Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:21 - ಕನ್ನಡ ಸತ್ಯವೇದವು C.L. Bible (BSI)

21 ಆದ್ದರಿಂದ ಯೆಹೋಶುವನು ಸಾಯುವ ಮೊದಲು ಹೊರಗಟ್ಟದೆ ಬಿಟ್ಟ ಜನಾಂಗಗಳಲ್ಲಿ ಒಂದನ್ನಾದರೂ ನಾನು ಹೊರಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೀಗಿರುವುದರಿಂದ ಯೆಹೋಶುವನು ಸಾಯುವ ಮೊದಲು ಹೊರಡಿಸದೆ ಬಿಟ್ಟಿದ ಜನಾಂಗಗಳಲ್ಲಿ ನಾನು ಒಂದನ್ನು ಹೊರಡಿಸಿಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೀಗಿರುವದರಿಂದ ಯೆಹೋಶುವನು ಸಾಯುವ ಮೊದಲು ಹೊರಡಿಸದೆ ಬಿಟ್ಟ ಜನಾಂಗಗಳಲ್ಲಿ ನಾನೂ ಒಂದನ್ನಾದರೂ ಹೊರಡಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದ್ದರಿಂದ ಇನ್ನುಮುಂದೆ ನಾನು ಬೇರೆ ಜನಾಂಗಗಳನ್ನು ಸೋಲಿಸಿ ಇಸ್ರೇಲರ ಮಾರ್ಗವನ್ನು ಸರಾಗಮಾಡುವುದಿಲ್ಲ. ಯೆಹೋಶುವನು ಮರಣ ಹೊಂದಿದಾಗ ಆ ಜನಾಂಗದವರು ಇನ್ನೂ ಈ ಪ್ರದೇಶದಲ್ಲಿದ್ದರು. ಈ ಪ್ರದೇಶದಲ್ಲಿ ವಾಸಿಸಲು ಆ ಜನಾಂಗಗಳಿಗೆ ಇನ್ನು ಮೇಲೆಯೂ ಆಸ್ಪದಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು ಸಹ ಇನ್ನು ಮೇಲೆ ಯೆಹೋಶುವನು ಮರಣಹೊಂದುವಾಗ ಉಳಿಸಿದ ಜನಾಂಗಗಳಲ್ಲಿ ಒಬ್ಬರನ್ನಾದರೂ ಇವರ ಮುಂದೆ ಹೊರಡಿಸಿಬಿಡುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:21
8 ತಿಳಿವುಗಳ ಹೋಲಿಕೆ  

ಮಿಶ್ರವಾದರೆ ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಮಧ್ಯೆಯಿಂದ ಹೊರಡಿಸುವುದೇ ಇಲ್ಲವೆಂಬುದು ನಿಮಗೆ ತಿಳಿದಿರಲಿ. ಆ ಜನರೇ ನಿಮಗೆ ಉರುಳೂ ಬೋನೂ ಆಗುವರು; ಪಕ್ಕೆಗೆ ಬಡಿಯುವ ಕೊರಡಾಗಿಯೂ ಇರಿಯುವ ಶೂಲವಾಗಿಯೂ ಕಣ್ಣಿಗೆ ಚುಚ್ಚುವ ಮುಳ್ಳಾಗಿಯೂ ಮಾರ್ಪಡುವರು. ಕಡೆಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟ ಈ ಚೆಲುವ ನಾಡಲ್ಲಿ ನೀವೇ ಇಲ್ಲದಂತಾಗುವಿರಿ.


ನೀವು ಹೀಗೆ ಮಾಡುವುದಾದರೆ ನಾನು ಈ ನಾಡಿನ ನಿವಾಸಿಗಳನ್ನು ನಿಮ್ಮಿಂದ ಓಡಿಸಿಬಿಡುವುದಿಲ್ಲ. ಅವರು ನಿಮ್ಮನ್ನು ಉಪದ್ರವಪಡಿಸುವರು. ಅವರ ದೇವತೆಗಳು ನಿಮ್ಮನ್ನು ತಮ್ಮ ಉರುಳಿನಲ್ಲಿ ಸಿಕ್ಕಿಸಿಕೊಳ್ಳುವುವು ಎಂದು ನಿಮಗೆ ಮೊದಲೇ ಹೇಳಿದ್ದೇನೆ” ಎಂದನು.


ಆದ್ದರಿಂದ ನಾನು ‘ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವೆನು’ ಎಂದು ಮರುಭೂಮಿಯಲ್ಲಿ ಪ್ರಮಾಣಮಾಡಿ ಹೇಳಿದೆ.


ಐದುಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವಕಾನಾನ್ಯರು, ಸಿದೋನ್ಯರು, ಲೆಬನೋನ್ ಪರ್ವತದಲ್ಲಿ ಬಾಳ್ ಹೆರ್ಮೋನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು.


ನೋಡಿ, ಜೋರ್ಡನಿನಿಂದ ಪಶ್ಚಿಮ ಮಹಾ ಸಮುದ್ರದವರೆಗೂ ಇರುವ ಜನಾಂಗಗಳಲ್ಲಿ ಸತ್ತವರ ಹಾಗೂ ಉಳಿದವರ ನಾಡನ್ನು ನಿಮಗೆ ಸೊತ್ತಾಗಿ ಕೊಟ್ಟಿದ್ದೇನೆ,


ನಿಮ್ಮ ದೇವರಾದ ಸರ್ವೇಶ್ವರ ತಾವೇ ಉಳಿದವರನ್ನು ನಿಮ್ಮ ಕಣ್ಮುಂದೆ ಹೊರಡಿಸಿಬಿಡುವರು. ಅವರ ವಾಗ್ದಾನದಂತೆ ಆ ಜನರ ನಾಡನ್ನು ನೀವು ವಶಪಡಿಸಿಕೊಳ್ಳುವಿರಿ.


ಯೆಹೋಶುವನು ಮರಣಹೊಂದಿದ ಬಳಿಕ ಇಸ್ರಯೇಲರು ಕಾನಾನ್ಯರೊಡನೆ ಯುದ್ಧಮಾಡಲು ತಮ್ಮಲ್ಲಿ ಯಾವ ಕುಲ ಮುಂದಾಗಿ ಹೋಗಬೇಕೆಂದು ಸರ್ವೇಶ್ವರಸ್ವಾಮಿಯನ್ನು ವಿಚಾರಿಸಿದರು.


ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದರಲ್ಲೂ ಪಾಲ್ಗೊಳ್ಳದೆ ಇದ್ದ ಇಸ್ರಯೇಲರನ್ನು ಪರೀಕ್ಷಿಸುವುದಕ್ಕೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು