Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:23 - ಕನ್ನಡ ಸತ್ಯವೇದವು C.L. Bible (BSI)

23 (ಇಸ್ರಯೇಲರು ಹೋಗಿ ಸರ್ವೇಶ್ವರನ ಮುಂದೆ ದುಃಖಿಸುತ್ತಾ, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೆ?” ಎಂದು ಕೇಳಲು ಅವರು, “ಹೋಗಿ ಯುದ್ಧಮಾಡಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇಸ್ರಾಯೇಲ್ಯರು ಹೋಗಿ ಯೆಹೋವನ ಮುಂದೆ ಅಳುತ್ತಾ, “ನಾವು ತಿರುಗಿ ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೋ?” ಎಂದು ಕೇಳಲು, ಆತನು, “ಹೋಗಿ ಯುದ್ಧಮಾಡಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 (ಇಸ್ರಾಯೇಲ್ಯರು ಹೋಗಿ ಯೆಹೋವನ ಮುಂದೆ ಅಳುತ್ತಾ - ನಾವು ತಿರಿಗಿ ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೋ ಎಂದು ಕೇಳಲು ಆತನು - ಹೋಗಿ ಯುದ್ಧಮಾಡಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇಸ್ರಾಯೇಲರು ಯೆಹೋವ ದೇವರ ಬಳಿಗೆ ಹೋಗಿ, ಅವರ ಮುಂದೆ ಸಂಜೆಯವರೆಗೆ ಅತ್ತು, “ನಮ್ಮ ಸಹೋದರರಾದ ಬೆನ್ಯಾಮೀನ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗಬೇಕೋ?” ಎಂದು ಯೆಹೋವ ದೇವರನ್ನು ಕೇಳಿದರು. ಅದಕ್ಕೆ ಯೆಹೋವ ದೇವರು, “ಅವರ ಮೇಲೆ ಹೋಗಿರಿ,” ಎಂದರು. ಎರಡನೆಯ ದಿವಸದಲ್ಲಿ ಇಸ್ರಾಯೇಲರು ಬೆನ್ಯಾಮೀನ್ಯರ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:23
14 ತಿಳಿವುಗಳ ಹೋಲಿಕೆ  

“ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”


ಆಗ ಯೆಹೋಶುವನು ಮತ್ತು ಇಸ್ರಯೇಲರ ಹಿರಿಯರು ದುಃಖ ತಾಳಲಾರದೆ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡು ಸಾಯಂಕಾಲದವರೆಗೆ ಸರ್ವೇಶ್ವರನ ಮಂಜೂಷದ ಮುಂದೆ ಅಧೋಮುಖರಾಗಿ ಬಿದ್ದಿದ್ದರು.


ಇಸ್ರಯೇಲರು ಬೇತೇಲಿಗೆ ಹೋಗಿ, ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ದೇವರಾದ ಸರ್ವೇಶ್ವರನನ್ನು ಕೇಳಲು ಅವರು, “ಮೊದಲು ಯೆಹೂದಕುಲದವರು ಹೋಗಲಿ,” ಎಂದು ಹೇಳಿದರು.


ಯೆಹೋಶುವನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನೀವು ಈ ಜನರನ್ನು ಜೋರ್ಡನ್ ನದಿ ದಾಟಿಸಿದ್ದೇಕೆ? ನಮ್ಮನ್ನು ಅಮೋರಿಯರ ಕೈಗೊಪ್ಪಿಸಿ ನಾಶಮಾಡಬೇಕೆಂದಿರುವಿರಾ? ನಾವು ಇಷ್ಟೇ ಸಾಕೆಂದು ಜೋರ್ಡನ್ ನದಿಯ ಆಚೆ ಕಡೆಯಲ್ಲೇ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.


ಇಸ್ರಯೇಲರು ಪುನಃ ಧೈರ್ಯ ತಂದುಕೊಂಡು ಮೊದಲನೆಯ ದಿನ ವ್ಯೂಹಕಟ್ಟಿದ ಸ್ಥಳದಲ್ಲೇ ಮತ್ತೆ ವ್ಯೂಹಕಟ್ಟಿ ಯುದ್ಧಕ್ಕೆ ನಿಂತರು.


ಆದ್ದರಿಂದ ಅವರು ಎರಡನೆಯ ದಿನದಲ್ಲಿ ಯುದ್ಧಕ್ಕೆ ಸಿದ್ಧರಾಗಿ ಬೆನ್ಯಾಮೀನ್ಯರ ಸಮೀಪಕ್ಕೆ ಬಂದರು.)


ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ಈ ವರ್ತಮಾನವನ್ನು ತಿಳಿಸಿದರು. ಎಲ್ಲರೂ ಗಟ್ಟಿಯಾಗಿ ಅಳತೊಡಗಿದರು.


ಯೆಹೋಶುವನು ಮರಣಹೊಂದಿದ ಬಳಿಕ ಇಸ್ರಯೇಲರು ಕಾನಾನ್ಯರೊಡನೆ ಯುದ್ಧಮಾಡಲು ತಮ್ಮಲ್ಲಿ ಯಾವ ಕುಲ ಮುಂದಾಗಿ ಹೋಗಬೇಕೆಂದು ಸರ್ವೇಶ್ವರಸ್ವಾಮಿಯನ್ನು ವಿಚಾರಿಸಿದರು.


ಅವರು ಬೇತೇಲಿಗೆ ಬಂದು ಸಾಯಂಕಾಲದವರೆಗೆ ದೇವರ ಮುಂದೆ ಕುಳಿತು ಗಟ್ಟಿಯಾಗಿ ಅಳುತ್ತಾ


ಅಂತೆಯೇ ಅವರು ಅಲ್ಲಿ ಕೂಡಿಬಂದು, ನೀರು ಸೇದಿ ಸರ್ವೇಶ್ವರನ ಮುಂದೆ ಹೊಯ್ದು, ಆ ದಿವಸ ಉಪವಾಸವಿದ್ದು, ದ್ರೋಹಿಗಳಾಗಿದ್ದೇವೆಂದು ಸರ್ವೇಶ್ವರನಿಗೆ ಅರಿಕೆಮಾಡಿದರು. ಸಮುವೇಲನು ಮಿಚ್ಪೆಯಲ್ಲಿ ಇಸ್ರಯೇಲರ ವ್ಯಾಜ್ಯಗಳನ್ನು ತೀರಿಸಿದನು.


ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನಗೆದುರಾಗುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡು ಇರುವರು.


ಸೂರ್ಯಾಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು, “ಸೂರ್ಯನು ಮುಳುಗುವ ಮೊದಲು ನಾನು ರೊಟ್ಟಿಯನ್ನಾಗಲಿ ಬೇರೆ ಯಾವ ಆಹಾರವನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದು ಮಾಡಲಿ,” ಎಂದು ಆಣೆಯಿಟ್ಟು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು