Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:22 - ಕನ್ನಡ ಸತ್ಯವೇದವು C.L. Bible (BSI)

22 ಇಸ್ರಯೇಲರು ಪುನಃ ಧೈರ್ಯ ತಂದುಕೊಂಡು ಮೊದಲನೆಯ ದಿನ ವ್ಯೂಹಕಟ್ಟಿದ ಸ್ಥಳದಲ್ಲೇ ಮತ್ತೆ ವ್ಯೂಹಕಟ್ಟಿ ಯುದ್ಧಕ್ಕೆ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇಸ್ರಾಯೇಲ್ಯರು ತಿರುಗಿ ಧೈರ್ಯ ತಂದುಕೊಂಡು ಮೊದಲನೆಯ ದಿನದಲ್ಲಿ ವ್ಯೂಹಕಟ್ಟಿದ ಸ್ಥಳದಲ್ಲೇ ತಿರುಗಿ ವ್ಯೂಹಕಟ್ಟಿ ಯುದ್ಧಕ್ಕೆ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇಸ್ರಾಯೇಲ್ಯರು ತಿರಿಗಿ ಧೈರ್ಯ ತಂದುಕೊಂಡು ಮೊದಲನೆಯ ದಿನದಲ್ಲಿ ವ್ಯೂಹ ಕಟ್ಟಿದ ಸ್ಥಳದಲ್ಲೇ ತಿರಿಗಿ ವ್ಯೂಹಕಟ್ಟಿ ಯುದ್ಧಕ್ಕೆ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22-23 ಇಸ್ರೇಲರು ಯೆಹೋವನ ಬಳಿಗೆ ಹೋಗಿ ಸಾಯಂಕಾಲದವರೆಗೂ ಮೊರೆಯಿಟ್ಟರು. “ನಾವು ಮತ್ತೆ ಬೆನ್ಯಾಮೀನ್ಯರೊಡನೆ ಯುದ್ಧ ಮಾಡಲು ಹೋಗಬೇಕೇ? ಅವರು ನಮ್ಮ ಬಂಧುಗಳು” ಎಂದು ಅವರು ಯೆಹೋವನನ್ನು ಕೇಳಿದರು. ಅದಕ್ಕೆ ಯೆಹೋವನು, “ಹೋಗಿರಿ, ಅವರ ವಿರುದ್ಧ ಯುದ್ಧ ಮಾಡಿರಿ” ಎಂದು ಉತ್ತರಿಸಿದನು. ಇಸ್ರೇಲರು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿದರು. ಮೊದಲನೇ ದಿನದಂತೆ ಅವರು ಮತ್ತೊಮ್ಮೆ ಯುದ್ಧಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇಸ್ರಾಯೇಲರಾದ ಜನರು ಬಲಗೊಂಡು, ಮೊದಲನೆಯ ದಿವಸ ಯುದ್ಧಕ್ಕೆ ವ್ಯೂಹ ಕಟ್ಟಿದ ಸ್ಥಳದಲ್ಲಿ ತಿರುಗಿ ವ್ಯೂಹ ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:22
7 ತಿಳಿವುಗಳ ಹೋಲಿಕೆ  

ಕೆಟ್ಟದನು ಮಾಡಲು ಮನದಟ್ಟುಮಾಡಿಕೊಂಡಿಹರು I “ಗುಟ್ಟಾಗಿಡೋಣ ಉರುಲು, ಕಾಂಬರಾರು?” ಎನ್ನುತಿಹರು? II


ಆಗ ದಾವೀದನು ಆ ದೂತನಿಗೆ, “ನೀನು ಹೋಗಿ ಯೋವಾಬನಿಗೆ, ‘ವ್ಯಸನಪಡಬೇಕಾಗಿಲ್ಲ; ಕತ್ತಿ ಈ ದಿನ ಒಬ್ಬನನ್ನು ನುಂಗಿದರೆ ನಾಳೆ ಇನ್ನೊಬ್ಬನನ್ನು ನುಂಗುತ್ತದೆ. ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿ, ಎಂಬುದಾಗಿ ಅರಸರು ಆಜ್ಞಾಪಿಸುತ್ತಾರೆ’ ಎಂದು ಹೇಳಿ ಅವನನ್ನು ಧೈರ್ಯಪಡಿಸು,” ಎಂದನು.


ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಮಾತ್ರವಲ್ಲ, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು. ಆದುದರಿಂದ ಅವನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದನು.


ಬೆನ್ಯಾಮೀನ್ಯರಲ್ಲದ ಇಸ್ರಯೇಲರಲ್ಲಿ ನಾಲ್ಕು ಲಕ್ಷ ಯೋಧರು ಇದ್ದರು; ಇವರೆಲ್ಲರು ವೀರರೇ.


ಆ ದಿವಸದಲ್ಲಿ ಆಯಾ ಊರುಗಳಿಂದ ಯುದ್ಧಸನ್ನದ್ಧರಾಗಿ ಕೂಡಿಬಂದ ಬೆನ್ಯಾಮೀನ್ಯರ ಸಂಖ್ಯೆ ಇಪ್ಪತ್ತಾರು ಸಾವಿರ. ಇವರಲ್ಲದೆ ಗಿಬೆಯದಲ್ಲಿಯೇ ಏಳುನೂರು ಮಂದಿ ಯುದ್ಧವೀರರಿದ್ದರು.


ಆದಿನ ಬೆನ್ಯಾಮೀನ್ಯರು ಗಿಬೆಯದಿಂದ ಹೊರಗೆ ಬಂದು ಇಸ್ರಯೇಲರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ನೆಲಕ್ಕುರುಳಿಸಿದರು.


(ಇಸ್ರಯೇಲರು ಹೋಗಿ ಸರ್ವೇಶ್ವರನ ಮುಂದೆ ದುಃಖಿಸುತ್ತಾ, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೆ?” ಎಂದು ಕೇಳಲು ಅವರು, “ಹೋಗಿ ಯುದ್ಧಮಾಡಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು