Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:20 - ಕನ್ನಡ ಸತ್ಯವೇದವು C.L. Bible (BSI)

20 ಆದ್ದರಿಂದ ಸರ್ವೇಶ್ವರನ ಕೋಪ ಇಸ್ರಯೇಲರ ಮೇಲೆ ಉರಿಯುತ್ತಲೇ ಇತ್ತು; “ಈ ಜನರ ಪೂರ್ವಜರಿಗೆ ನಾನು ಕೊಟ್ಟ ನಿಬಂಧನೆಯನ್ನು ಇವರು ಪಾಲಿಸಲಿಲ್ಲ, ನನ್ನ ಮಾತಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದ್ದರಿಂದ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಹೆಚ್ಚಾಯಿತು. ಆತನು, “ಈ ಜನರ ಪೂರ್ವಿಕರಿಗೆ ನಾನು ಕೊಟ್ಟ ಒಡಂಬಡಿಕೆಯನ್ನು ಇವರು ಕೈಕೊಳ್ಳಲಿಲ್ಲ; ನನ್ನ ಮಾತಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದದರಿಂದ ಯೆಹೋವನ ಕೋಪವು ಇಸ್ರಾಯೇಲ್ಯರ ಮೇಲೆ ಉರಿಯಹತ್ತಿತು; ಆತನು - ಈ ಜನರ ಪಿತೃಗಳಿಗೆ ನಾನು ಕೊಟ್ಟ ನಿಬಂಧನೆಯನ್ನು ಇವರು ಕೈಕೊಳ್ಳಲಿಲ್ಲ; ನನ್ನ ಮಾತಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಹೀಗಾಗಿ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡು, “ಈ ಜನಾಂಗದವರು ಅವರ ಪೂರ್ವಿಕರ ಸಂಗಡ ನಾನು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದಿದ್ದಾರೆ. ಇವರು ನನ್ನ ಮಾತನ್ನು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದ್ದರಿಂದ ಯೆಹೋವ ದೇವರು ಇಸ್ರಾಯೇಲರ ಮೇಲೆ ಕೋಪದಿಂದ ಉರಿಗೊಂಡು, “ಈ ಜನಾಂಗವು ನಾನು ಅವರ ಪಿತೃಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಮಾತನ್ನು ಕೇಳದೆ ಹೋದದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:20
16 ತಿಳಿವುಗಳ ಹೋಲಿಕೆ  

ಆದ್ದರಿಂದ ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು; ಅವರನ್ನು ಕೊಳ್ಳೆಹೊಡೆಯುವವರ ಕೈಗೆ ಒಪ್ಪಿಸಿದರು. ಶತ್ರುಗಳು ಅವರನ್ನು ಸುಲಿಗೆ ಮಾಡಿದರು. ಸರ್ವೇಶ್ವರ ಅವರನ್ನು ಅಕ್ಕಪಕ್ಕದ ವೈರಿಗಳಿಗೆ ಮಾರಿಬಿಟ್ಟರು. ಆ ಶತ್ರುಗಳ ಮುಂದೆ ಇಸ್ರಯೇಲರು ನಿಲ್ಲಲಾರದೆ ಹೋದರು.


ದೇವರಾದ ಸರ್ವೇಶ್ವರನ ನಿಬಂಧನೆಯನ್ನು ನೀವು ಮೀರಿ ಅನ್ಯದೇವತೆಗಳಿಗೆ ಸೇವೆಸಲ್ಲಿಸಿ, ಅಡ್ಡಬಿದ್ದರೆ, ಸರ್ವೇಶ್ವರನ ಕೋಪಾಗ್ನಿ ನಿಮ್ಮ ಮೇಲೆ ಎರಗುವುದು; ಅವರು ನಿಮಗೆ ಕೊಟ್ಟ ಈ ಒಳ್ಳೆಯ ನಾಡಿನಿಂದ ಹೊರದೂಡಲ್ಪಟ್ಟು ಬೇಗನೆ ನಾಶವಾಗುವಿರಿ,” ಎಂದನು.


“ನಾನು ನಿಮ್ಮನ್ನು ಲೆಕ್ಕಿಸುವಂತೆ, ಕೋಲಿನ ಕೆಳಗೆ ಹೋಗುವಂತೆಮಾಡಿ, ಒಡಂಬಡಿಕೆಯ ಕಟ್ಟಿನಿಂದ ಬಂಧಿಸುವೆನು,


ಈ ಒಡಂಬಡಿಕೆ, ನಾನು ಅವರ ಪೂರ್ವಜರನ್ನು ಕೈ ಹಿಡಿದು ಈಜಿಪ್ಟಿನಿಂದ ಕರೆದು ತಂದಾಗ ಅವರೊಡನೆ ಮಾಡಿಕೊಂಡ ಒಡಂಬಡಿಕೆ ಅಂಥದಾಗಿ ಇರುವುದಿಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿನಡೆದರು.


ಆದುದರಿಂದ ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿದರು.


ಆದುದರಿಂದ ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮ್ ಎಂಬವನಿಗೆ ಮಾರಿಬಿಟ್ಟರು. ಈ ಕಾರಣ ಇಸ್ರಯೇಲರು ಎಂಟು ವರ್ಷಗಳವರೆಗೆ ಅವನಿಗೆ ಗುಲಾಮರಾಗಿದ್ದರು.


‘ಉರಿದೇಳುತ್ತಿದೆ ಕೆಳಲೋಕದ ತನಕ ಎನ್ನ ಕೋಪಾಗ್ನಿ ದಹಿಸಿಬಿಡುವುದದು ಭೂಮಿಯನು ಬೆಳೆಸಹಿತವಾಗಿ ಭಸ್ಮಮಾಡುವುದದು ಬೆಟ್ಟಗಳನು ಬುಡಸಮೇತವಾಗಿ.


ಅಂಥ ನ್ಯಾಯಾಧಿಪತಿಗಳು ತೀರಿಹೋದ ನಂತರ ಇಸ್ರಯೇಲರು ಮತ್ತೆ ತಮ್ಮ ಹಿಂದಿನವರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ, ಅವುಗಳಿಗೆ ಸೇವೆಮಾಡಿ ಅಡ್ಡಬಿದ್ದರು. ಅವರು ತಮ್ಮ ದುರ್ಮಾರ್ಗಗಳನ್ನೂ ಹಠಮಾರಿತನವನ್ನೂ ಬಿಡಲೇ ಇಲ್ಲ.


ಪಾಲಿಸಲಿಲ್ಲ ಅವರು ದೇವರ ನಿಬಂಧನೆಯನು I ಅನುಸರಿಸಲಿಲ್ಲ ಆತನ ಧರ್ಮಶಾಸ್ತ್ರವನು II


ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ತಮ್ಮ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳವರಾಗಿದ್ದ ಆ ಪೀಳಿಗೆಯವರೆಲ್ಲರು ನಾಶವಾಗುವ ತನಕ, ಅಂದರೆ ನಾಲ್ವತ್ತುವರ್ಷ ಕಾಲ, ಇಸ್ರಯೇಲರನ್ನು ಮರುಭೂಮಿಯಲ್ಲೆ ಅಲೆಯುವಂತೆ ಮಾಡಿದರು.


ಸರ್ವೇಶ್ವರಸ್ವಾಮಿ ಮತ್ತೆ ಇಸ್ರಯೇಲರ ಮೇಲೆ ಕೋಪಗೊಂಡರು. ಇಸ್ರಯೇಲ್ ಹಾಗು ಯೆಹೂದ್ಯಕುಲಗಳವರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದರು.


ಕೆರಳಿತು ಕೋಪ ಆ ಜನರ ಮೇಲೆ ಪ್ರಭುವಿಗೆ I ತನ್ನವರಾ ನಡತೆ ಅಸಹ್ಯವಾಯಿತು ಆತನಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು