Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:16 - ಕನ್ನಡ ಸತ್ಯವೇದವು C.L. Bible (BSI)

16 ಈ ಎಲ್ಲ ಜನರಲ್ಲಿ ಏಳುನೂರು ಮಂದಿ ಎಡಚರಾದ ಯುದ್ಧವೀರರಿದ್ದರು. ಅವರಲ್ಲಿ ಪ್ರತಿಯೊಬ್ಬನು ಕೂದಲ ಎಳೆಯಷ್ಟೂ ಗುರಿತಪ್ಪದ ಹಾಗೆ ಕವಣೆಯನ್ನು ಹೊಡೆಯುವುದರಲ್ಲಿ ನಿಪುಣನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಈ ಎಲ್ಲಾ ಜನರಲ್ಲಿ ಏಳುನೂರು ಜನರು ಎಡಚರಾದ ಯುದ್ಧವೀರರಿದ್ದರು. ಅವರಲ್ಲಿ ಪ್ರತಿಯೊಬ್ಬರು ಕೂದಲೆಳೆಯಷ್ಟು ಗುರಿತಪ್ಪದ ಹಾಗೆ ಕವಣೆಯನ್ನು ಹೊಡೆಯುವುದರಲ್ಲಿ ನಿಪುಣರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಈ ಎಲ್ಲಾ ಜನರಲ್ಲಿ ಏಳು ನೂರು ಮಂದಿ ಎಡಚರಾದ ಯುದ್ಧವೀರರಿದ್ದರು. ಅವರಲ್ಲಿ ಪ್ರತಿಯೊಬ್ಬನೂ ಕೂದಲೆಳೆಯಷ್ಟೂ ಗುರಿ ತಪ್ಪದ ಹಾಗೆ ಕವಣೆಯನ್ನು ಹೊಡಿಯುವದರಲ್ಲಿ ನಿಪುಣನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇದಲ್ಲದೆ ಎಡಚರಾಗಿದ್ದ ಏಳುನೂರು ಮಂದಿ ಸೈನಿಕರು ಸಹ ಅಲ್ಲಿದ್ದರು. ಅವರು ಸಹ ತರಬೇತಿ ಪಡೆದವರಾಗಿದ್ದರು. ಅವರಲ್ಲಿ ಪ್ರತಿಯೊಬ್ಬನೂ ಕೂದಲೆಳೆಯಷ್ಟೂ ಗುರಿತಪ್ಪದೆ ಕವಣೆಯನ್ನು ಹೊಡೆಯುವದರಲ್ಲಿ ನಿಪುಣನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಈ ಸಮಸ್ತ ಜನರಲ್ಲಿ ಆರಿಸಿದ ಏಳು ನೂರು ಜನರು ಬಲಗೈ ಅಭ್ಯಾಸವಿಲ್ಲದವರಾಗಿದ್ದರು. ಅವರೆಲ್ಲರೂ ಒಂದು ಕೂದಲೆಳೆ ತಪ್ಪದ ಹಾಗೆ ಕವಣೆಯಿಂದ ಕಲ್ಲೆಸೆಯುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:16
7 ತಿಳಿವುಗಳ ಹೋಲಿಕೆ  

ಆಗ ಇಸ್ರಯೇಲರು ಸರ್ವೇಶ್ವರನಿಗೆ ಮೊರೆಯಿಟ್ಟರು. ಅವರನ್ನು ಬಿಡುಗಡೆ ಮಾಡಲು ಬೆನ್ಯಾಮೀನ್ ಕುಲದ ಗೇರನ ಮಗ ಏಹೂದನನ್ನು ವಿಮೋಚಕನಾಗಿ ಕಳುಹಿಸಲಾಯಿತು. ಅವನೊಬ್ಬ ಎಡಚ. ಇಸ್ರಯೇಲರು ಅವನ ಮುಖಾಂತರ ಮೋವಾಬ್ಯರ ಅರಸ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.


ಸೌಲನೂ ಬೆನ್ಯಾಮೀನ್ ಗೋತ್ರಕ್ಕೆ ಸೇರಿದವನೇ. ದಾವೀದನನ್ನು ಹಿಂಬಾಲಿಸಿದವರು ಎಡಗೈಯಿಂದಾಗಲೀ ಬಲಗೈಯಿಂದಾಗಲೀ ಬಾಣಗಳನ್ನೆಸೆಯುವವರೂ ಕವಣೆಗಳಲ್ಲಿ ಕಲ್ಲುಗಳನ್ನಿಟ್ಟು ಎಸೆಯಲು ಶಕ್ತರೂ ಆಗಿದ್ದರು.


ಉಜ್ಜೀಯನು ಈ ಎಲ್ಲ ಸೈನ್ಯದವರಿಗೆ ಬೇಕಾದ ಗುರಾಣಿ, ಬರ್ಜಿ, ಶಿರಸ್ತ್ರಾಣ, ಕವಚ, ಬಿಲ್ಲು, ಕವಣೆಯಕಲ್ಲು ಇವುಗಳನ್ನು ಒದಗಿಸಿಕೊಟ್ಟನು.


ಯಾವನಾದರೂ ನನ್ನ ಒಡೆಯರಾದ ನಿಮ್ಮನ್ನು ಹಿಂಸಿಸಿ ಜೀವತೆಗೆಯಬೇಕೆಂದು ಇರುವಾಗ, ಆ ನಿಮ್ಮ ಜೀವ, ತಮ್ಮ ದೇವರಾದ ಸರ್ವೇಶ್ವರನ ರಕ್ಷಣೆಯಲ್ಲಿರುವ ಜೀವನಿಕ್ಷೇಪದಲ್ಲಿ ಸುಭದ್ರವಾಗಿರಲಿ; ಆದರೆ ನಿಮ್ಮ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದುಬಿಡಲಿ.


ಕುರಿಕಾಯುವ ತನ್ನ ಕೋಲನ್ನೇ ತೆಗೆದುಕೊಂಡು ಹೊರಟನು. ಒಂದು ಹಳ್ಳಕ್ಕೆ ಹೋಗಿ ಐದು ನುಣುಪು ಕಲ್ಲುಗಳನ್ನು ಆರಿಸಿಕೊಂಡನು. ಕುರುಬರ ಪದ್ಧತಿಯಂತೆ ಅವುಗಳನ್ನು ತನ್ನ ಸೊಂಟಚೀಲದಲ್ಲಿ ಹಾಕಿಕೊಂಡನು. ಕೈಯಲ್ಲಿ ಕವಣೆಯನ್ನು ಹಿಡಿದು, ಆ ಫಿಲಿಷ್ಟಿಯನನ್ನು ಎದುರಿಸಲು ಹೋದನು.


ಬೆನ್ಯಾಮೀನ್ಯರಲ್ಲದ ಇಸ್ರಯೇಲರಲ್ಲಿ ನಾಲ್ಕು ಲಕ್ಷ ಯೋಧರು ಇದ್ದರು; ಇವರೆಲ್ಲರು ವೀರರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು