ನ್ಯಾಯಸ್ಥಾಪಕರು 20:6 - ಕನ್ನಡ ಸತ್ಯವೇದವು C.L. Bible (BSI)6 ಅವರು ಇಸ್ರಯೇಲರಲ್ಲಿ ನಡೆಸಿದ ಇಂಥ ಕೆಟ್ಟ ಹಾಗು ಹುಚ್ಚುಗೆಲಸ ಎಲ್ಲರಿಗೂ ಗೊತ್ತಾಗಲೆಂದು ನಾನು ಆಕೆಯ ಶವವನ್ನು ತುಂಡುಮಾಡಿ ಇಸ್ರಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವರು ಇಸ್ರಾಯೇಲರಲ್ಲಿ ನಡೆಸಿದ ಇಂಥ ಕೆಟ್ಟ ಮತ್ತು ಕ್ರೂರ ಕೆಲಸವು ಎಲ್ಲರಿಗೂ ಗೊತ್ತಾಗಲೆಂದು ನಾನು ಆಕೆಯ ಶವವನ್ನು ತುಂಡುಮಾಡಿ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವರು ಇಸ್ರಾಯೇಲ್ಯರಲ್ಲಿ ನಡಿಸಿದ ಇಂಥ ಕೆಟ್ಟ ಹುಚ್ಚುಗೆಲಸವು ಎಲ್ಲರಿಗೂ ಗೊತ್ತಾಗಲೆಂದು ನಾನು ಆಕೆಯ ಶವವನ್ನು ತುಂಡುಮಾಡಿ ಇಸ್ರಾಯೇಲ್ಯರ ಎಲ್ಲಾ ಪ್ರಾಂತಗಳಿಗೆ ಕಳುಹಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಬಳಿಕ ನಾನು ನನ್ನ ಉಪಪತ್ನಿಯ ದೇಹವನ್ನು ತುಂಡುತುಂಡಾಗಿ ಕತ್ತರಿಸಿ ಇಸ್ರೇಲರ ಪ್ರತಿಯೊಂದು ಕುಲಕ್ಕೂ ಒಂದು ತುಂಡನ್ನು ಕಳುಹಿಸಿದೆ. ಹೀಗೆ ನಾವು ಪಡೆದುಕೊಂಡ ಪ್ರದೇಶಗಳಿಗೆ ಹನ್ನೆರಡು ತುಂಡುಗಳನ್ನು ಕಳುಹಿಸಿದೆ. ಇಸ್ರೇಲಿನಲ್ಲಿ ಬೆನ್ಯಾಮೀನ್ಯರು ಇಂಥ ಭಯಾನಕ ಕೃತ್ಯವನ್ನು ಮಾಡಿದ್ದಕ್ಕಾಗಿ ನಾನು ಇದನ್ನು ಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವರು ಇಸ್ರಾಯೇಲಿನಲ್ಲಿ ಇಂಥ ದುಷ್ಕಾರ್ಯವನ್ನೂ ಅತಿರೇಕದ ಕೆಲಸವನ್ನೂ ಮಾಡಿದ್ದರಿಂದ, ನಾನು ನನ್ನ ಉಪಪತ್ನಿಯನ್ನು ಹಿಡಿದು, ಅವಳನ್ನು ಕಡಿದು, ಇಸ್ರಾಯೇಲಿನ ಬಾಧ್ಯತೆಯಾದ ಎಲ್ಲಾ ಸೀಮೆಗಳಿಗೆ ಕಳುಹಿಸಿದೆನು. ನೀವೆಲ್ಲರೂ ಇಸ್ರಾಯೇಲರಾಗಿದ್ದೀರಿ. ಅಧ್ಯಾಯವನ್ನು ನೋಡಿ |