Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:6 - ಕನ್ನಡ ಸತ್ಯವೇದವು C.L. Bible (BSI)

6 ಇಸ್ರಯೇಲರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಅವಸ್ಥೆಯನ್ನು ನೆನೆಸಿ ದುಃಖದಿಂದ, “ಅಯ್ಯೋ, ಇಸ್ರಯೇಲರಾದ ನಮ್ಮಲ್ಲಿ ಒಂದು ಕುಲ ಕಡಿಮೆಯಾಯಿತಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಸ್ರಾಯೇಲರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಅವಸ್ಥೆಯನ್ನು ಕಂಡು ದುಃಖದಿಂದ, “ಅಯ್ಯೋ, ಇಸ್ರಾಯೇಲರಾದ ನಮ್ಮಲ್ಲಿ ಒಂದು ಕುಲವು ಕಡಿಮೆಯಾಯಿತಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಸ್ರಾಯೇಲ್ಯರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಅವಸ್ಥೆಯನ್ನು ನೆನಸಿ ದುಃಖದಿಂದ - ಅಯ್ಯೋ, ಇಸ್ರಾಯೇಲ್ಯರಾದ ನಮ್ಮಲ್ಲಿ ಒಂದು ಕುಲವು ಕಡಮೆಯಾಯಿತಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ಇಸ್ರೇಲರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಬಗ್ಗೆ ವ್ಯಥೆಪಟ್ಟರು. ಅವರು, “ಇಂದು ಇಸ್ರೇಲರಿಂದ ಒಂದು ಕುಲವು ಇಲ್ಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಇಸ್ರಾಯೇಲರು ತಮ್ಮ ಸಹೋದರರಾದ ಬೆನ್ಯಾಮೀನನ ವಿಷಯವಾಗಿ ಪಶ್ಚಾತ್ತಾಪಪಟ್ಟು, “ಈ ಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರವು ಕಡಿದು ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:6
8 ತಿಳಿವುಗಳ ಹೋಲಿಕೆ  

ಸರ್ವೇಶ್ವರ ನಮ್ಮಲ್ಲಿ ಒಂದು ಲೋಪವನ್ನುಂಟುಮಾಡಿದ್ದಾರೆಂದು ಇಸ್ರಯೇಲರು ಬೆನ್ಯಾಮೀನ್ಯರ ವಿಷಯದಲ್ಲಿ ದುಃಖಪಟ್ಟರು.


“ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ?


ಆಗ ಅಬ್ನೇರನು ಯೋವಾಬನನ್ನು ನೋಡಿ, “ಕತ್ತಿ ಯಾವಾಗಲೂ ತಿನ್ನುತ್ತಲೇ ಇರಬೇಕೇ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೇ? ಸಹೋದರರನ್ನು ಹಿಂದಟ್ಟುವುದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವೆ?” ಎಂದನು.


(ಇಸ್ರಯೇಲರು ಹೋಗಿ ಸರ್ವೇಶ್ವರನ ಮುಂದೆ ದುಃಖಿಸುತ್ತಾ, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೆ?” ಎಂದು ಕೇಳಲು ಅವರು, “ಹೋಗಿ ಯುದ್ಧಮಾಡಿ,” ಎಂದರು.


ಆಕೆಯನ್ನು ಕಾಣುತ್ತಲೆ ಅವನು ದುಃಖತಾಳಲು ಆಗದೆ ಬಟ್ಟೆಯನ್ನು ಹರಿದುಕೊಂಡು, “ಅಯ್ಯೋ ನನ್ನ ಮಗಳೇ, ನೀನು ನನ್ನನ್ನು ಎಂಥಾ ಯಾತನೆಗೆ ಈಡುಮಾಡಿದೆ; ನನಗೆ ಮಹಾಸಂಕಟವನ್ನುಂಟುಮಾಡಿದೆ! ನಾನು ಬಾಯಾರೆ ಸರ್ವೇಶ್ವರನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾಗದು,” ಎಂದು ಕೂಗಿಕೊಂಡನು.


ಮತ್ತು ಸರ್ವೇಶ್ವರನ ಮುಂದೆ ಸಭೆ ನೆರೆದಾಗ ಅದಕ್ಕೆ ಬಾರದೆ ಇದ್ದಂಥ ಇಸ್ರಯೇಲರು ಯಾರಾರೆಂದು ವಿಚಾರಮಾಡಿದರು. ಏಕೆಂದರೆ ಮಿಚ್ಫೆಯಲ್ಲಿ, “ಸರ್ವೇಶ್ವರನ ಸನ್ನಿಧಿಗೆ ಬಾರದವರನ್ನು ಕೊಂದುಹಾಕುವೆವೆಂದು ಆಣೆಯಿಟ್ಟು ಅವರು ದೃಢಪ್ರಮಾಣ ಮಾಡಿದ್ದರು.


ಜೀವದಿಂದುಳಿದವರಿಗೆ ಹೆಂಡತಿಯರನ್ನು ದೊರಕಿಸಿಕೊಡುವುದು ಹೇಗೆ? ನಮ್ಮ ಹೆಣ್ಣುಗಳನ್ನು ಅವರಿಗೆ ಕೊಡುವುದಿಲ್ಲವೆಂದು ಸರ್ವೇಶ್ವರನ ಹೆಸರಿನಲ್ಲಿ ಆಣೆಯಿಟ್ಟೆವಲ್ಲಾ,” ಎಂದು ಗೋಳಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು