ನ್ಯಾಯಸ್ಥಾಪಕರು 20:5 - ಕನ್ನಡ ಸತ್ಯವೇದವು C.L. Bible (BSI)5 ಆ ಊರಿನ ಜನರು ಅದೇ ರಾತ್ರಿ ನಾನು ಇಳಿದುಕೊಂಡಿದ್ದ ಮನೆಯನ್ನು ಸುತ್ತಿಕೊಂಡು ನನ್ನನ್ನು ಕೊಲ್ಲಬೇಕೆಂದಿದ್ದರು; ಮತ್ತು ನನ್ನ ಉಪಪತ್ನಿಯ ಮೇಲೆ ಅತ್ಯಾಚಾರಮಾಡಿದರು. ಆಕೆ ಸತ್ತಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ಊರಿನ ಜನರು ನನ್ನನ್ನು ಕೊಲ್ಲಬೇಕೆಂದು ಅದೇ ರಾತ್ರಿ ನಾನು ಇಳಿದುಕೊಂಡಿದ್ದ ಮನೆಯನ್ನು ಸುತ್ತಿಕೊಂಡರು, ಮತ್ತು ನನ್ನ ಉಪಪತ್ನಿಯನ್ನು ಭಂಗಪಡಿಸಿದರು, ಆಕೆಯು ಸತ್ತುಹೋದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆ ಊರಿನ ಜನರು ಅದೇ ರಾತ್ರಿ ನಾನು ಇಳುಕೊಂಡಿದ್ದ ಮನೆಯನ್ನು ಸುತ್ತಿಕೊಂಡು ನನ್ನನ್ನು ಕೊಲ್ಲಬೇಕೆಂದಿದ್ದರು; ಮತ್ತು ನನ್ನ ಉಪಪತ್ನಿಯನ್ನು ಬಹಳವಾಗಿ ಭಂಗಪಡಿಸಿದರು. ಆಕೆಯು ಸತ್ತಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೆ ರಾತ್ರಿ ಸಮಯದಲ್ಲಿ ಗಿಬೆಯ ನಗರದ ಮುಖಂಡರು ಬಂದು ನಾವು ಇಳಿದುಕೊಂಡ ಮನೆಗೆ ಮುತ್ತಿಗೆ ಹಾಕಿದರು. ಅವರು ನನ್ನನ್ನು ಕೊಲ್ಲಬೇಕೆಂದಿದ್ದರು. ಅವರು ನನ್ನ ಉಪಪತ್ನಿಯ ಮೇಲೆ ಬಲಾತ್ಕಾರ ಮಾಡಿದರು; ಆಗ ಅವಳು ಸತ್ತುಹೋದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದರೆ ಗಿಬೆಯ ಪಟ್ಟಣದವರು ನನಗೆ ವಿರೋಧವಾಗಿ ಎದ್ದು, ನಾನು ಇಳಿದಿದ್ದ ಮನೆಯನ್ನು ರಾತ್ರಿಯಲ್ಲಿ ಮುತ್ತಿಕೊಂಡು ನನ್ನನ್ನು ಕೊಲ್ಲಬೇಕೆಂದಿದ್ದರು ಮತ್ತು ನನ್ನ ಉಪಪತ್ನಿಯನ್ನು ಅತ್ಯಾಚಾರಮಾಡಿದರು. ಅವಳು ಸತ್ತುಹೋದಳು. ಅಧ್ಯಾಯವನ್ನು ನೋಡಿ |