Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:7 - ಕನ್ನಡ ಸತ್ಯವೇದವು C.L. Bible (BSI)

7 ಯೆಹೋಶುವನ ದಿನಗಳಲ್ಲೂ ಅವನ ಕಾಲದಿಂದ ಇನ್ನೂ ಜೀವಿಸುತ್ತಿದ್ದ ಹಿರಿಯರ ದಿನಗಳಲ್ಲೂ ಇಸ್ರಯೇಲರು ಸರ್ವೇಶ್ವರನಿಗೆ ಸೇವೆಸಲ್ಲಿಸುತ್ತಾ ಬಂದರು. ಈ ಹಿರಿಯರು ಸರ್ವೇಶ್ವರ ಇಸ್ರಯೇಲರ ಪರವಾಗಿ ಮಾಡಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಬದುಕಿದ್ದ, ಯೆಹೋವನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವನನ್ನು ಸೇವಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವನು ಇಸ್ರಾಯೇಲ್ಯರಿಗೋಸ್ಕರ ನಡಿಸಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲ್ಯರು ಯೆಹೋವನನ್ನು ಸೇವಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋಶುವನು ಜೀವಂತವಿರುವವರೆಗೆ ಇಸ್ರೇಲರು ಯೆಹೋವನನ್ನು ಸೇವಿಸಿದರು. ಯೆಹೋಶುವನ ಮರಣಾನಂತರ ಬದುಕಿದ್ದ ಹಿರಿಯರ ಜೀವಮಾನದಲ್ಲಿಯೂ ಇಸ್ರೇಲರು ಯೆಹೋವನ ಸೇವೆಯನ್ನು ಮುಂದುವರಿಸಿಕೊಂಡು ಬಂದರು. ಈ ಹಿರಿಯರು ಇಸ್ರೇಲರಿಗಾಗಿ ಯೆಹೋವನು ಮಾಡಿದ ಎಲ್ಲಾ ಮಹತ್ಕಾರ್ಯಗಳನ್ನು ನೋಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವ ದೇವರು ಇಸ್ರಾಯೇಲರಿಗೋಸ್ಕರ ಮಾಡಿದ ಎಲ್ಲ ಮಹತ್ಕಾರ್ಯಗಳನ್ನು ಅರಿತಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವ ದೇವರನ್ನು ಸೇವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:7
8 ತಿಳಿವುಗಳ ಹೋಲಿಕೆ  

ಪ್ರಿಯ ಸಹೋದರರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ, ನಾನು ದೂರವಿರುವಾಗ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿ. ನಿಮ್ಮ ಜೀವೋದ್ಧಾರಕ್ಕಾಗಿ ಭಯಭಕ್ತಿಯಿಂದ ಶ್ರಮಿಸಿರಿ.


ಯೆಹೋಶುವನ ದಿನಗಳಲ್ಲೂ ಅವನ ಕಾಲದಿಂದ ಇನ್ನೂ ಜೀವಿಸುತ್ತಿದ್ದ ಹಿರಿಯರ ದಿನಗಳಲ್ಲೂ ಇಸ್ರಯೇಲರು, ಸರ್ವೇಶ್ವರ ಇಸ್ರಯೇಲರ ಹಿತಕ್ಕಾಗಿ ನಡೆಸಿದ ಅದ್ಭುತಕಾರ್ಯಗಳಿಗೆ ಸಾಕ್ಷಿಗಳಾಗಿದ್ದರು.


ಯಾಜಕ ಯೆಹೋಯಾದನ ಜೀವಮಾನದಲ್ಲೆಲ್ಲಾ ಅವನು ಸರ್ವೇಶ್ವರನ ಚಿತ್ತಾನುಸಾರ ನಡೆದುಕೊಳ್ಳುತ್ತಿದ್ದನು.


ಯಾಜಕನಾದ ಯೆಹೋಯಾದವನು ಅವನಿಗೆ ಬೋಧಕನಾಗಿದ್ದನು. ಆಗ ಅವನು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಳ್ಳುತ್ತಿದ್ದನು.


ಯೆಹೋಶುವನು ಇಸ್ರಯೇಲರನ್ನು ಕಳುಹಿಸಿದ ಮೇಲೆ ಅವರು ತಮ್ಮ ತಮ್ಮ ಪಾಲಿಗೆ ಬಂದ ಪ್ರದೇಶಗಳಿಗೆ ಹೋಗಿ ಅವುಗಳನ್ನು ಸ್ವತಂತ್ರಿಸಿಕೊಂಡರು.


ಸರ್ವೇಶ್ವರನ ದಾಸ ನೂನನ ಮಗ ಯೆಹೋಶುವನು ನೂರಹತ್ತು ವರ್ಷದವನಾಗಿ ಮರಣಹೊಂದಿದನು.


ಇಸ್ರಯೇಲರು ಇವರ ಮಾತನ್ನೂ ಕೇಳದೆ ಅನ್ಯದೇವತೆಗಳನ್ನು ಪೂಜಿಸಿ ಅವುಗಳಿಗೆ ಅಡ್ಡಬಿದ್ದು ದೇವದ್ರೋಹಿಗಳಾದರು. ಸರ್ವೇಶ್ವರನ ಆಜ್ಞೆಗಳನ್ನು ಪಾಲಿಸುತ್ತಿದ್ದ ತಮ್ಮ ಪೂರ್ವಜರ ಮಾರ್ಗವನ್ನು ಬೇಗನೆ ತ್ಯಜಿಸಿಬಿಟ್ಟರು. ಅವರಂತೆ ನಡೆಯಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು