Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:3 - ಕನ್ನಡ ಸತ್ಯವೇದವು C.L. Bible (BSI)

3 “ಸರ್ವೇಶ್ವರಾ, ಇಸ್ರಯೇಲರ ದೇವರೇ, ನಮ್ಮಲ್ಲಿ ಹೀಗೆ ಏಕಾಯಿತು? ಇಸ್ರಯೇಲರ ಒಂದು ಕುಲ ಹಾಳಾಗಿ ಹೋಯಿತಲ್ಲಾ!” ಎಂದು ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಯೆಹೋವನೇ, ಇಸ್ರಾಯೇಲ್ಯರ ದೇವರೇ, ನಮ್ಮಲ್ಲಿ ಹೀಗೆ ಯಾಕೆ ಆಯಿತು? ಇಸ್ರಾಯೇಲರ ಒಂದು ಕುಲವು ಹಾಳಾಗಿ ಹೋಯಿತಲ್ಲಾ” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನೇ, ಇಸ್ರಾಯೇಲ್ಯರ ದೇವರೇ, ನಮ್ಮಲ್ಲಿ ಹೀಗೆ ಯಾಕೆ ಆಯಿತು? ಇಸ್ರಾಯೇಲ್ಯರ ಒಂದು ಕುಲವು ಹಾಳಾಗಿ ಹೋಯಿತಲ್ಲಾ ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು ದೇವರಿಗೆ, “ಯೆಹೋವನೇ, ನೀನು ಇಸ್ರೇಲರ ದೇವರು. ನಮಗೆ ಇಂಥ ಭಯಾನಕ ಪರಿಸ್ಥಿತಿ ಏಕೆ ಉಂಟಾಯಿತು? ಇಸ್ರೇಲಿನ ಒಂದು ಕುಲವು ನಾಶವಾಯಿತಲ್ಲಾ?” ಎಂದು ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ಈ ಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರ ಕೊರತೆಯಾದದ್ದೇನು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:3
9 ತಿಳಿವುಗಳ ಹೋಲಿಕೆ  

ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಿಮ್ಮೊಡನೆ ವ್ಯಾಜ್ಯ ನನಗೆ ಅಸಾಧ್ಯ. ಆದರೂ ನಿಮ್ಮೊಡನೆ ಚರ್ಚಿಸಬೇಕೆಂದಿರುವೆ ಈ ನ್ಯಾಯ : ದುರುಳರ ಬಾಳು ಬೆಳಗುತ್ತಿರುವುದು ಏಕೆ? ದ್ರೋಹಿಗಳೆಲ್ಲರು ನೆಮ್ಮದಿಯಾಗಿರುವುದು ಏಕೆ?


ಸ್ವಾಮೀ, ನಾವು ನಿಮ್ಮ ಮಾರ್ಗ ತಪ್ಪಿ ಅಲೆಯುವಂತೆ ಮಾಡುತ್ತೀರಿ, ಏಕೆ? ನಿಮಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿಣಪಡಿಸುವುದು ಏಕೆ? ನಿಮ್ಮ ಶರಣರ ನಿಮಿತ್ತ, ನಿಮಗೆ ಬಾಧ್ಯರಾದ ಕುಲಗಳ ನಿಮಿತ್ತ, ನಮಗೆ ಪ್ರಸನ್ನಚಿತ್ತರಾಗಿರಿ.


ಮನುಷ್ಯನ ಬಾಳಿನ ಅಳಿವು ತನ್ನ ಮೂರ್ಖತನದಿಂದ; ಆದರೂ ಅವನು ಸಿಡಿದೇಳುವುದು ಸರ್ವೇಶ್ವರನ ವಿರುದ್ಧ.


ಕಿತ್ತುಹಾಕಿದೆಯೇಕೆ ಅದರ ಬೇಲಿಯನು? I ತರಿದುಬಿಡುವವರಲ್ಲವೆ ದಾರಿಗರು ಅದನು? II


ಹೇ ದೇವಾ, ನಮ್ಮ ನೀಪರಿ ವರ್ಜಿಸಿಬಿಟ್ಟೆ ಏಕೆ? I ನೀ ಪಾಲಿಪ ಮಂದೆಯ ಮೇಲೀಗ ಉರಿಗೋಪವೇಕೆ? II


‘ಸರ್ವೇಶ್ವರ ಈ ನಾಡಿಗೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣ ಏನಿರಬಹುದು?’ ಎಂದು ವಿಚಾರಿಸುವರು.


ಅವರು ಬೇತೇಲಿಗೆ ಬಂದು ಸಾಯಂಕಾಲದವರೆಗೆ ದೇವರ ಮುಂದೆ ಕುಳಿತು ಗಟ್ಟಿಯಾಗಿ ಅಳುತ್ತಾ


ಮರುದಿವಸ ಅವರು ಬೆಳಿಗ್ಗೆ ಎದ್ದು ಬಲಿಪೀಠವನ್ನು ಕಟ್ಟಿ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು