ನ್ಯಾಯಸ್ಥಾಪಕರು 20:18 - ಕನ್ನಡ ಸತ್ಯವೇದವು C.L. Bible (BSI)18 ಇಸ್ರಯೇಲರು ಬೇತೇಲಿಗೆ ಹೋಗಿ, ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ದೇವರಾದ ಸರ್ವೇಶ್ವರನನ್ನು ಕೇಳಲು ಅವರು, “ಮೊದಲು ಯೆಹೂದಕುಲದವರು ಹೋಗಲಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇಸ್ರಾಯೇಲ್ಯರು ಬೇತೇಲಿಗೆ ಹೋಗಿ, “ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ದೇವರಾದ ಯೆಹೋವನನ್ನು ಕೇಳಲು ಆತನು, “ಮೊದಲು ಯೆಹೂದ ಕುಲದವರು ಹೋಗಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇಸ್ರಾಯೇಲ್ಯರು ಬೇತೇಲಿಗೆ ಹೋಗಿ - ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ದೇವರಾದ ಯೆಹೋವನನ್ನು ಕೇಳಲು ಆತನು - ಮೊದಲು ಯೆಹೂದಕುಲದವರು ಹೋಗಲಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಇಸ್ರೇಲಿನ ಜನರು ಬೇತೇಲಿಗೆ ಹೋದರು. ಬೇತೇಲಿನಲ್ಲಿ ಅವರು “ಯಾವ ಕುಲದವರು ಮೊದಲು ಬೆನ್ಯಾಮೀನ್ಯರ ಮೇಲೆ ಧಾಳಿಮಾಡಬೇಕು” ಎಂದು ಯೆಹೋವನನ್ನು ಕೇಳಿದರು. ಅದಕ್ಕೆ ಯೆಹೋವನು, “ಯೆಹೂದ ಕುಲದವರು ಮೊದಲು ಹೋಗಬೇಕು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಇಸ್ರಾಯೇಲರು ಬೇತೇಲಿಗೆ ಹೋಗಿ, ತಮ್ಮಲ್ಲಿ ಮೊದಲು ಬೆನ್ಯಾಮೀನ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗಬೇಕಾದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಯೆಹೋವ ದೇವರು, “ಯೆಹೂದ ಗೋತ್ರದವರು ಮೊದಲು ಹೋಗಬೇಕು,” ಎಂದರು. ಅಧ್ಯಾಯವನ್ನು ನೋಡಿ |