Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:5 - ಕನ್ನಡ ಸತ್ಯವೇದವು C.L. Bible (BSI)

5 ಇಸ್ರಯೇಲರು ಕಾನಾನ್ಯ, ಹಿತ್ತಿಯ, ಅಮೋರಿಯ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ಎಂಬೀ ಜನಾಂಗಗಳ ಮಧ್ಯದಲ್ಲಿ ವಾಸಮಾಡುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇಸ್ರಾಯೇಲರು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಎಂಬೀ ಜನಾಂಗಗಳ ಮಧ್ಯದಲ್ಲಿ ವಾಸಮಾಡುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇಸ್ರಾಯೇಲ್ಯರು ಕಾನಾನ್ಯ, ಹಿತ್ತಿಯ, ಅಮೋರಿಯ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ಎಂಬೀ ಜನಾಂಗಗಳ ಮಧ್ಯದಲ್ಲಿ ವಾಸಮಾಡುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇಸ್ರೇಲರು ಕಾನಾನ್ಯ, ಹಿತ್ತಿಯ, ಅಮೋರಿಯ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ಜನಾಂಗಗಳೊಡನೆ ವಾಸಮಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇಸ್ರಾಯೇಲರು ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜೀಯರ, ಹಿವ್ವಿಯರ, ಯೆಬೂಸಿಯರ ಮಧ್ಯದಲ್ಲಿ ವಾಸವಾಗಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:5
16 ತಿಳಿವುಗಳ ಹೋಲಿಕೆ  

ಆದಕಾರಣ ಅವರನ್ನು ಈಜಿಪ್ಟಿನವರ ಕೈಯಿಂದ ಬಿಡಿಸುವುದಕ್ಕು ಮತ್ತು ಆ ದೇಶದಿಂದ ಹೊರತಂದು ಹಾಲೂ ಜೇನೂ ಹರಿಯುವ ಸವಿಸ್ತಾರವಾದ ಒಳ್ಳೆಯ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಆಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ನಡೆಸಿಕೊಂಡು ಹೋಗುವುದಕ್ಕು ಇಳಿದು ಬಂದಿದ್ದೇನೆ.


ಆತ ಪ್ರಾಮಾಣಿಕ ವ್ಯಕ್ತಿಯೆಂದು ಗುರುತಿಸಿದಿರಿ ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಯೆಬೂಸಿಯರ, ಗಿರ್ಗಾಷಿಯರ ನಾಡನು ಆತನ ಸಂತಾನದವರಿಗೆ ವಾಗ್ದಾನ ಮಾಡಿದಿರಿ. ಅಂತೆಯೇ ಸತ್ವ ಸ್ವರೂಪರಾದ ನೀವು ಅದನು ಈಡೇರಿಸಿದಿರಿ.


ಜೋರ್ಡನ್ ಹೊಳೆಯ ಆಚೆ ಬೆಟ್ಟದ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು.


“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿ, ಸಂಖ್ಯೆಯಲ್ಲೂ ಶಕ್ತಿಯಲ್ಲೂ ನಿಮ್ಮನ್ನು ಮೀರುವ ಜನಾಂಗಗಳನ್ನು ಅಲ್ಲಿಂದ ನಿಮ್ಮ ಮುಂದೆಯೆ ಹೊರಡಿಸುವರು.


ಈಜಿಪ್ಟಿನಲ್ಲಿ ನಿಮಗುಂಟಾಗಿ ಇರುವ ಸಂಕಷ್ಟಗಳಿಂದ ನಿಮ್ಮನ್ನು ಪಾರುಮಾಡಿ ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಬರಮಾಡಬೇಕೆಂದು ತೀರ್ಮಾನಿಸಿದ್ದೇನೆ’ ಎಂದು ತಿಳಿಸು.


ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳ ಬೇರೆ. ಇದೂ ಅಲ್ಲದೆ, ಆ ಕಾಲದಲ್ಲಿ ಕಾನಾನ್ಯರೂ ಪೆರಿಜೀಯರೂ ಅದೇ ನಾಡಿನಲ್ಲಿ ವಾಸವಾಗಿದ್ದರು.


ಪೂರ್ವ ಪಶ್ಚಿಮಗಳಲ್ಲಿರುವ ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಮಲೆನಾಡಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ನೋನಿನ ಬುಡದಲ್ಲಿ ಮಿಚ್ಪಾನಾಡಿನಲ್ಲಿದ್ದ ಹಿವ್ವಿಯರು ಇವರಿಗೂ ಹೇಳಿಕಳಿಸಿದನು.


ಅದೂ ಅಲ್ಲದೆ ನೀವು ನಿಮ್ಮ ಗಂಡು ಮಕ್ಕಳಿಗೆ ಅವರಲ್ಲಿ ಹೆಣ್ಣುಗಳನ್ನು ತೆಗೆದುಕೊಳ್ಳುವುದಕ್ಕೆ ಆಸ್ಪದವುಂಟಾಗುವುದು. ಅನಂತರ ಆ ಸೊಸೆಯಂದಿರು ತೌರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನು ಅನ್ಯದೇವರುಗಳ ಪೂಜೆಯೆಂಬ ವ್ಯಭಿಚಾರಕ್ಕೆ ಎಳೆಯಬಹುದು. ಆದ್ದರಿಂದ ಎಚ್ಚರಿಕೆಯಾಗಿರಿ.


ದಕ್ಷಿಣ ಪ್ರಾಂತದಲ್ಲಿ ಅಮಾಲೇಕ್ಯರು, ಮಲೆನಾಡಿನಲ್ಲಿ ಹಿತ್ತಿಯರು ಯೆಬೂಸಿಯರು ಹಾಗು ಅಮೋರಿಯರು ಮತ್ತು ಸಮುದ್ರ ತೀರದಲ್ಲಿ ಹಾಗೂ ಜೋರ್ಡನ್ ನದಿಯ ಪರಿಸರದಲ್ಲಿ ಕಾನಾನ್ಯರು ವಾಸವಾಗಿದ್ದಾರೆ,” ಎಂದು ವರದಿ ಮಾಡಿದರು.


ಅವರು ಒಪ್ಪಿ ಯೆಹೂದ ಕುಲದವರ ಜೊತೆ ಯುದ್ಧಕ್ಕೆ ಹೋದರು. ಸರ್ವೇಶ್ವರ ಕಾನಾನ್ಯರನ್ನು ಹಾಗು ಪೆರಿಜ್ಜೀಯರನ್ನು ಅವರ ಕೈವಶ ಮಾಡಲು ಅವರು ಹತ್ತುಸಾವಿರ ಶತ್ರುಗಳನ್ನು ಬೆಜೆಕಿನಲ್ಲಿ ಸೋಲಿಸಿದರು.


ಅದೋನೀಬೆಜೆಕನನ್ನು ಅಲ್ಲಿ ಎದುರುಗೊಂಡು ಯುದ್ಧಮಾಡಿ ಸೋಲಿಸಿದರು.


ಇಸ್ರಯೇಲರು ಸಂಹರಿಸದೆ ಉಳಿಸಿದ ಅನ್ಯಜನರನ್ನೂ ಕಾನಾನ್ ದೇಶದಲ್ಲಿ ಉಳಿದಿದ್ದ ಅಮೋರಿಯ, ಹಿತ್ತಿಯ, ಪೆರಿಜ್ಜೀಯ, ಹಿವ್ವೀಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು