Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:25 - ಕನ್ನಡ ಸತ್ಯವೇದವು C.L. Bible (BSI)

25 ಆ ಕಾಲದಲ್ಲಿ ಇಸ್ರಯೇಲರಲ್ಲಿ ಅರಸನಿರಲಿಲ್ಲ; ಪ್ರತಿಯೊಬ್ಬನು ತನ್ನ ಮನಸ್ಸಿಗೆ ಬಂದಂತೆ ನಡೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ; ಪ್ರತಿಯೊಬ್ಬನೂ ತನ್ನ ಮನಸ್ಸಿಗೆ ಬಂದಂತೆ ನಡೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ; ಪ್ರತಿಯೊಬ್ಬನೂ ತನ್ನ ಮನಸ್ಸಿಗೆ ಬಂದಂತೆ ನಡೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಪ್ರತಿಯೊಬ್ಬನೂ ತನಗೆ ಸರಿತೋರಿದಂತೆ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆ ದಿವಸಗಳಲ್ಲಿ ಇಸ್ರಾಯೇಲಿನಲ್ಲಿ ಅರಸನು ಇರಲಿಲ್ಲ. ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:25
13 ತಿಳಿವುಗಳ ಹೋಲಿಕೆ  

“ನಾವು ಈಗ ಈ ಸ್ಥಳದಲ್ಲಿ ವರ್ತಿಸುವಂತೆ ಎಲ್ಲರೂ ನಡೆದುಕೊಳ್ಳಬೇಕೇ ವಿನಃ ತಮ್ಮ ತಮ್ಮ ಮನಸ್ಸಿಗೆ ತೋರಿದಂತೆ ವರ್ತಿಸಕೂಡದು;


ಆ ಕಾಲದಲ್ಲಿ ಇಸ್ರಯೇಲರಲ್ಲಿ ಅರಸನಿರಲಿಲ್ಲ. ಪ್ರತಿಯೊಬ್ಬನು ಮನಸ್ಸಿಗೆ ಬಂದಹಾಗೆ ನಡೆಯುತ್ತಾ ಇದ್ದನು.


ನಿನ್ನ ಸ್ವಂತ ಬುದ್ಧಿಯನ್ನೇ ನೆಚ್ಚಿಕೊಂಡಿರದಿರು; ಪೂರ್ಣ ಮನಸ್ಸಿನಿಂದ ಸರ್ವೇಶ್ವರನಲ್ಲಿ ನಂಬಿಕೆಯಿಡು.


ಒಂದು ಮಾರ್ಗ ಒಬ್ಬನಿಗೆ ನೇರವೆಂದು ತೋರಬಹುದು; ಕೊನೆಗೆ ಅದು ಮರಣಕ್ಕೊಯ್ಯುವ ಹಾದಿಯಾಗಬಹುದು.


ಆ ಕಾಲದಲ್ಲಿ ಇಸ್ರಯೇಲರಿಗೆ ಅರಸನಿರಲಿಲ್ಲ. ಎಫ್ರಯಿಮ್ ಪರ್ವತ ಪ್ರದೇಶದ ಒಂದು ಮೂಲೆಯಲ್ಲಿ ಯಾರೋ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೆತ್ಲೆಹೇಮಿನವಳಾದ ಒಬ್ಬ ಸ್ತ್ರೀ ಅವನಿಗೆ ಉಪಪತ್ನಿಯಾಗಿದ್ದಳು.


ಆ ಕಾಲದಲ್ಲಿ ಇಸ್ರಯೇಲರಿಗೆ ಅರಸನಿರಲಿಲ್ಲ. ದಾನ್ ಕುಲದವರಿಗೆ ಆವರೆಗೂ ಇಸ್ರಯೇಲರಲ್ಲಿ ಆಸ್ತಿಪಾಸ್ತಿ ಸಿಕ್ಕದೆ ಇದ್ದುದರಿಂದ ಅವರು ತಮಗಾಗಿ ವಾಸಸ್ಥಳವನ್ನು ಹುಡುಕುತ್ತಿದ್ದರು.


“ನಮ್ಮ ತುಟಿಗೆ ಹತೋಟಿ ಬೇಕಿಲ್ಲ; ನಾಲಗೆಯೇ ಗೆಲುವಿನ ಮೂಲ I ನಮಗೊಡೆಯನ ಅವಶ್ಯವಿಲ್ಲ” ಎಂದವರಾಡುವುದು ಸಲ್ಲ II


ಆ ಐದು ಮಂದಿ ಹೊರಟು ಲಯಿಷಿಗೆ ಬಂದರು. ಇಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖಸಮಾಧಾನಗಳಿಂದ ಜೀವಿಸುತ್ತಾರೆ; ಇವರನ್ನು ಅಡಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ. ಇವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಬಳಕೆಯಿಲ್ಲದವರು ಎಂಬುದನ್ನು ತಿಳಿದುಕೊಂಡು ಹಿಂದಿರುಗಿ,


ಅನಂತರ ಇಸ್ರಯೇಲರು ತಮ್ಮ ತಮ್ಮ ಕುಲಗೋತ್ರಗಳಿಗೆ ಸೊತ್ತಾಗಿ ಸಿಕ್ಕಿದ ಪ್ರದೇಶಗಳಿಗೆ ಹಿಂದಿರುಗಿ ಹೋದರು.


ತೊಳಲುತ್ತಿದ್ದೆವು ನಾವೆಲ್ಲರು ದಾರಿತಪ್ಪಿದ ಕುರಿಗಳಂತೆ ಹಿಡಿಯುತ್ತಿದ್ದನು ಪ್ರತಿಯೊಬ್ಬನು ತನ್ನ ತನ್ನ ದಾರಿಯನ್ನೆ. ನಮ್ಮೆಲ್ಲರ ದೋಷವನು ಸರ್ವೇಶ್ವರ ಹಾಕಿದ್ದ ಆತನ ಮೇಲೆ.


“ಜನರು ಮನಬಂದ ಮಾರ್ಗವನ್ನು ಅನುಸರಿಸುತ್ತಾರೆ; ತಮ್ಮ ಅಸಹ್ಯಕಾರ್ಯಗಳಲ್ಲಿ ಅತ್ಯಾನಂದಪಡುತ್ತಾರೆ. ಹೋರಿಯನ್ನು ಬಲಿಕೊಡುವವನು ನರಬಲಿಯನ್ನು ಕೊಡುತ್ತಾನೆ; ಕುರಿ ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ. ಕಾಣಿಕೆ ಒಪ್ಪಿಸುವವನು ಹಂದಿಯ ನೆತ್ತರನ್ನು ಅರ್ಪಿಸುತ್ತಾನೆ; ಧೂಪಾರತಿ ಎತ್ತುವವನು ವಿಗ್ರಹಾರಾಧನೆಯನ್ನು ಮಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು