲಿದ್ದಾಗ ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ಈಜಿಪ್ಟಿನಿಂದ ನಮ್ಮನ್ನು ಬಿಡುಗಡೆ ಮಾಡಿದರು.


ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಈ ಸಂದೇಶವನ್ನು ನೀವು ನೆನಪಿನಲ್ಲಿಡಬೇಕು. ಇದಕ್ಕೆ ಈ ಪದ್ಧತಿಯು ನಿಮ್ಮ ಕೈಗೆ ಕಟ್ಟಿದ ಕಂಕಣದಂತಿರುತ್ತದೆ, ಹಣೆಗೆ ಕಟ್ಟಿದ ಜ್ಞಾಪಕಪಟ್ಟಿಯಂತಿರುತ್ತದೆ.


“ನೀವು ಮಕ್ಕಳನ್ನೂ ಮೊಮ್ಮಕ್ಕಳನ್ನೂ ಪಡೆಯುವಷ್ಟು ಕಾಲ ಆ ನಾಡಿನಲ್ಲಿದ್ದು, ಯಾವುದಾದರೊಂದು ವಿಗ್ರಹವನ್ನು ಮಾಡಿಕೊಂಡು ದ್ರೋಹಿಗಳಾಗಿ ನಿಮ್ಮ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ಅವರನ್ನು ಸಿಟ್ಟುಗೊಳಿಸಿದ್ದೇ ಆದರೆ


ಈಜಿಪ್ಟ್ ದೇಶದಲ್ಲಿ ಗುಲಾಮನಾಗಿದ್ದ ನಿನ್ನನ್ನು ಬಿಡುಗಡೆ ಮಾಡಿದ ಸರ್ವೇಶ್ವರನನ್ನು ಆಗ ಮರೆತುಬಿಡದಂತೆ ಎಚ್ಚರಿಕೆಯಿಂದಿರು.


ಆಗ ನೀನು ಅವರಿಗೆ ಹೀಗೆಂದು ಹೇಳಬೇಕು : ಸರ್ವೇಶ್ವರನ ಈ ಮಾತಿಗೆ ಕಿವಿಗೊಡಿ : ‘ನಿಮ್ಮ ಪೂರ್ವಜರು ನನ್ನನ್ನು ತೊರೆದುಬಿಟ್ಟರು. ಅನ್ಯದೇವತೆಗಳನ್ನು ಹಿಂಬಾಲಿಸಿದರು. ಅವುಗಳಿಗೆ ಸೇವೆಸಲ್ಲಿಸಿ ಪೂಜಿಸಿದರು. ನನ್ನನ್ನು ಬಿಟ್ಟುದಲ್ಲದೆ ನನ್ನ ಧರ್ಮವಿಧಿಗಳನ್ನು ಮೀರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು