Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:14 - ಕನ್ನಡ ಸತ್ಯವೇದವು C.L. Bible (BSI)

14 ಆದ್ದರಿಂದ ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು; ಅವರನ್ನು ಕೊಳ್ಳೆಹೊಡೆಯುವವರ ಕೈಗೆ ಒಪ್ಪಿಸಿದರು. ಶತ್ರುಗಳು ಅವರನ್ನು ಸುಲಿಗೆ ಮಾಡಿದರು. ಸರ್ವೇಶ್ವರ ಅವರನ್ನು ಅಕ್ಕಪಕ್ಕದ ವೈರಿಗಳಿಗೆ ಮಾರಿಬಿಟ್ಟರು. ಆ ಶತ್ರುಗಳ ಮುಂದೆ ಇಸ್ರಯೇಲರು ನಿಲ್ಲಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿಬಿಟ್ಟನು. ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನ ಕೋಪವು ಅವರ ಮೇಲೆ ಉರಿಯಹತ್ತಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿ ಬಿಟ್ಟನು; ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡನು. ಶತ್ರುಗಳು ಇಸ್ರೇಲರ ಮೇಲೆ ಧಾಳಿಮಾಡಿ ಅವರ ಸ್ವತ್ತನ್ನು ತೆಗೆದುಕೊಳ್ಳುವಂತೆ ಯೆಹೋವನು ಮಾಡಿದನು. ಸುತ್ತಮುತ್ತಲಿದ್ದ ಅವರ ಶತ್ರುಗಳು ಅವರನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರು ಶತ್ರುಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿಗೆ ವಿರೋಧವಾಗಿ ಉರಿಗೊಂಡು, ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಇನ್ನು ಮೇಲೆ ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ, ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:14
35 ತಿಳಿವುಗಳ ಹೋಲಿಕೆ  

ಇಸ್ರಯೇಲ್ ಕುಲಗಳಲ್ಲಿ ಉಳಿದಿದ್ದ ಇವರನ್ನೂ ಹೇಸಿ, ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ, ಶಿಕ್ಷಿಸಿದರು.


ಒಬ್ಬನಿಂದ ಸಾವಿರ ಮಂದಿ ಸೋತುಹೋದುದು’ ಒಬ್ಬರಿಗಂಜಿ ಹತ್ತುಸಾವಿರ ಓಡಿಹೋದುದು, ಅವರ ಪೊರೆಬಂಡೆಯಾತ ಅವರನು ವೈರಿಗೊಪ್ಪಿಸಿದ್ದರಿಂದಲ್ಲವೆ? ಅವರ ಸರ್ವೇಶ್ವರನು ಅವರನು ಕೈಬಿಟ್ಟುದರಿಂದಲ್ಲವೆ?


ಆದುದರಿಂದ ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿದರು.


ಈ ಕಾರಣ ಸರ್ವೇಶ್ವರ ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯ ರಾಜನಾದ ಯಾಬೀನನಿಗೆ ವಶಪಡಿಸಿದರು. ಮ್ಲೇಚ್ಛರ ಹರೋಷೆತ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಪತಿ ಆಗಿದ್ದನು.


ಯಾರೂ ಓಡಿಸದಿದ್ದರೂ ಕತ್ತಿಗೆ ಹೆದರಿ ಓಡುವವರಂತೆ ಒಬ್ಬರ ಮೇಲೊಬ್ಬರು ಬೀಳುವರು. ಶತ್ರುಗಳ ಮುಂದೆ ನಿಲ್ಲಲಾರಿರಿ.


ಆದರೂ ಅವರು ದೇವಸಂದೇಶಕರನ್ನು ಗೇಲಿಮಾಡಿದರು. ದೇವರ ಮಾತುಗಳನ್ನು ತುಚ್ಛೀಕರಿಸಿ ಅವರ ಪ್ರವಾದಿಗಳನ್ನು ಹೀಯಾಳಿಸಿದರು. ಆದ್ದರಿಂದ ದೇವಕೋಪಾಗ್ನಿ ಅವರ ಪ್ರಜೆಯ ಮೇಲೆ ಉರಿಯತೊಡಗಿತು. ಅದರ ತಾಪ ಆರಿಹೋಗಲೇ ಇಲ್ಲ.


ದಾಳಿಮಾಡುವ ಆ ಬಾಬಿಲೋನಿಯರನ್ನು ನೀವು ಪೂರ್ತಿಯಾಗಿ ಸೋಲಿಸಿದರೂ, ಅವರಲ್ಲಿ ಗಾಯಗೊಂಡವರು ಮಾತ್ರ ನಿಮ್ಮಲ್ಲಿ ಉಳಿದರೂ, ಆ ಗಾಯಗೊಂಡವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದುಬಂದು ಈ ನಗರವನ್ನು ಬೆಂಕಿಯಿಂದ ಸುಟ್ಟುಬಿಡುವರು.


ಸರ್ವೇಶ್ವರ ಹೀಗೆನ್ನುತ್ತಾರೆ : “ವಿವಾಹ ವಿಚ್ಛೇದನಗೈದ ಗಂಡಸಿನಂತೆ ನಾನು ನಿಮ್ಮ ಜನಾಂಗವನ್ನು ಪರಿತ್ಯಜಿಸಿದುಂಟೊ? ತನ್ನ ಮಕ್ಕಳನ್ನು ಜೀತಕ್ಕೆ ಇರಿಸುವವನಂತೆ ನಾನು ನಿಮ್ಮನ್ನು ನನ್ನ ಸಾಲಗಾರರಿಗೆ ಮಾರಿದುಂಟೊ? ಇಲ್ಲ, ನೀವು ಸೆರೆವಾಸಿಗಳಾದಿರಿ ನಿಮ್ಮ ದೋಷಗಳ ನಿಮಿತ್ತ; ನಿಮ್ಮ ತಾಯಿಯನು ಬಿಡಲಾಯಿತು ನಿಮ್ಮ ದ್ರೋಹಗಳ ನಿಮಿತ್ತ.


ಬಿಡುಕಾಸಿಗಿಂತ ಕಡೆಗಾಣಿಸಿರುವೆ ನಿನ್ನ ಪ್ರಜೆಯನು I ಲಾಭವಿಲ್ಲದವರಂತೆ ವಿಕ್ರಯಿಸಿರುವೆ ಅದನು II


ಆ ಕಾಲದಲ್ಲಿ ಯಾರಿಗೂ ನಿರ್ಭಯವಾಗಿ ತಿರುಗಾಡುವುದಕ್ಕೆ ಆಗುತ್ತಾ ಇರಲಿಲ್ಲ. ನಾಡಿನ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು.


ಇದಲ್ಲದೆ ಅಮೋರಿಯರು ದಾನ್ ಕುಲದವರನ್ನು ತಗ್ಗಿನ ಪ್ರದೇಶಕ್ಕೆ ಇಳಿಯಗೊಡದೆ ಹಿಂದಟ್ಟಿ ಬೆಟ್ಟಗಳಿಗೆ ಓಡಿಸಿಬಿಟ್ಟರು.


ಸರ್ವೇಶ್ವರ ಯೆಹೂದಕುಲದವರ ಸಂಗಡ ಇದ್ದುದರಿಂದ ಅವರು ಪರ್ವತ ಪ್ರದೇಶಗಳನ್ನೆಲ್ಲಾ ಸ್ವತಂತ್ರಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣ ರಥಗಳಿದ್ದುದರಿಂದ ಅವರನ್ನು ಹೊರಗಟ್ಟಲು ಆಗಲಿಲ್ಲ.


“ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರ ವಾಕ್ಯಗಳನ್ನೆಲ್ಲಾ ನೀವು ಅನುಸರಿಸಲೊಲ್ಲದೆ, ನಿಮ್ಮ ದೇವರಾದ ಸರ್ವೇಶ್ವರನೆಂಬ ಮಹಾಮಹಿಮೆಯುಳ್ಳ ಪೂಜ್ಯನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿರದೇ ಹೋದರೆ


ಶತ್ರುಗಳಿಂದ ನೀವುಪರಾಜಯವನ್ನು ಹೊಂದುವಂತೆ ಸರ್ವೇಶ್ವರ ಮಾಡುವರು; ನೀವು ಒಂದೇ ದಾರಿಯಿಂದ ಅವರ ಮೇಲೆ ದಾಳಿಮಾಡಲು ಹೋಗಿ ಏಳು ದಾರಿ ಹಿಡಿದು ಓಡಿಹೋಗುವಿರಿ. ಜಗದ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವುವು.


“ನೀವು ದುರ್ನಡತೆಯುಳ್ಳವರಾಗಿ ಸರ್ವೇಶ್ವರನನ್ನು ಬಿಟ್ಟದ್ದರಿಂದ ಅವರು ನಿಮ್ಮ ಎಲ್ಲ ಪ್ರಯತ್ನಗಳಲ್ಲೂ ವಿಪತ್ತು, ಕಳವಳ, ಶಾಪ, ಇವುಗಳನ್ನುಂಟುಮಾಡುತ್ತಾ ನಿಮ್ಮನ್ನು ಬೇಗನೆ ನಾಶಮಾಡುವರು.


ಈಗ ಈ ದುಷ್ಟ ಪೀಳಿಗೆಗೆ ಸೇರಿದವರಾದ ನೀವು ನಿಮ್ಮ ಪೂರ್ವಜರಿಗೆ ಬದಲಾಗಿ ಬಂದು ಇಸ್ರಯೇಲರ ಮೇಲಿದ್ದ ಸರ್ವೇಶ್ವರನ ಕೋಪಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತಿದ್ದೀರಿ.


ನಾನು ನಿಮಗೆ ವಿರುದ್ಧ ಕೋಪದಿಂದ ವರ್ತಿಸುವೆನು. ನಿಮ್ಮ ಪಾಪಗಳ ಕಾರಣ ಏಳ್ಮಡಿಯಾಗಿ ಶಿಕ್ಷಿಸುವೆನು.


ಆದ್ದರಿಂದ ಸರ್ವೇಶ್ವರನ ಕೋಪ ಇಸ್ರಯೇಲರ ಮೇಲೆ ಉರಿಯುತ್ತಲೇ ಇತ್ತು; “ಈ ಜನರ ಪೂರ್ವಜರಿಗೆ ನಾನು ಕೊಟ್ಟ ನಿಬಂಧನೆಯನ್ನು ಇವರು ಪಾಲಿಸಲಿಲ್ಲ, ನನ್ನ ಮಾತಿಗೆ ಕಿವಿಗೊಡಲಿಲ್ಲ.


ಇಸ್ರಯೇಲರು ಮತ್ತೆ ಸರ್ವೆಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು. ಮೋವಾಬ್ಯರ ಅರಸ ಎಗ್ಲೋನನನ್ನು ಇಸ್ರಯೇಲರಿಗೆ ವಿರುದ್ಧ ಸರ್ವೇಶ್ವರ ಬಲಪಡಿಸಿದರು.


ಪೂರ್ವಕಾಲದಲ್ಲಿ ನಾನು ನನ್ನ ಜನರಿಗೆ ನ್ಯಾಯಸ್ಥಾಪಕರನ್ನು ನೇಮಿಸಿದೆ. ಅಲ್ಲಿಂದೀಚೆಗೆ ಇಸ್ರಯೇಲರು ಶೋಷಣೆಗೆ ಗುರಿಯಾದರು. ಆದರೆ ಇನ್ನು ಮೇಲೆ ಆಗದು. ನೀನು ಶತ್ರುಭಯವಿಲ್ಲದೆ ಸುಖದಿಂದಿರುವಂತೆ ಮಾಡುವೆನು. ಅದು ಮಾತ್ರ ಅಲ್ಲ. ಸರ್ವೇಶ್ವರನಾದ ನಾನು ನಿನಗಾಗಿ ಒಂದು ಮನೆತನವನ್ನು ಕಟ್ಟುವೆನೆಂದು ಮಾತು ಕೊಡುತ್ತೇನೆ.


ಆದುದರಿಂದ ಸರ್ವೇಶ್ವರಸ್ವಾಮಿ ಇಸ್ರಯೇಲರ ಮೇಲೆ ಕೋಪಗೊಂಡು, ಅವರನ್ನು ಸಿರಿಯಾದವರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದರು. ಇಸ್ರಯೇಲರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಸಿರಿಯಾದವರ ಕೈಕೆಳಗಿದ್ದರು.


ಎಂದೇ ನೀವಿತ್ತಿರಿ ಅವರನು ಕ್ರೂರ ಶತ್ರುಗಳ ವಶಕೆ ಆದರೆ ಸಂಕಟದಲಿ ಮೊರೆಯಿಡಲು, ಪರದಿಂದ ಕಿವಿಗೊಟ್ಟಿರವರಿಗೆ! ರಕ್ಷಕರನು ಕಳುಹಿಸಿದಿರಿ ಕರುಣಾತಿಶಯದಿಂದ ಈ ಪರಿ ಬಿಡಿಸಿದಿರಿ ವಿರೋಧಿಗಳ ಕೈಯಿಂದ.


ನಾನು ನಿಮ್ಮ ಮೇಲೆ ಕಡುಕೋಪಗೊಳ್ಳುವೆನು; ನೀವು ನಿಮ್ಮ ಶತ್ರುಗಳ ಮುಂದೆಯೇ ಸೋತುಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು. ಯಾರೂ ಬೆನ್ನಟ್ಟಿ ಬರದಿದ್ದರೂ ನೀವು ಹೆದರಿ ಓಡುವಿರಿ.


ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ತಮ್ಮ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳವರಾಗಿದ್ದ ಆ ಪೀಳಿಗೆಯವರೆಲ್ಲರು ನಾಶವಾಗುವ ತನಕ, ಅಂದರೆ ನಾಲ್ವತ್ತುವರ್ಷ ಕಾಲ, ಇಸ್ರಯೇಲರನ್ನು ಮರುಭೂಮಿಯಲ್ಲೆ ಅಲೆಯುವಂತೆ ಮಾಡಿದರು.


ದೇವರಾದ ಸರ್ವೇಶ್ವರನ ನಿಬಂಧನೆಯನ್ನು ನೀವು ಮೀರಿ ಅನ್ಯದೇವತೆಗಳಿಗೆ ಸೇವೆಸಲ್ಲಿಸಿ, ಅಡ್ಡಬಿದ್ದರೆ, ಸರ್ವೇಶ್ವರನ ಕೋಪಾಗ್ನಿ ನಿಮ್ಮ ಮೇಲೆ ಎರಗುವುದು; ಅವರು ನಿಮಗೆ ಕೊಟ್ಟ ಈ ಒಳ್ಳೆಯ ನಾಡಿನಿಂದ ಹೊರದೂಡಲ್ಪಟ್ಟು ಬೇಗನೆ ನಾಶವಾಗುವಿರಿ,” ಎಂದನು.


ಸರ್ವೇಶ್ವರಸ್ವಾಮಿ ಮತ್ತೆ ಇಸ್ರಯೇಲರ ಮೇಲೆ ಕೋಪಗೊಂಡರು. ಇಸ್ರಯೇಲ್ ಹಾಗು ಯೆಹೂದ್ಯಕುಲಗಳವರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದರು.


ಈ ಕಾರಣ ದೇವರಾದ ಸರ್ವೇಶ್ವರ ಅಹಾಜನನ್ನು ಸಿರಿಯಾದ ಅರಸನ ಕೈಗೆ ಒಪ್ಪಿಸಿದನು. ಸಿರಿಯಾದವರು ಅವನನ್ನು ಸೋಲಿಸಿ ಅವನ ಜನರಲ್ಲಿ ದೊಡ್ಡ ಗುಂಪನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ, ಅವನು ಇಸ್ರಯೇಲ್ ರಾಜನ ಕೈವಶವಾಗಿ ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು.


ನಮ್ಮನೊಪ್ಪಿಸಿರುವೆ ವಧ್ಯಸ್ಥಾನಕೊಯ್ದ ಕುರಿಗಳಂತೆ I ಚದರಿಸಿಬಿಟ್ಟಿರುವೆ ನಮ್ಮನು ಅನ್ಯ ಜನಾಂಗಗಳ ಮಧ್ಯೆ II


ಕೊಟ್ಟವರಾರು ಯಕೋಬನ್ನು ಸುಲಿಗೆಗೆ, ಇಸ್ರಯೇಲನ್ನು ಕೊಳ್ಳೆಗೆ? ಯಾವ ಸರ್ವೇಶ್ವರನಿಗೆ ದ್ರೋಹಮಾಡಿದ್ದೇವೋ ಆತನೇ ಅಲ್ಲವೇ? ಜನರು ಆತನ ಮಾರ್ಗದಲ್ಲಿ ನಡೆಯದೇ, ಆತನ ಉಪದೇಶವನ್ನು ಕೇಳದೆಹೋದರಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು