Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:18 - ಕನ್ನಡ ಸತ್ಯವೇದವು C.L. Bible (BSI)

18 ವೈರಿಗಳ ಹಿಂಸೆಯನ್ನು ತಾಳಲಾರದೆ ಇಸ್ರಯೇಲರು ಗೋಳು ಇಟ್ಟರು. ಸರ್ವೇಶ್ವರ ಅದನ್ನು ಕೇಳಿ ಕನಿಕರಪಟ್ಟು ನ್ಯಾಯಾಧಿಪತಿಗಳನ್ನು ಕಳುಹಿಸಿಕೊಟ್ಟರು; ಜೀವಮಾನವೆಲ್ಲ ಅವರ ಸಂಗಡವೇ ಇದ್ದು ಅವರ ಮುಖಾಂತರ ಇಸ್ರಯೇಲರನ್ನು ಶತ್ರುಗಳಿಂದ ಬಿಡಿಸಿದರು. ತಮ್ಮನ್ನು ಹಿಂಸಿಸುತ್ತಿದ್ದವರ ಕಾಟವನ್ನು ತಾಳದೆ ಮೊರೆಯಿಡುವುದನ್ನು ಸರ್ವೇಶ್ವರ ಕೇಳಿ ಮನಮರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ ಕನಿಕರಪಟ್ಟು ನ್ಯಾಯಸ್ಥಾಪಕರನ್ನು ಎಬ್ಬಿಸಿ ಅವರ ಜೀವಮಾನವೆಲ್ಲಾ ಅವರ ಸಂಗಡ ಇದ್ದು ಅವರ ಮೂಲಕವಾಗಿ ಇಸ್ರಾಯೇಲ್ಯರನ್ನು ಶತ್ರುಗಳಿಂದ ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅನೇಕ ಸಲ ಶತ್ರುಗಳು ಇಸ್ರೇಲರಿಗೆ ತುಂಬ ಕಷ್ಟಗಳನ್ನು ಉಂಟು ಮಾಡುತ್ತಿದ್ದರು. ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಿದ್ದರು; ಪ್ರತಿಸಲವೂ ಯೆಹೋವನು ಅವರ ಗೋಳಾಟವನ್ನು ಕೇಳಿ ಮರುಕಪಡುತ್ತಿದ್ದನು. ಪ್ರತಿಸಲವೂ ಅವರನ್ನು ಶತ್ರುಗಳಿಂದ ರಕ್ಷಿಸಲು ಒಬ್ಬ ನ್ಯಾಯಾಧೀಶನನ್ನು ಕಳುಹಿಸಿ ಕೊಡುತ್ತಿದ್ದನು. ಯೆಹೋವನು ಆ ನ್ಯಾಯಾಧೀಶರ ಜೊತೆಯಲ್ಲಿಯೇ ಇರುತ್ತಿದ್ದನು. ಹೀಗಾಗಿ ಪ್ರತಿಸಲವೂ ಇಸ್ರೇಲರನ್ನು ಅವರ ಶತ್ರುಗಳಿಂದ ರಕ್ಷಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆಹೋವ ದೇವರು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿದಾಗ, ಯೆಹೋವ ದೇವರು ನ್ಯಾಯಾಧಿಪತಿಯ ಸಂಗಡ ಇದ್ದು, ಆ ನ್ಯಾಯಾಧಿಪತಿಯ ದಿವಸಗಳಲ್ಲೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ತಪ್ಪಿಸಿ ರಕ್ಷಿಸುತ್ತಿದ್ದರು. ಏಕೆಂದರೆ ಅವರು ತಮ್ಮನ್ನು ಬಾಧಿಸಿ, ಶ್ರಮೆಪಡಿಸುವವರ ನಿಮಿತ್ತ ಗೋಳಾಡಿದ್ದರಿಂದ ಯೆಹೋವ ದೇವರು ಕನಿಕರಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:18
22 ತಿಳಿವುಗಳ ಹೋಲಿಕೆ  

ನಿನ್ನ ಜೀವಮಾನವಿಡೀ ಯಾರೊಬ್ಬನು ನಿನ್ನನ್ನು ಎದುರಿಸಿ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು. ನಿನ್ನನ್ನು ಕೈಬಿಡುವುದಿಲ್ಲ, ನಿನ್ನನ್ನು ತೊರೆದುಬಿಡುವುದಿಲ್ಲ.


ಸ್ವತಂತ್ರರು, ಪರತಂತ್ರರು ನಿರಾಶ್ರಯರಾದಾಗ ಅವರೆಲ್ಲರು ನಿಶ್ಯೇಷರಾದವರು ಎಂದು ತಿಳಿದುಬಂದಾಗ ದೊರಕಿಸುವನು ಸರ್ವೇಶ್ವರನು ನ್ಯಾಯವನು ತನ್ನ ಪ್ರಜೆಗೆ ತೋರುವನು ಅನುಕಂಪವನು ತನ್ನ ಭಕ್ತಾದಿಗಳಿಗೆ.


ದೇವರು ಆ ಜನರ ನರಳಾಟವನ್ನು ಕೇಳಿ ತಾವು ಅಬ್ರಹಾಮ, ಇಸಾಕ, ಯಕೋಬರಿಗೆ ಮಾಡಿದ್ದ ವಾಗ್ದಾನವನ್ನು ನೆನಪಿಗೆ ತಂದುಕೊಂಡರು.


“ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ?


ಯೆಹೋವಾಹಾಜನು ಸರ್ವೇಶ್ವರನಿಗೆ ಮೊರೆ ಇಟ್ಟನು. ಅವರು ಅವನ ಮೊರೆಗೆ ಓಗೊಟ್ಟು, ಸಿರಿಯಾದವರ ಅರಸನಿಂದ ಬಹಳವಾಗಿ ಶೋಷಿತರಾದ ಇಸ್ರಯೇಲರ ಮೇಲೆ ಕಟಾಕ್ಷವಿಟ್ಟು, ಅವರಿಗೆ ಒಬ್ಬ ವಿಮೋಚಕನನ್ನು ಅನುಗ್ರಹಿಸಿದರು.


ಆಗ ಇಸ್ರಯೇಲರ ಸಂಕಟದ ನಿಮಿತ್ತ ಸರ್ವೇಶ್ವರ ಬಹಳವಾಗಿ ನೊಂದುಕೊಂಡರು.


ಇದನ್ನು ಕಂಡ ಸರ್ವೇಶ್ವರ ಮನುಜನನ್ನು ಇಲ್ಲಿ ಸೃಷ್ಟಿಮಾಡಿದ್ದಕ್ಕಾಗಿ ವ್ಯಥೆಪಟ್ಟು,


ಅದಕ್ಕೆ ದೇವರು, “ನಾನೇ ನಿನ್ನ ಸಂಗಡ ಇರುವೆನು; ನೀನು ನನ್ನ ಜನರನ್ನು ಈಜಿಪ್ಟಿನಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ. ನಿನ್ನನ್ನು ಕಳಿಸಿದವನು ನಾನೇ ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.


ಆ ಜನರು ಮಾಡಿದುದೆಲ್ಲವನ್ನು ದೇವರು ಗಮನಿಸಿದರು. ತಮ್ಮ ದುರ್ನಡತೆಯನ್ನು ಜನರು ಕೈಬಿಟ್ಟದ್ದನ್ನು ಕಂಡು, ಮನಮರುಗಿ ಅವರಿಗೆ ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ತಡೆಹಿಡಿದರು.


ಪ್ರಭು, ತಿರುಗಿ ಬಾ, ಕೋಪವೆಷ್ಟರ ತನಕ? I ನಿನ್ನೀ ಸೇವಕರ ಮೇಲಿರಲಿ ಮರುಕ II


ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II


ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಪೀಡಿಸುವ ಶತ್ರುಗಳ ಮೇಲೆ ಯುದ್ಧಕ್ಕೆ ಹೊರಡುವಾಗ ಆ ಕಹಳೆಗಳನ್ನು ಆರ್ಭಟವಾಗಿ ಮೊಳಗಿಸಬೇಕು. ಆಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ನೆನಪಿಗೆ ತಂದುಕೊಂಡು ಶತ್ರುಗಳ ಕೈಯಿಂದ ನಿಮ್ಮನ್ನು ಬಿಡಿಸುವರು.


ಅಂಥ ನ್ಯಾಯಾಧಿಪತಿಗಳು ತೀರಿಹೋದ ನಂತರ ಇಸ್ರಯೇಲರು ಮತ್ತೆ ತಮ್ಮ ಹಿಂದಿನವರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ, ಅವುಗಳಿಗೆ ಸೇವೆಮಾಡಿ ಅಡ್ಡಬಿದ್ದರು. ಅವರು ತಮ್ಮ ದುರ್ಮಾರ್ಗಗಳನ್ನೂ ಹಠಮಾರಿತನವನ್ನೂ ಬಿಡಲೇ ಇಲ್ಲ.


ಆಗ ಸರ್ವೇಶ್ವರ ತಮ್ಮ ಪ್ರಜೆಗಳಿಗೆ ಮಾಡುವೆನೆಂದು ಹೇಳಿದ ಕೇಡಿನ ಬಗ್ಗೆ ಮನಸ್ಸನ್ನು ಮಾರ್ಪಡಿಸಿಕೊಂಡರು.


ಇಸ್ರಯೇಲರು ಮೊರೆಯಿಟ್ಟಾಗ ಅವರನ್ನು ಬಿಡುಗಡೆ ಮಾಡಲು ಸರ್ವೇಶ್ವರ ಒಬ್ಬ ವ್ಯಕ್ತಿಯನ್ನು ಎಬ್ಬಿಸಿದರು; ಆತನೇ ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲ್.


ಸರ್ವೇಶ್ವರನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, “ಪರಾಕ್ರಮಶಾಲಿಯೇ, ಸರ್ವೇಶ್ವರ ನಿನ್ನೊಡನೆ ಇದ್ದಾರೆ” ಎಂದನು.


ಸರ್ವೇಶ್ವರ ಅವನಿಗೆ, “ನಾನು ನಿನ್ನೊಂದಿಗೆ ಇರುವುದರಿಂದ ನೀನು ಮಿದ್ಯಾನ್ಯರೆಲ್ಲರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸದೆಬಡಿಯುವೆ,” ಎಂದರು.


ಯೆಪ್ತಾಹನು ನದಿಯನ್ನು ದಾಟಿ ಅಮ್ಮೋನಿಯರಿಗೆ ವಿರುದ್ಧ ಯುದ್ಧಕ್ಕೆ ಹೋಗಲು ಅವರನ್ನು ಸರ್ವೇಶ್ವರ ಅವನ ಕೈಗೆ ಒಪ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು