Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:25 - ಕನ್ನಡ ಸತ್ಯವೇದವು C.L. Bible (BSI)

25 ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯದಿಂದ ಹೊರಗೆ ಬಂದು ಇಸ್ರಯೇಲರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರನ್ನು ನೆಲಕ್ಕೆ ಬೀಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರನ್ನು ನೆಲಕ್ಕೆ ಉರುಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರನ್ನು ನೆಲಕ್ಕೆ ಬೀಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಎರಡನೆಯ ದಿನವೂ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲರ ಸೈನ್ಯದ ಮೇಲೆ ಧಾಳಿಮಾಡಲು ಗಿಬೆಯ ಪಟ್ಟಣದಿಂದ ಹೊರಗೆ ಬಂತು. ಈ ಸಲ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲರ ಹದಿನೆಂಟು ಸಾವಿರ ಜನರನ್ನು ಕೊಂದುಹಾಕಿತು. ಇಸ್ರೇಲ್ ಸೈನ್ಯದ ಆ ಜನರೆಲ್ಲಾ ತರಬೇತಿ ಪಡೆದ ಸೈನಿಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯಾದಿಂದ ಹೊರಗೆ ಬಂದು ಇಸ್ರಾಯೇಲರಲ್ಲಿ ಖಡ್ಗ ಹಿಡಿಯುವ ಹದಿನೆಂಟು ಸಾವಿರ ಜನರನ್ನು ನೆಲಕ್ಕೆ ಉರುಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:25
11 ತಿಳಿವುಗಳ ಹೋಲಿಕೆ  

ಆದಿನ ಬೆನ್ಯಾಮೀನ್ಯರು ಗಿಬೆಯದಿಂದ ಹೊರಗೆ ಬಂದು ಇಸ್ರಯೇಲರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ನೆಲಕ್ಕುರುಳಿಸಿದರು.


ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!


ನಮ್ಮ ಅಕ್ರಮ ನಡತೆ ದೇವರ ನ್ಯಾಯನೀತಿಯನ್ನು ಮತ್ತಷ್ಟು ಸ್ಪಷ್ಟವಾಗಿ ತೋರಿಸುವ ಸಾಧನವಾದರೆ ಆಗ ಏನು ಹೇಳುವುದು? ಆ ಅಕ್ರಮವಾಗಿ ದೇವರು ನಮ್ಮ ಮೇಲೆ ಕೋಪ ಕಾರಿದರೆ ಅದು ಅನ್ಯಾಯವೆಂದು ನಾವು ಹೇಳಬಹುದೆ? (ಮನುಷ್ಯನಿಗೆ ಸಹಜವಾಗಿ ಏಳುವ ಪ್ರಶ್ನೆಯಿದು)


ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ಇವೇ ಮುಗಿಲೂ ಕಾರ್ಮುಗಿಲೂ ಆತನ ಸುತ್ತಲು I ನ್ಯಾಯ-ನೀತಿ ಆತನ ಗದ್ದುಗೆಯಸ್ತಿವಾರಗಳು II


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ಆದ್ದರಿಂದ ಅವರು ಎರಡನೆಯ ದಿನದಲ್ಲಿ ಯುದ್ಧಕ್ಕೆ ಸಿದ್ಧರಾಗಿ ಬೆನ್ಯಾಮೀನ್ಯರ ಸಮೀಪಕ್ಕೆ ಬಂದರು.)


ಆಗ ಎಲ್ಲ ಜನರು ಬೇತೇಲಿಗೆ ಹೋಗಿ ಅಲ್ಲಿ ಸರ್ವೇಶ್ವರನ ಮುಂದೆ ಅಳುತ್ತಾ ಕುಳಿತು, ಸಾಯಂಕಾಲದವರೆಗೆ ಉಪವಾಸಮಾಡಿದರು. ಇದಲ್ಲದೆ ಅವರು ಸರ್ವೇಶ್ವರನಿಗೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದರು.


ಕಿತ್ತು ತಿನ್ನುವ ತೋಳ ಬೆನ್ಯಾಮೀನನು ಬೆಳಿಗ್ಗೆ ತಿನ್ನುವನು ಹಿಡಿದುಕೊಂಡದುದನು ಸಂಜೆ ಹಂಚಿಕೊಳ್ಳುವನು ಕೊಳ್ಳೆಹೊಡೆದುದನು.


“ಇಸ್ರಯೇಲ್, ನೀನು ಗಿಬ್ಯದಲ್ಲಿದ್ದ ಕಾಲದಿಂದ ನನಗೆ ವಿರುದ್ಧ ಪಾಪಮಾಡುತ್ತಲೇ ಬಂದಿರುವೆ. ನಿನ್ನ ಜನರು ಪಾಪದಲ್ಲಿಯೇ ಮುಂದುವರಿಯುತ್ತಿದ್ದಾರೆ. ಗಿಬ್ಯದ ನಿವಾಸಿಗಳು ಯುದ್ಧಕ್ಕೆ ತುತ್ತಾಗಲಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು