Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:8 - ಕನ್ನಡ ಸತ್ಯವೇದವು C.L. Bible (BSI)

8 ಆದುದರಿಂದ ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮ್ ಎಂಬವನಿಗೆ ಮಾರಿಬಿಟ್ಟರು. ಈ ಕಾರಣ ಇಸ್ರಯೇಲರು ಎಂಟು ವರ್ಷಗಳವರೆಗೆ ಅವನಿಗೆ ಗುಲಾಮರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದ್ದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು, ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ನಹರಾಯಿಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬುವವನಿಗೆ ಮಾರಿಬಿಟ್ಟನು. ಅವರು ಎಂಟು ವರ್ಷಗಳ ವರೆಗೆ ಅವನಿಗೆ ದಾಸರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬವನಿಗೆ ಮಾರಿಬಿಟ್ಟನು. ಅವರು ಎಂಟು ವರುಷಗಳವರೆಗೆ ಅವನಿಗೆ ದಾಸರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇಸ್ರೇಲರ ಮೇಲೆ ಯೆಹೋವನು ಕೋಪಿಸಿಕೊಂಡಿದ್ದನು. ಹರೇಮ್‌ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬವನು ಅವರನ್ನು ಸೋಲಿಸುವುದಕ್ಕೂ ಆಳುವುದಕ್ಕೂ ಯೆಹೋವನು ಆಸ್ಪದ ಕೊಟ್ಟನು. ಇಸ್ರೇಲಿನ ಜನರು ಎಂಟು ವರ್ಷ ಆ ಅರಸನ ಅಧೀನದಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಕೋಪಗೊಂಡು, ಅವರನ್ನು ಅರಾಮ್ ನಹರೈಮ್‌ದ ಅರಸನಾದ ಕೂಷನ್ ರಿಷಾತಯಿಮನ ಕೈಗೆ ಮಾರಿಬಿಟ್ಟರು. ಇಸ್ರಾಯೇಲರು ಕೂಷನ್‌ರಿಷಾತಯಿಮ್ ಎಂಬವನಿಗೆ ಎಂಟು ವರ್ಷ ಗುಲಾಮರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:8
20 ತಿಳಿವುಗಳ ಹೋಲಿಕೆ  

ಆದ್ದರಿಂದ ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು; ಅವರನ್ನು ಕೊಳ್ಳೆಹೊಡೆಯುವವರ ಕೈಗೆ ಒಪ್ಪಿಸಿದರು. ಶತ್ರುಗಳು ಅವರನ್ನು ಸುಲಿಗೆ ಮಾಡಿದರು. ಸರ್ವೇಶ್ವರ ಅವರನ್ನು ಅಕ್ಕಪಕ್ಕದ ವೈರಿಗಳಿಗೆ ಮಾರಿಬಿಟ್ಟರು. ಆ ಶತ್ರುಗಳ ಮುಂದೆ ಇಸ್ರಯೇಲರು ನಿಲ್ಲಲಾರದೆ ಹೋದರು.


ಇಗೋ, ತಳಮಳಗೊಂಡಿವೆ ಕೂಷಾನಿನ ಗುಡಾರಗಳು ನಡುಗುತ್ತಿವೆ ಮಿದ್ಯಾನ್ ನಾಡಿನ ಡೇರೆಗಳು.


ಆಕೆ, “ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧದಿಂದ ನಿನಗೆ ಗೌರವಗಿಟ್ಟದು; ಏಕೆಂದರೆ ಸರ್ವೇಶ್ವರ ಸೀಸೆರನನ್ನು ಒಬ್ಬ ಮಹಿಳೆಗೆ ಒಪ್ಪಿಸಿಕೊಡುವರು,” ಎಂದು ಹೇಳಿ ಬಾರಾಕನೊಡನೆ ಕೆದೆಷಿಗೆ ಹೋದಳು.


ಧರ್ಮಶಾಸ್ತ್ರ ಪಾರಮಾರ್ಥಿಕವಾದುದೆಂದು ನಾವು ಬಲ್ಲೆವು. ನಾನಾದರೋ ನರಮಾನವನು; ಪಾಪಕ್ಕೆ ನನ್ನನ್ನೇ ಗುಲಾಮನನ್ನಾಗಿ ಮಾರಿಕೊಂಡವನು.


ಸರ್ವೇಶ್ವರ ಹೀಗೆನ್ನುತ್ತಾರೆ : “ವಿವಾಹ ವಿಚ್ಛೇದನಗೈದ ಗಂಡಸಿನಂತೆ ನಾನು ನಿಮ್ಮ ಜನಾಂಗವನ್ನು ಪರಿತ್ಯಜಿಸಿದುಂಟೊ? ತನ್ನ ಮಕ್ಕಳನ್ನು ಜೀತಕ್ಕೆ ಇರಿಸುವವನಂತೆ ನಾನು ನಿಮ್ಮನ್ನು ನನ್ನ ಸಾಲಗಾರರಿಗೆ ಮಾರಿದುಂಟೊ? ಇಲ್ಲ, ನೀವು ಸೆರೆವಾಸಿಗಳಾದಿರಿ ನಿಮ್ಮ ದೋಷಗಳ ನಿಮಿತ್ತ; ನಿಮ್ಮ ತಾಯಿಯನು ಬಿಡಲಾಯಿತು ನಿಮ್ಮ ದ್ರೋಹಗಳ ನಿಮಿತ್ತ.


ತೊರೆದುಬಿಟ್ಟೆ ಸ್ವಾಮೀ, ನಿನ್ನ ರೋಷವನು I ಆರಿಸಿಬಿಟ್ಟೆ ನಿನ್ನ ಕೋಪಾಗ್ನಿಯನು II


ಖಂಡಿಸಬೇಡೆನ್ನ ಪ್ರಭು, ರೋಷದಿಂದ I ದಂಡಿಸಬೇಡೆನ್ನನು ಕಡುಕೋಪದಿಂದ II


ಅವರು ತಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟರು. ಆಗ ಅವರನ್ನು ಹಾಚೋರಿನ ಸೇನಾಪತಿಯಾದ ಸೀಸೆರನಿಗೂ ಫಿಲಿಷ್ಟಿಯರಿಗೂ ಮೋವಾಬ್ ರಾಜನಿಗೂ ಮಾರಿಬಿಡಲಾಯಿತು. ಇವರು ದಂಡೆತ್ತಿ ಬಂದು ಅವರೊಡನೆ ಯುದ್ಧಮಾಡಿದರು.


ಆದ್ದರಿಂದ ಸರ್ವೇಶ್ವರನ ಕೋಪ ಇಸ್ರಯೇಲರ ಮೇಲೆ ಉರಿಯುತ್ತಲೇ ಇತ್ತು; “ಈ ಜನರ ಪೂರ್ವಜರಿಗೆ ನಾನು ಕೊಟ್ಟ ನಿಬಂಧನೆಯನ್ನು ಇವರು ಪಾಲಿಸಲಿಲ್ಲ, ನನ್ನ ಮಾತಿಗೆ ಕಿವಿಗೊಡಲಿಲ್ಲ.


ಒಬ್ಬನಿಂದ ಸಾವಿರ ಮಂದಿ ಸೋತುಹೋದುದು’ ಒಬ್ಬರಿಗಂಜಿ ಹತ್ತುಸಾವಿರ ಓಡಿಹೋದುದು, ಅವರ ಪೊರೆಬಂಡೆಯಾತ ಅವರನು ವೈರಿಗೊಪ್ಪಿಸಿದ್ದರಿಂದಲ್ಲವೆ? ಅವರ ಸರ್ವೇಶ್ವರನು ಅವರನು ಕೈಬಿಟ್ಟುದರಿಂದಲ್ಲವೆ?


ಸರ್ವೇಶ್ವರ ಅಂಥವನನ್ನು ಎಂದಿಗೂ ಕ್ಷಮಿಸರು; ಬದಲಿಗೆ ಅವನ ಮೇಲೆ ಸಿಟ್ಟುಗೊಂಡು, ತಮ್ಮ ಗೌರವವನ್ನು ಕಾಪಾಡಿಕೊಳ್ಳುವವರಾಗಿ, ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸುವರು. ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವರು.


ನಾನು ಕೋಪಗೊಂಡು ನಿಮ್ಮನ್ನು ಶತ್ರುಗಳ ಕೈಯಿಂದ ಸಂಹಾರ ಮಾಡಿಸುವೆನು. ನಿಮ್ಮ ಹೆಂಡತಿಯರು ವಿಧವೆಗಳಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.


ಇಸ್ರಯೇಲರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ ತಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟರು. ಅವರ ದೃಷ್ಟಿಯಲ್ಲಿ ದ್ರೋಹಿಗಳಾದರು.


ಇಸ್ರಯೇಲರು ಮೊರೆಯಿಟ್ಟಾಗ ಅವರನ್ನು ಬಿಡುಗಡೆ ಮಾಡಲು ಸರ್ವೇಶ್ವರ ಒಬ್ಬ ವ್ಯಕ್ತಿಯನ್ನು ಎಬ್ಬಿಸಿದರು; ಆತನೇ ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲ್.


ಸರ್ವೇಶ್ವರನ ಆತ್ಮ ಅವನ ಮೇಲೆ ಬಂದುದರಿಂದ ಅವನು ಇಸ್ರಯೇಲರಿಗೆ ನ್ಯಾಯ ದೊರಕಿಸಲು ಯುದ್ಧಕ್ಕೆ ಹೊರಟನು. ಎರಡು ನದಿಗಳ ಮಧ್ಯೆಯಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮನನ್ನು ಸರ್ವೇಶ್ವರ ಆತನ ಕೈಗೊಪ್ಪಿಸಿದ್ದರಿಂದ ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.


ಬಿಡುಕಾಸಿಗಿಂತ ಕಡೆಗಾಣಿಸಿರುವೆ ನಿನ್ನ ಪ್ರಜೆಯನು I ಲಾಭವಿಲ್ಲದವರಂತೆ ವಿಕ್ರಯಿಸಿರುವೆ ಅದನು II


ಯೌವನಾರಭ್ಯ ಶತ್ರುಕಾಡಿದ್ದು ಎಂತೆಂದು I ಇಸ್ರಯೇಲ್ ಜನಾಂಗ ವರದಿ ಮಾಡಲಿ ನಮಗಿಂದು II


ತರುವಾಯ ಆ ಸೇವಕ ತನ್ನ ಒಡೆಯನ ಒಂಟೆಗಳಲ್ಲಿ ಹತ್ತನ್ನು ಸಿದ್ಧಮಾಡಿಕೊಂಡು, ಅವನ ಆಸ್ತಿಯಿಂದ ಶ್ರೇಷ್ಠವಾದ ಒಡವೆಗಳನ್ನು ತೆಗೆದುಕೊಂಡು ಹೊರಟನು. ಎರಡು ನದಿಗಳ ಮಧ್ಯೆ ಇರುವ ಉತ್ತರ ಮೆಸಪೊಟೇಮಿಯಾ ನಾಡಿಗೆ ಬಂದನು. ಅಲ್ಲಿಂದ ನಾಹೋರನು ವಾಸಿಸಿದ್ದ ಊರನ್ನು ಮುಟ್ಟಿದನು.


ನಾನು ನಿಮ್ಮ ಮೇಲೆ ಕಡುಕೋಪಗೊಳ್ಳುವೆನು; ನೀವು ನಿಮ್ಮ ಶತ್ರುಗಳ ಮುಂದೆಯೇ ಸೋತುಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು. ಯಾರೂ ಬೆನ್ನಟ್ಟಿ ಬರದಿದ್ದರೂ ನೀವು ಹೆದರಿ ಓಡುವಿರಿ.


ಎಂತಲೆ ಒಪ್ಪಿಸಿದನವರನು ಅನ್ಯರಾಷ್ಟ್ರಗಳ ಕೈಗೆ I ಹಗೆಮಾಡುತ್ತಿದ್ದವರೇ ಅಧಿಕಾರಿಗಳಾದರವರಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು