Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:9 - ಕನ್ನಡ ಸತ್ಯವೇದವು C.L. Bible (BSI)

9 ನಾವು ಚೀಟುಹಾಕೋಣ; ಅದು ಬಿದ್ದ ಪ್ರಕಾರವೇ ಗಿಬೆಯದವರಿಗೆ ವಿರುದ್ಧ ಯುದ್ಧಕ್ಕೆ ಹೋಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾವು ಚೀಟು ಹಾಕೋಣ; ಅದು ಬಿದ್ದ ಪ್ರಕಾರವೇ ಗಿಬೆಯದವರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾವು ಚೀಟು ಹಾಕೋಣ; ಅದು ಬಿದ್ದ ಪ್ರಕಾರವೇ ಗಿಬೆಯದವರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಈಗ ಗಿಬೆಯ ನಗರದ ಬಗ್ಗೆ ನಾವು ಚೀಟು ಹಾಕೋಣ. ಆ ಜನರಿಗೆ ಏನು ಮಾಡಬೇಕೆಂಬುದನ್ನು ದೇವರೇ ನಮಗೆ ತೋರಿಸಿಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈಗ ನಾವು ಗಿಬೆಯಕ್ಕೆ ಮಾಡುವುದು ಇದೇ. ಅದಕ್ಕೆ ವಿರೋಧವಾಗಿ ಚೀಟುಗಳು ಬಿದ್ದ ಪ್ರಕಾರ ಹೋಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:9
9 ತಿಳಿವುಗಳ ಹೋಲಿಕೆ  

ಅನಂತರ ಚೀಟುಹಾಕಿದರು. ಅದು ಮತ್ತೀಯನ ಪರವಾಗಿತ್ತು. ಅವನನ್ನು ಹನ್ನೊಂದು ಮಂದಿಯೊಡನೆ ಪ್ರೇಷಿತಸ್ಥಾನಕ್ಕೆ ಸೇರಿಸಿಕೊಳ್ಳಲಾಯಿತು.


ಆಗ ನಾವಿಕರು: “ನಮಗೆ ಸಂಭವಿಸಿರುವ ಈ ದುರಂತಕ್ಕೆ ಕಾರಣ ಯಾರಿರಬಹುದು? ಬನ್ನಿ, ಚೀಟುಹಾಕಿ ನೋಡೋಣ” ಎಂದು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಹಾಗೆ ಮಾಡಿದಾಗ ಚೀಟು ಯೋನನ ಹೆಸರಿಗೆ ಬಂತು.


ಅದೃಷ್ಟದ ಚೀಟನ್ನು ಕುಲುಕಿ ಮಡಲಿಗೆ ಹಾಕಬಹುದು; ಆದರೆ ತೀರ್ಪು ಸರ್ವೇಶ್ವರನ ಕೈಯಲ್ಲಿರುವುದು.


ಇಸ್ರಯೇಲರ ಪ್ರಮುಖರು ಮಾತ್ರ ಜೆರುಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತುಹತ್ತು ಮಂದಿಯಲ್ಲಿ ಒಂಬತ್ತುಮಂದಿ ತಮ್ಮ ತಮ್ಮ ಊರುಗಳಲ್ಲಿ ಇದ್ದುಕೊಂಡು, ಒಬ್ಬನು ಪವಿತ್ರ ನಗರವಾದ ಜೆರುಸಲೇಮಿನಲ್ಲಿ ವಾಸಿಸುವುದಕ್ಕಾಗಿ, ಅಲ್ಲಿಗೆ ಬರುವಂತೆ ಚೀಟುಹಾಕಿ ಗೊತ್ತುಮಾಡಿದರು.


ಈ ವರ್ಗಗಳ ವಿಷಯವಾಗಿ ಚೀಟುಹಾಕಿ ಕೆಲಸವನ್ನು ವಹಿಸುತ್ತಿದ್ದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಯಲಯದ ಅಧಿಪತಿಗಳೂ ದೈವಿಕ ಕಾರ್ಯಗಳ ಅಧ್ಯಕ್ಷರೂ ಇದ್ದುದರಿಂದ ಉಭಯ ಸಂತಾನಗಳವರು ಸಮಾನ ಸ್ಥಾನದವರಾಗಿದ್ದರು.


ಸರ್ವೇಶ್ವರಸ್ವಾಮಿ ಮೋಶೆಯ ಮೂಲಕ ಆಜ್ಞಾಪಿಸಿದಂತೆ ಜೋರ್ಡನಿನ ಪಶ್ಚಿಮದ ಕಾನಾನ್ ನಾಡನ್ನು ಚೀಟುಹಾಕಿ ಇಸ್ರಯೇಲರ ಒಂಬತ್ತುವರೆ ಕುಲದವರಿಗೆ ಸ್ವಂತ ಆಸ್ತಿಯಾಗಿ ಹಂಚಿಕೊಟ್ಟರು.


ಇದನ್ನು ಕೇಳಿ ಆ ಜನರು ಏಕಮನಸ್ಸಿನಿಂದ, “ನಮ್ಮಲ್ಲಿ ಯಾವನೂ ತನ್ನ ಗುಡಾರಕ್ಕೆ ಹೋಗಬಾರದು; ತನ್ನ ಮನೆಗೆ ಹಿಂದಿರುಗಕೂಡದು.


ಇಸ್ರಯೇಲರ ಕುಲಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಈ ಪ್ರಕಾರವೇ ಜನರನ್ನು ಆರಿಸಿಕೊಂಡು ಅವರನ್ನು ಆಹಾರ ತರುವುದಕ್ಕಾಗಿ ಕಳುಹಿಸೋಣ. ಅವರು ಬಂದ ಮೇಲೆ ಬೆನ್ಯಾಮೀನ್ಯರಾದ ಗಿಬೆಯದವರು ಇಸ್ರಯೇಲರಲ್ಲಿ ನಡೆಸಿದ ದುಷ್ಕರ್ಮಕ್ಕಾಗಿ ಅವರನ್ನು ದಂಡಿಸೋಣ,” ಎಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು